25.7 C
Bangalore
Sunday, December 15, 2019

ಎಲ್‌ಐಸಿಯಲ್ಲಿ ಎಫ್‌ಡಿಐ ಬೇಕಾಗಿಲ್ಲ

Latest News

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಮಸ್ಕಿ ಕ್ಷೇತ್ರಕ್ಕೆ ಇನ್ನೆರಡು ತಿಂಗಳಲ್ಲಿ ಉಪಚುನಾವಣೆ ಸಾಧ್ಯತೆ – ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್

ಮಸ್ಕಿ: ಬಿಜೆಪಿ ಸೇರಿದ ಮೇಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ಈಗಾಗಲೇ 50 ಕೋಟಿ ರೂ....

ದಾವಣಗೆರೆ: ಭಾರತೀಯ ಜೀವ ವಿಮಾ ನಿಗಮವನ್ನು ಎಲ್ಲರ ಒತ್ತಾಸೆಯಂತೆ ಸಾರ್ವಜನಿಕ ಸಂಸ್ಥೆಯಾಗಿ ಉಳಿಸಬೇಕು. ಇದರಲ್ಲಿ ವಿದೇಶಿ ನೇರ ಬಂಡವಾಳ ಹೂಡುವ ಪ್ರಸ್ತಾವ ಸರಿಯಲ್ಲ ಎಂದು ಅಖಿಲ ಭಾರತ ಜೀವ ವಿಮಾ ಪ್ರತಿನಿಧಿಗಳ ಸಂಘಟನೆಯ ದಕ್ಷಿಣ ಮಧ್ಯ ವಲಯದ ಅಧ್ಯಕ್ಷ ಎಲ್.ಮಂಜುನಾಥ್ ಹೇಳಿದರು.

ಎಲ್‌ಐಸಿ ಏಜೆಂಟ್ಸ್ ಅಸೋಸಿಯೇಷನ್ ದಾವಣಗೆರೆ ಶಾಖೆ 1 ರವತಿಯಿಂದ ಟಿಸಿ ಲೇಔಟ್‌ನ ಸಂಘದ ಸಮುದಾಯ ಭವನದಲ್ಲಿ ಸೋಮವಾರ ನಡೆದ ಸರ್ವ ಸದಸ್ಯರ 13 ನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.

ಬ್ಯಾಂಕ್, ವಿಮೆ ಮತ್ತಿತರೆ ಸಾರ್ವಜನಿಕ ವಲಯದ ಉದ್ದಿಮೆಗಳಲ್ಲಿ ಎಫ್‌ಡಿಐ ಹೂಡಿಕೆ ಮಾಡುವ ಪ್ರಯತ್ನ ಅನೇಕ ವರ್ಷದಿಂದಲೂ ನಡೆಯುತ್ತಿದ್ದರೂ ಯಶಸ್ಸು ಕಂಡಿಲ್ಲ. ಇದೀಗ ಮತ್ತೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಚರ್ಚೆಯಾಗಿದೆ. ಇದನ್ನು ಎಲ್ಲರೂ ವಿರೋಧಿಸಬೇಕಿದೆ ಎಂದರು.

ವಿಮಾ ಕ್ಷೇತ್ರದಲ್ಲೂ ವಿಲೀನ ಪ್ರಕ್ರಿಯೆಯ ಬಿಸಿ ತಟ್ಟಿದೆ. ಆರ್ಥಿಕ ಕ್ಷೇತ್ರಗಳಲ್ಲಾದ ಬದಲಾವಣೆ ಇದರ ಮೇಲೆ ಪ್ರಭಾವ ಬೀರುತ್ತಿವೆ. ಸಾರ್ವಜನಿಕ, ಖಾಸಗಿ ಸಹಭಾಗಿತ್ವದಲ್ಲಿ ಖಾಸಗಿಯವರಿಗೆ ಆದ್ಯತೆ ನೀಡುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಇದರ ಭಾಗವಾಗಿ ಸಾರ್ವಜನಿಕ ವಲಯದ ಸಂಸ್ಥೆಗಳನ್ನೇ ಅಸ್ಥಿರಗೊಳಿಸುವ ಪ್ರಯತ್ನ ಸಲ್ಲದು ಎಂದರು.

2019ರ ಆಗಸ್ಟ್ ಅಂತ್ಯಕ್ಕೆ 24 ವಿಮಾ ಸಂಸ್ಥೆಗಳು 105 ಕೋಟಿ ರೂ. ಪ್ರೀಮಿಯಂ ಸಂಗ್ರಹಿಸಿವೆ. ಇದರಲ್ಲಿ ಎಲ್‌ಐಸಿಯ ಪಾಲು 77.22 ಕೋಟಿ ರೂ.ನಷ್ಟಿದೆ. ಎಲ್‌ಐಸಿ ಒಂದರಿಂದಲೇ ಜನವಿಶ್ವಾಸ ಗಳಿಸಲು ಸಾಧ್ಯ ಎಂದು ಹೇಳಿದರು.

25 ವರ್ಷ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ -ದ್ವಿತೀಯ ಪಿಯುಸಿ, ಪದವಿಯಲ್ಲಿ ಹೆಚ್ಚು ಅಂಕ ಪಡೆದ ಸಂಘದ ಸದಸ್ಯರ ಮಕ್ಕಳಿಗೆ ಹಾಗೂ ಶತಕವೀರ (100 ಪಾಲಿಸಿ ಮಾಡಿಸಿದವರಿಗೆ), 25 ಲಕ್ಷ ರೂ.ಗೂ ಅಧಿಕ ಪ್ರೀಮಿಯಂ ತಂದ 56ಕ್ಕೂ ಹೆಚ್ಚು ಪ್ರತಿನಿಧಿಗಳಿಗೆ ಬಹುಮಾನ ವಿತರಿಸಲಾಯಿತು.

ದಾವಣಗೆರೆ ಶಾಖೆ-1ರ ಅಧ್ಯಕ್ಷ ಎಸ್.ಜಿ.ಪಂಪಣ್ಣ, ಕಾರ್ಯದರ್ಶಿ ಶಿವಮೂರ್ತಿ, ಗೌರವಾಧ್ಯಕ್ಷ ಎಂ.ಎಸ್. ನಾಗರಾಜ್, ಜಗಳೂರು ಸಂಪರ್ಕ ಶಾಖೆಯ ಶಾಖಾಧಿಕಾರಿ ಪ್ರಕಾಶ್ ಮಾಳೆಕೊಪ್ಪ, ಪ್ರಶಾಂತ್, ಖಜಾಂಚಿ ಎಚ್. ಸಿದ್ದರಾಮೇಶ್ವರ ಇತರರು ಕಾರ್ಯಕ್ರಮದಲ್ಲಿ ಇದ್ದರು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...