28.5 C
Bengaluru
Monday, January 20, 2020

ಡಿ.ಕೆ. ಶಿವಕುಮಾರ್ ಬಂಧನ ಖಂಡಿಸಿ ಪ್ರತಿಭಟನೆ

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ದಾವಣಗೆರೆ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಜಯದೇವ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು, ಮಾನವ ಸರಪಳಿ ನಿರ್ಮಿಸಿ, ಟೈರ್ ಸುಟ್ಟು, ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಮಾತನಾಡಿ, ಡಿ.ಕೆ.ಶಿವಕುಮಾರ್ ಬಂಧನದ ಹಿಂದೆ ದ್ವೇಷ ರಾಜಕಾರಣ ಕೆಲಸ ಮಾಡಿದೆ ಎಂದು ಆರೋಪಿಸಿದರು.

ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರೂ, ಡಿಕೆಶಿ ಅವರನ್ನು ವಾಮಮಾರ್ಗದಿಂದ ಬಂಧಿಸಲಾಗಿದೆ. ಒತ್ತಡ ಹೇರುವ ಮೂಲಕ ಬಲವಂತವಾಗಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ದೂರಿದರು.

ಕಾಂಗ್ರೆಸ್‌ನ ಹಿರಿಯ ಮುಖಂಡ ಪಿ.ಚಿದಂಬರಂ ಅವರನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಈಗ ಡಿಕೆಶಿ ಅವರ ಬಂಧನವಾಗಿದೆ. ಕಾಂಗ್ರೆಸ್ ಸೇರಿ ಪ್ರತಿಪಕ್ಷಗಳನ್ನು ನಿರ್ನಾಮ ಮಾಡುವ ಹುನ್ನಾರ ಇದರ ಹಿಂದಿದೆ ಎಂದು ಹೇಳಿದರು.

ಕೆಪಿಸಿಸಿ ಮಾಜಿ ಕಾರ್ಯದರ್ಶಿ ಡಿ.ಬಸವರಾಜ್ ಮಾತನಾಡಿ, ದೇಶದಲ್ಲಿ ಈಗ ಅಘೋಷಿತ ತುರ್ತು ಪರಿಸ್ಥಿತಿ ಇದೆ. ಡಿ.ಕೆ.ಶಿವಕುಮಾರ್ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಮಾತನಾಡಿದರು. ಜಿಪಂ ಸದಸ್ಯ ಬಸವಂತಪ್ಪ, ಮುಖಂಡರಾದ ಎ. ನಾಗರಾಜ್, ಅಯೂಬ್ ಪೈಲ್ವಾನ್, ಸೋಮ್ಲಾಪುರದ ಹನುಮಂತಪ್ಪ, ಬಿ.ವೀರಣ್ಣ, ಬಿ.ಟಿ.ವಿಶ್ವನಾಥ್, ಖಾಲೀದ್, ಮುಜಾಹಿದ್, ಹರೀಶ್ ಕೆಂಗಲಹಳ್ಳಿ, ಆಮ್ ಆದ್ಮಿ ಪಾರ್ಟಿಯ ರಾಘವೇಂದ್ರ ಭಾಗವಹಿಸಿದ್ದರು.

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...