More

    ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಂಬಲಿಸಿ  ಕೆಆರ್ ಎಸ್ ಪಕ್ಷದ ಅಭ್ಯರ್ಥಿ ಕಿಶನ್ ಮನವಿ

    ದಾವಣಗೆರೆ: ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ ನನಗೆ ಶಿಕ್ಷಕ ಮತದಾರರು ಬೆಂಬಲಿಸಬೇಕೆಂದು ಅಭ್ಯರ್ಥಿ ಎಂ.ಜಿ.ಕಿಶನ್ ಮನವಿ ಮಾಡಿದರು.
    ರಾಷ್ಟ್ರೀಯ ಪಕ್ಷದ ಅಭ್ಯರ್ಥಿಗಳು ಈಡೇರಿಸಿದ ಭರವಸೆಗಳು, ನಿರ್ವಹಿಸಿದ ಕೆಲಸಗಳ ಆಧಾರದಡಿ ಮತ ಕೇಳುತ್ತಿಲ್ಲ. ಆಡಳಿತ ಪಕ್ಷಗಳ ಅಭ್ಯರ್ಥಿಗಳು ಸರ್ಕಾರದ ಆಣತಿಯಂತೆ ನಡೆಯಬೇಕಿದ್ದು ಭ್ರಷ್ಟಾಚಾರ, ಅವ್ಯವಸ್ಥೆ ವಿರುದ್ಧ ಮಾತನಾಡುವುದಿಲ್ಲ. ಹೀಗಾಗಿ ಈ ಬಾರಿ ತಮಗೆ ಬೆಂಬಲಿಸಬೇಕೆಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಕಳೆದ ಐದು ವರ್ಷಗಳಲ್ಲಿ ಶಿಕ್ಷಣಕ್ಕೆ 1.73 ಕೋಟಿ ರೂ, ಆರೋಗ್ಯಕ್ಕೆ 62 ಸಾವಿರ ಕೋಟಿ ರೂ. ಮೀಸಲಿಟ್ಟರೂ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಂತೆ ಸುಸ್ಥಿತಿಯಲ್ಲಿಲ್ಲ. ಜಿಲ್ಲಾಸ್ಪತ್ರೆಗಳು ಖಾಸಗಿ ಆಸ್ಪತ್ರೆಗಳಂತೆ ಸುಧಾರಿಸಿಲ್ಲ. ಏಳನೇ ವೇತನ ಆಯೋಗದ ವರದಿ ಜಾರಿ ಮಾಡಲಾಗಿಲ್ಲ. ಶಾಲಾ ಶಿಕ್ಷಕರ ಹುದ್ದೆಗಳನ್ನು ತುಂಬಲಾಗಿಲ್ಲ ಎಂದು ದೂರಿದರು.
    ಪರಿಷತ್ ಚುನಾವಣೆಯಲ್ಲಿ ಪ್ರತಿ ಬಾರಿ ಮತದಾರರ ಪಟ್ಟಿ ತಯಾರಿಸಲಾಗುತ್ತಿದೆ. ವೈಯಕ್ತಿಕ ಲಾಭಕ್ಕಾಗಿ ಬೇಕಾದವರನ್ನು ಮತ್ರ ಮತದಾರರ ಪಟ್ಟಿಗೆ ಸೇರಿಸಲಾಗುತ್ತಿದೆ. ಇದನ್ನು ತೆಗೆದುಹಾಕಿ ಪ್ರತಿ ಚುನಾವಣೆಗೆ ಪಟ್ಟಿ ಪರಿಷ್ಕರಣೆ ಮಾಡಬೇಕು.
    ಖಾಸಗಿ ಶಿಕ್ಷಕರು ಅವರ ಕುಟುಂಬದವರಿಗೆ ವಾರ್ಚಿಕ 5 ಲಕ್ಷ ರೂ.ಗಳವರೆಗೆ ಆರೋಗ್ಯ ವಿಮೆ ಜಾರಿ, ಖಾಸಗಿ ಶಾಲಾ ಶಿಕ್ಷಕರಿಗೆ ಸರ್ಕಾರಿ ಶಿಕ್ಷಕರ ನೇಮಕಾತಿಯಲಿ ಶೇ.5ರ ಮೀಸಲಾತಿ ಜಾರಿಗೊಳಿಸುವುದು, ಶಾಲಾ ಕಾಲೇಜು ಹಾಸ್ಟೆಲ್‌ಗಳಿಗೆ ಮೂಲ ಸೌಕರ್ಯ ಒದಗಿಸುವುದು ನನ್ನ ಆದ್ಯತೆಯಾಗಿದೆ ಎಂದು ಹೇಳಿದರು.
    ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ಎಸ್.ವೀರಭದ್ರಪ್ಪ, ವೆಂಕಟೇಶಪ್ಪ ಇದ್ದರು.

    See also  ಸಂಸದ ಸಿದ್ದೇಶ್ವರ ಅವರಿಗೆ ಪ್ರಾಣ ಭಯ! ದಾಖಲೆ ರಹಿತ ಆರೋಪಕ್ಕೆ ಮಾನನಷ್ಟ ದಾವೆಯ ಎಚ್ಚರಿಕೆ 

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts