More

    ದಾವಣಗೆರೆ ಮಹಾನಗರ ಪಾಲಿಕೆಯಿಂದ 28ಕ್ಕೆ ಕನ್ನಡ ರಾಜ್ಯೋತ್ಸವ

    ದಾವಣಗೆರೆ: ಮಹಾನಗರ ಪಾಲಿಕೆ ಹಾಗೂ ವಿವಿಧ ಕನ್ನಡಪರ ಸಂಘಟನೆಗಳಿಂದ ಡಿ.28ರಂದು ಪಾಲಿಕೆ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮೇಯರ್ ಎಸ್.ಟಿ. ವೀರೇಶ್ ಹೇಳಿದರು.

    ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ನವೆಂಬರ್‌ನಲ್ಲಿ 3 ದಿನಗಳ ಕಾಲ ರಾಜ್ಯೋತ್ಸವ ಆಚರಿಸಲು ನಿರ್ಧರಿಸಲಾಗಿತ್ತು. ಆದರೆ ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಕಾರಣದಿಂದ ಮುಂದೂಡಲಾಗಿತ್ತು. ಕರೊನಾ ಹಿನ್ನೆಲೆಯಲ್ಲಿ ಒಂದೇ ದಿನ ಕಾರ್ಯ ಕ್ರಮ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

    ಬೆಳಗ್ಗೆ 9 ಗಂಟೆಗೆ ಭುವನೇಶ್ವರಿ ತಾಯಿಯ ಶೋಭಾಯಾತ್ರೆ ಪಾಲಿಕೆಯಿಂದ ಆರಂಭವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಲಿದೆ. ಸಂಜೆ 5 ಗಂಟೆಗೆ ರಸಮಂಜರಿ ಹಮ್ಮಿಕೊಳ್ಳಲಾಗಿದೆ. ಈ ಬಾರಿ ಸ್ಥಳೀಯ ಕಲಾವಿದರನ್ನೊಳಗೊಂಡ ತಂಡ ಕನ್ನಡ ಗೀತೆಗಳನ್ನು ಹಾಡುವ ಮೂಲಕ ರಂಜಿಸಲಿದೆ ಎಂದರು. ಡಿ.25, 26ರಂದು ಕ್ರೀಡಾ ಸ್ಥಾಯಿ ಸಮಿತಿ ಅಧ್ಯಕ್ಷೆ ರೇಣುಕಾ ಶ್ರೀನಿವಾಸ್, ಸದಸ್ಯ ಕೆ.ಎಂ.ವೀರೇಶ್ ನೇತೃತ್ವದಲ್ಲಿ ಕ್ರಿಕೆಟ್, ಗುಂಡೆಸೆತ ಸೇರಿ ಇತರೆ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಪಾಲಿಕೆ ಕಚೇರಿಯ ಮಹಿಳಾ ಸದಸ್ಯರು, ನೌಕರರು ಹಾಗೂ ಸಿಬ್ಬಂದಿ ಕ್ರೀಡೆಗಳಲ್ಲಿ ಭಾಗವಹಿಸಲಿದ್ದಾರೆ. ವಿಜೇತ ಕ್ರೀಡಾಪಟುಗಳಿಗೆ ಡಿ.28ರಂದು ಪ್ರಶಸ್ತಿ ನೀಡಲಾಗುವುದು ಎಂದು ಹೇಳಿದರು.

    ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವ್ಯಕ್ತಿಗಳನ್ನು ಈಗಾಗಲೇ ಆಯ್ಕೆ ಮಾಡಲಾಗಿದ್ದು, ರಾಜ್ಯೋತ್ಸವದ ದಿನ ಸನ್ಮಾನಿಸಲಾಗುವುದು ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ, ಸಂಸದ ಸಿದ್ದೇಶ್ವರ, ಶಾಸಕರಾದ ಎಸ್.ಎ.ರವೀಂದ್ರನಾಥ್, ಶಾಮನೂರು ಶಿವಶಂಕರಪ್ಪ, ಕಸಾಪ ಅಧ್ಯಕ್ಷ ಮಹೇಶ ಜೋಶಿ, ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂದರು. ಉಪ ಮೇಯರ್ ಶಿಲ್ಪಾ ಜಯಪ್ರಕಾಶ್, ಸ್ಥಾಯಿ ಸಮಿತಿ ಅಧ್ಯಕ್ಷ ಎಲ್.ಡಿ.ಗೋಣೆಪ್ಪ, ಗೀತಾ ದಿಳ್ಯಪ್ಪ, ಗೌರಮ್ಮ, ಕನ್ನಡಪರ ಸಂಘಟನೆಯ ಟಿ.ಶಿವಕುಮಾರ್, ಜಮ್ಮನಹಳ್ಳಿ ನಾಗರಾಜ್, ಕೆ.ಜಿ.ಶಿವಕುಮಾರ್, ಸೋಮಶೇಖರ್ ಇತರರಿದ್ದರು.

    ಇಮಾಂ ಸಾಬ್‌ರಿಂದ ಉದ್ಘಾಟನೆ

    ಕನ್ನಡ ಶಿಕ್ಷಕರಾಗಿ ಅನನ್ಯ ಸೇವೆ ಸಲ್ಲಿಸಿದ ಇಮಾಂ ಆಬ್ ಅವರು ಅಂದು ಬೆಳಗ್ಗೆ 9ಕ್ಕೆ ಕನ್ನಡ ತಾಯಿ ಭುವನೇಶ್ವರಿ ಮೆರವಣಿಗೆ ಉದ್ಘಾಟಿಸುವರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts