25.7 C
Bangalore
Sunday, December 15, 2019

ತರಗತಿಗಿಂತ ತರಬೇತಿಗಳೇ ಹೆಚ್ಚಾದವು

Latest News

ಗಾಂಧೀಜಿಯವರ ವಿಚಾರಧಾರೆ ದಾರಿದೀಪವಾಗಲಿ

ವಿಜಯಪುರ: ಗಾಂಧೀಜಿ ಅವರ ವಿಚಾರಧಾರೆಗಳು ನಮ್ಮ ಬದುಕಿಗೆ ದಾರಿ ದೀಪವಾಗಲಿ ಎಂದು ಧಾರವಾಡದ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಂಜೀವ ಕುಲಕರ್ಣಿ ಹೇಳಿದರು.ನಗರದ...

ಬಿಎಸ್‌ವೈ ವೈಟ್‌ಡ್ರೆಸ್ ರಮೇಶ ಬ್ಲ್ಯಾಕ್ ಮಾಡ್ತಾನೆ

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧರಿಸುವ ವೈಟ್ ಡ್ರೆಸ್‌ಅನ್ನು ಬ್ಲಾೃಕ್ ಮಾಡುತ್ತಾನೆ ಎಂದು ಶಾಸಕ ಸತೀಶ ಜಾರಕಿಹೊಳಿ...

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮದುಮಗಳು; ಮದುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮದುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ದಾವಣಗೆರೆ: ಶಾಲೆ ಅವಧಿಯಲ್ಲಿ ಶಿಕ್ಷಕರನ್ನು ಸರ್ಕಾರಿ ಕಾರ್ಯಕ್ರಮ, ತರಬೇತಿಗಳಿಗೆ ನಿಯೋಜಿಸದಂತೆ ಇಲಾಖೆ ಮೇಲಧಿಕಾರಿಗಳಿಗೆ ಪ್ರಸ್ತಾವನೆ ಕಳುಹಿಸಲು ಶನಿವಾರ ನಡೆದ ತಾಪಂ ಸಾಮಾನ್ಯ ಸಭೆಯಲ್ಲಿ ನಿರ್ಧರಿಸಲಾಯಿತು.

ದಾವಣಗೆರೆ ಉತ್ತರ ವಲಯದ ಶಿಕ್ಷಣಾಧಿಕಾರಿ ಉಷಾ ಕುಮಾರಿ ವರದಿ ಮಂಡಿಸುವಾಗ ಮಧ್ಯ ಪ್ರವೇಶಿಸಿದ ಸದಸ್ಯರು, ಯಾವ ಶಾಲೆಯಲ್ಲೂ ಶಿಕ್ಷಕರು ಸರಿಯಾಗಿ ಪಾಠ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಶಿಕ್ಷಕರಿಗೆ ಬೇಸಿಗೆ, ದಸರೆ ಸೇರಿ ಮೂರು ತಿಂಗಳು ರಜೆ ಇರುತ್ತದೆ. ಈ ಅವಧಿಯಲ್ಲಿ ತರಬೇತಿ, ಸಮೀಕ್ಷೆ ಇತರೆ ಸರ್ಕಾರಿ ಕಾರ್ಯಗಳಿಗೆ ಬಳಸಿಕೊಳ್ಳಲಿ. ಇದನ್ನು ಬಿಟ್ಟು ಶಾಲೆ ಅವಧಿಯಲ್ಲಿ ನಿಯೋಜಿಸಿದರೆ ಮಕ್ಕಳ ಕಲಿಕೆ ಕುಂಠಿತವಾಗುತ್ತದೆಂದು ಅಶೋಕ್ ಸೇರಿದಂತೆ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.

ಇಒ ಬಿ.ಎಂ.ದಾರುಕೇಶ್, ಶಾಲೆ ಅವಧಿ, ಪರೀಕ್ಷೆ ಇದ್ದಾಗ ಶಿಕ್ಷಕರನ್ನು ಸರ್ಕಾರಿ ಕಾರ್ಯಕ್ರಮಗಳಿಗೆ ನಿಯೋಜಿಸಬಾರದು ಎಂದು ಮೇಲಧಿಕಾರಿಗಳಿಗೆ ಪ್ರಸ್ತಾವನೆ ಕಳುಹಿಸುವಂತೆ ಸೂಚಿಸಿದರು.

ಜನಪ್ರತಿನಿಧಿಗಳು ಶಾಲೆಗೆ ಭೇಟಿ ನೀಡುವಾಗ ಅಧಿಕಾರಿಗಳಿಗೆ ತಿಳಿಸಿದರೂ ಬರುವುದಿಲ್ಲ. ಕೆಲ ಖಾಸಗಿ ಶಾಲೆಗಳಲ್ಲಿ ಪಠ್ಯ ಪುಸ್ತಕಕ್ಕಾಗಿ 2 ಸಾವಿರ, ನೋಟ್‌ಬುಕ್‌ಗಳಿಗಾಗಿ 5 ಸಾವಿರ ರೂ. ವಸೂಲಿ ಮಾಡಲಾಗುತ್ತಿದೆ. ಈ ಬಗ್ಗೆ ಮಾಹಿತಿ ಕೇಳಿದರೆ ಕೊಡುವುದಿಲ್ಲ. ಅಗತ್ಯ ಕ್ರಮ ಕೈಗೊಳ್ಳುವಂತೆ ಅಧ್ಯಕ್ಷೆ ಮಮತಾ ಸೂಚಿಸಿದರು. ಸದಸ್ಯೆ ಆಶಾ ಮುರಳಿ ಧ್ವನಿಗೂಡಿಸಿದರು. ದಕ್ಷಿಣ ವಲಯದ ಬಿಇಒ ಸಿದ್ದಪ್ಪ, ಸರ್ಕಾರಿ ಶಾಲೆಯ ಮಕ್ಕಳಿಗೆ ಇಲಾಖೆ ಡಿಪೋದಿಂದಲೇ ಪಠ್ಯಪುಸ್ತಕ ವಿತರಿಸಲಾಗುತ್ತಿದೆ ಎಂದರು.

ಉಪಾಧ್ಯಕ್ಷ ಎಚ್.ಆರ್.ಮರುಳಸಿದ್ದಪ್ಪ, ದಾವಣಗೆರೆ-ಹೊಳಲ್ಕೆರೆ ಮಾರ್ಗದ ಬಸ್‌ಗಳು ರಾಮಗೊಂಡನಹಳ್ಳಿಗೆ ಏಕೆ ನಿಲ್ಲಿಸುವುದಿಲ್ಲ ಎಂದು ಪ್ರಶ್ನಿಸಿದರು. ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಜಿ.ಎನ್.ನಾಗರಾಜ್ ಮಾತನಾಡಿ, ದಾವಣಗೆರೆ ವಿವಿಗೆ ಬಸ್ ಓಡಿಸುತ್ತಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿ ಕರೆ ಮಾಡಿದರೂ, ಡಿಪೋ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

ಬಸ್‌ಗಳು ಉದ್ದ ಇವೆ. ತಿರುವು ತೆಗೆದುಕೊಳ್ಳಲು ಕಷ್ಟ ಆಗಲಿದೆ ಎಂದು ಕೆಎಸ್ಸಾರ್ಟಿಸಿ ಸಂಚಾರ ನಿರೀಕ್ಷಕ ಈಶಪ್ಪ ಕಾರಣ ನೀಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಉಪಾಧ್ಯಕ್ಷರು, ಬಸ್ಸನ್ನು ನಾನೇ ಓಡಿಸುತ್ತೇನೆ. ನೋಡೋಣ ಬನ್ನಿ ಎಂದು ಸವಾಲು ಹಾಕಿದರು.

ವಿವಿಧ ಇಲಾಖೆಗಳ ಅಧಿಕಾರಿಗಳು ವರದಿ ಮಂಡಿಸಿದರು. ಸದಸ್ಯರಾದ ಆಲೂರು ಲಿಂಗರಾಜ್, ಮೀನಾ ಟಿ.ಶ್ರೀನಿವಾಸ್, ಲಕ್ಷ್ಮೀದೇವಿ ಪ್ರಕಾಶ್, ಎ.ಬಿ.ಹನುಮಂತಪ್ಪ, ಕೆ.ಬಿ.ಪರಮೇಶ್ವರಪ್ಪ, ಬಿ.ಜಿ.ಸಂಗಜ್ಜಗೌಡ, ಮುರುಗೇಂದ್ರಪ್ಪ ಇದ್ದರು.

ಜಿಎಸ್‌ಟಿ ವಿನಾಯಿತಿಗಾಗಿ ವಂಚನೆ: ಕೆಲವರು ಜಿಎಸ್‌ಟಿ ವಿನಾಯಿತಿ ಪಡೆಯಲು ಸಾವಯವ ಗೊಬ್ಬರದ ಹೆಸರಲ್ಲಿ ರಾಸಾಯನಿಕ ಮಾರುತ್ತಿದ್ದಾರೆಂದು ಸದಸ್ಯರು ಆರೋಪಿಸಿದರು. ಇದರ ಹತೋಟಿಗೆ ಬೆಂಗಳೂರಿನ ತಂಡ ದಾಳಿ ನಡೆಸಿ, ಕ್ರಮ ಕೈಗೊಳ್ಳುತ್ತಿದೆ ಎಂದು ಅಧಿಕಾರಿ ವಿವರಿಸಿದರು. ಪ್ರೋತ್ಸಾಹಧನಕ್ಕೆ ಪುರಸ್ಕೃತ ಅರ್ಜಿದಾರ ರೈತರಿಗೆ ಹಣ ಬರುವುದು ಖಚಿತ. ತಾಲೂಕಿನಲ್ಲಿ 6 ರೈತ ಸಂಪರ್ಕ ಕೇಂದ್ರಗಳಿದ್ದು, 43 ಗ್ರಾಪಂಗಳನ್ನು 3 ಅಧಿಕಾರಿಗಳು ನಿಭಾಯಿಸುತ್ತಿದ್ದಾರೆ ಎಂದರು.

ಸ್ಮಾರ್ಟ್‌ಸಿಟಿ ಹಣ ಕೊಳೆಗೇರಿಗೆ ಬಳಸಲಿ: ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ನಿರ್ಮಿಸಲು ಸ್ಮಾರ್ಟ್‌ಸಿಟಿ ಅನುದಾನ ಬಳಕೆಗೆ ಸದಸ್ಯ ಆಲೂರು ಲಿಂಗರಾಜ್ ಆಕ್ಷೇಪಿಸಿ, ಸಾರಿಗೆ ಸಂಸ್ಥೆ ಲಾಭದಾಯಕವಾಗಿದೆ. ಇಲಾಖೆ ಹಣದಿಂದಲೇ ಬಸ್ ನಿಲ್ದಾಣ ಮಾಡಿಕೊಳ್ಳಲಿ. ಸ್ಮಾರ್ಟ್‌ಸಿಟಿ ಅನುದಾನದಿಂದ ಕೊಳೆಗೇರಿ ಜನರ ಅಭಿವೃದ್ಧಿಗೆ ಉಪಯೋಗಿಸಲಿ ಎಂದು ಸಲಹೆ ನೀಡಿದರು. ಇದನ್ನು ಪರಿಶೀಲಿಸುವಂತೆ ಇಒ ದಾರುಕೇಶ್ ಅಧಿಕಾರಿಗೆ ಸೂಚಿಸಿದರು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...