ಜ್ಞಾನ ಧಾರೆಯೆರೆದ ಗುರುವಿಗೆ ನಮನ

Latest News

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ ಮಾತ್ರವಲ್ಲ, ಅವಳೊಂದು ಸಂದೇಶ ಸಾರುತ್ತಿದ್ದಾಳೆ…

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​...

ಮನವಿಗಾರರ ಜತೆ ಪ್ರಧಾನಿ ಮಾತುಕತೆ ಅವಧಿ 20 ನಿಮಿಷ: ಕೃಷಿಕರ ಸಮಸ್ಯೆ ಕೊಂಡೊಯ್ದ ಪವಾರ್ ಜತೆಗೆ 50 ನಿಮಿಷದ ಮಾತುಕತೆ ಯಾಕೆ?

ನವದೆಹಲಿ: ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಗಳು ದಿನಕ್ಕೊಂದು ತಿರುವು ತೆಗೆದುಕೊಳ್ಳುತ್ತಿದೆ. ಹೀಗಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್​ಸಿಪಿ ನಾಯಕ ಶರದ್ ಪವಾರ್ ನಡುವಿನ...

ಗವಿಸಿದ್ಧೇಶ್ವರ ಶ್ರೀಗಳ ಸದ್ಭಾವನಾ ಯಾತ್ರೆಗೆ ಸ್ವಾಗತ, ಸಹಬಾಳ್ವೆ, ಸಾಮರಸ್ಯ ಸಂದೇಶ ಸಾರಿದ ಶ್ರೀಗಳು

ಸಿಂಧನೂರು: ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ಬುಧವಾರ ಕೊಪ್ಪಳದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ 6ನೇ ದಿನದ ಸದ್ಭಾವನಾ ಯಾತ್ರೆ ನಡೆಸಿ ಸಹಬಾಳ್ವೆ, ಸಾಮರಸ್ಯದ ಸಂದೇಶ...

ಬಾಗೂರು, ಕರ್ಕಿಹಳ್ಳಿಯಲ್ಲಿ ಪೊಲೀಸರ ದಾಳಿ, 9 ಲಕ್ಷ ರೂ. ಮೌಲ್ಯದ ಅಕ್ರಮ ಮರಳು ವಶ

ದೇವದುರ್ಗ ಗ್ರಾಮೀಣ: ತಾಲೂಕಿನ ನದಿದಂಡೆ ಗ್ರಾಮಗಳಲ್ಲಿ ನಡೆಯುತ್ತಿದ್ದ ಮರಳು ಅಕ್ರಮ ದಂಧೆ ವಿರುದ್ಧ ಪೊಲೀಸರು ದಾಳಿ ಮುಂದುವರಿಸಿದ್ದು, ಮಂಗಳವಾರ ಸಂಜೆ ದೇವದುರ್ಗ ಹಾಗೂ...

ಹೆಬ್ಬಾಳ ಶ್ರೀಬೋಳೋಡಿ ಬಸವೇಶ್ವರ ರಥೋತ್ಸವ ಡಿ.10 ರಂದು

ಹೆಬ್ಬಾಳ ಬೃಹನ್ಮಠದ ನಾಗಭೂಷಣ ಶಿವಯೋಗಿಗಳ ಮಾಹಿತಿ | ಶ್ರೀಶೈಲ ಜಗದ್ಗುರುಗಳ ಸಾನ್ನಿಧ್ಯ ಕಂಪ್ಲಿ: ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಭಗವತ್ಪಾದರ ಸಾನ್ನಿಧ್ಯದಲ್ಲಿ, ಡಿ.10ರಂದು ಸಂಜೆ...

ದಾವಣಗೆರೆ: ಹೇಗಿದ್ದರೂ ಸಂಬಳ ಬರುತ್ತದೆ ಎಂದು ಶಾಲೆಗೆ ಸಮಯಕ್ಕೆ ಬಾರದೆ, ಅವಧಿಗೂ ಮುನ್ನವೆ ಮನೆಗೆ ತೆರಳುವ ಪ್ರವೃತ್ತಿ ಕೈಬಿಡಿ ಎಂದು ಸಂಸದ ಜಿ.ಎಂ.ಸಿದ್ದೇಶ್ವರ ಶಿಕ್ಷಕರಿಗೆ ಕಿವಿಮಾತು ಹೇಳಿದರು.

ಜಿಲ್ಲಾಡಳಿತ, ಜಿಪಂ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ತಾಯಿ ಮೊದಲ ಗುರುವಾದರೆ, ಶಿಕ್ಷಕರು ಇನ್ನೂ ಎತ್ತರದ ಗುರುಗಳಾಗಿದ್ದಾರೆ. ಸಮಾಜದಲ್ಲಿ ಅವರಿಗೆ ಹೆಚ್ಚಿನ ಜವಾಬ್ದಾರಿ ಇದೆ. ಸಮಯ ಪಾಲಿಸದಿದ್ದಲ್ಲಿ ಶಿಕ್ಷಣ ಧರ್ಮಕ್ಕೆ ಮಾಡುವ ಅಗೌರವವಾಗಿದೆ ಎಂದು ಹೇಳಿದರು.

ಪಠ್ಯ ವಿಷಯದ ಜತೆಗೆ ಉತ್ತಮ ಸಂಸ್ಕಾರ, ಸಂಸ್ಕೃತಿ ಕಲಿಸಿ. ಕ್ರೀಡೆ, ಸಂಗೀತದ ಅಭಿರುಚಿ ಬೆಳೆಸಿ. ನಿಮ್ಮ ಪಾತ್ರವನ್ನು ಶ್ರದ್ಧೆಯಿಂದ ನಿರ್ವಹಿಸಿ. ಶಿಕ್ಷಕರು ಬೋಧನೆ, ಕಾರ್ಯ ನಿರ್ವಹಣೆ, ಮಕ್ಕಳ ಕಲಿಕೆ ವಿಚಾರದಲ್ಲಿ ಪಾಲಕರೂ ಎಚ್ಚರ ವಹಿಸಬೇಕು ಎಂದರು.

ಪ್ರಾಥಮಿಕ ಮತ್ತು ಪ್ರೌಢ ಹಂತದ ಶಿಕ್ಷಣವೆ ಮಕ್ಕಳಿಗೆ ಬುನಾದಿ. ಇದು ಗಟ್ಟಿಯುತವಾಗಿದ್ದಲ್ಲಿ ಉನ್ನತ ಹಂತದ ಓದೂ ಭದ್ರವಾಗಲಿದೆ. ಶಾಲೆಗಳಲ್ಲಿ ಉತ್ತಮ ಫಲಿತಾಂಶಕ್ಕೆ ಪ್ರೇರೇಪಿಸಿ ಎಂದು ಹೇಳಿದರು.

ಜಿಪಂ ಅಧ್ಯಕ್ಷೆ ಶೈಲಜಾ ಬಸವರಾಜ್ ಮಾತನಾಡಿ, ಶಿಕ್ಷಕರು ತಮ್ಮ ಪಾತ್ರವನ್ನು ಸಮರ್ಥವಾಗಿ ನಿಭಾಯಿಸಿದರೆ ಉತ್ತಮ ಪ್ರಶಸ್ತಿ ಅರಸಿ ಬರಲಿದೆ ಎಂದರು.

ಜಿಲ್ಲೆಯ 21 ಶಿಕ್ಷಕರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜಿಪಂ ಸದಸ್ಯೆ ಗೀತಾ ಗಂಗಾಧರನಾಯ್ಕ, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಡಯಟ್ ಪ್ರಾಚಾರ್ಯ ಎಚ್.ಕೆ.ಲಿಂಗರಾಜು, ಬಿಇಒಗಳಾದ ಬಿ.ಸಿ.ಸಿದ್ದಪ್ಪ, ಕೊಟ್ರೇಶ್, ಕಚೇರಿ ಶಿಕ್ಷಣಾಧಿಕಾರಿ ನಿರಂಜನ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಪಾಲಾಕ್ಷಿ, ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ದಿಳ್ಳೆಪ್ಪ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥಯ್ಯ, ಕಾರ್ಯದರ್ಶಿ ಮುಬಾರಕ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ತಿಪ್ಪೇಶಪ್ಪ, ಕಾರ್ಯದರ್ಶಿ ಸಿದ್ದೇಶ್, ನಿವೃತ್ತ ಶಿಕ್ಷಕ ಶಿವಾನಾಯ್ಕ ಇದ್ದರು.

ಗಮನ ಸೆಳೆದ ಚಿತ್ರಕಲೆ: ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಸಹಯೋಗದಲ್ಲಿ 28 ಚಿತ್ರಕಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಪ್ರದರ್ಶಿಸಿದ 140 ಕಲಾಕೃತಿಗಳು ಗಮನ ಸೆಳೆದವು. ಭಾವಚಿತ್ರ, ಲ್ಯಾಂಡ್‌ಸ್ಕೇಪ್, ವಚನಾಧರಿತ ಪೇಂಟಿಂಗ್ಸ್, ನವ್ಯಕಲೆ, ಲೈನ್ ಡ್ರಾಯಿಂಗ್ಸ್, ಸಾಂಪ್ರದಾಯಿಕ ಕಲಾ ಶೈಲಿಯ ಚಿತ್ರಗಳಿದ್ದವು. ಚಿತ್ರಕಲಾ ಶಿಕ್ಷಕ ಶಾಂತಯ್ಯ ಪರಡಿಮಠ ಅವರು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ 132ನೇ ಜಯಂತಿ ಅಂಗವಾಗಿ 1132 (ಇಂಗ್ಲೀಷ್) ಗುರು ಪದ ಬಳಸಿ ರಚಿಸಿದ್ದ ರಾಧಾಕೃಷ್ಣನ್ ಅವರ ಭಾವಚಿತ್ರ ಮುದ ನೀಡಿತು.

- Advertisement -

Stay connected

278,627FansLike
573FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಬಳಸಿದ ಪರಿಸರಸ್ನೇಹಿ ಕಾರು...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...