20.8 C
Bangalore
Sunday, December 8, 2019

ಅಂಡರ್‌ಪಾಸ್ ಮಾಡದಿದ್ರೆ ಜನ ಹೊಡೀತಾರೆ

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

ದಾವಣಗೆರೆ: ಸಾರ್ವಜನಿಕರ ಬೇಡಿಕೆಯಂತೆ ಕೆಳಸೇತುವೆ ಕೆಲಸ ಆಗಲೇಬೇಕು. ಅದಾಗದ ಹೊರತು ಷಟ್ಪಥ ಹೆದ್ದಾರಿ ಕಾಮಗಾರಿಗೆ ಅವಕಾಶ ಕೊಡೋದಿಲ್ಲ. ಜನರು ಕೂಡ ಹಿಡಿದು ಹೊಡೆಯುತ್ತಾರೆ!

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳಿಗೆ ಸಂಸದ ಜಿ.ಎಂ.ಸಿದ್ದೇಶ್ವರ ಹಾಕಿದ ಗುಟುರಿದು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಶುಕ್ರವಾರ ಜರುಗಿದ ಹೆದ್ದಾರಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

11 ಸ್ಥಳಗಳಲ್ಲಿ ಕಾಮಗಾರಿ ಬದಲಾಯಿಸಿ, ಅಂಡರ್‌ಪಾಸ್ ನಿರ್ಮಿಸಲು ಹೆದ್ದಾರಿ ಪ್ರಾಧಿಕಾರಕ್ಕೆ ತಿಳಿಸಿದ್ದರೂ ಏಳಕ್ಕೆ ಮಾತ್ರ ಅನುಮೋದನೆ ದೊರೆತಿದೆ. ಲಕ್ಕಮುತ್ತೇನಹಳ್ಳಿ, ಮಲ್ಲಶೆಟ್ಟಿಹಳ್ಳಿ, ಎಚ್.ಕಲಪನಹಳ್ಳಿ, ಆವರಗೆರೆ ಕ್ರಾಸ್ ಬಳಿ ಸಮ್ಮತಿ ದೊರೆತಿಲ್ಲ. ಸೂಚಿತ ಕಾಮಗಾರಿಯಾಗದೆ ಹೆದ್ದಾರಿ ಕೆಲಸ ಮಾಡಲೇಬೇಡಿ. ಸಂಸದರು ಆಕ್ಷೇಪಿಸಿದ್ದಾರೆ ಎಂದೇ ನಿಮ್ಮ ಮೇಲಧಿಕಾರಿಗೆ ಲಿಖಿತವಾಗಿ ತಿಳಿಸಿ ಎಂದು ಸೂಚಿಸಿದರು.

ಎರಡು ಬಾರಿ ಪ್ರಸ್ತಾವನೆ ಕಳಿಸಿದ್ದರೂ ಈಡೇರಿಲ್ಲ. ಸರ್ಕಾರದ ಬಳಿ ಹಣದ ಕೊರತೆ ಇದೆ ಎಂದು ಅಧಿಕಾರಿಗಳು ಹೇಳಿದಾಗ ‘ಹಣ ಇಲ್ಲದಿದ್ದರೆ ಹೆದ್ದಾರಿಯನ್ನು ನಾಲ್ಕು ಪಥಕ್ಕೆ ಬಿಡಬೇಕಿತ್ತು. ಷಟ್ಪಥಕ್ಕೆ ಏಕೆ ವಿಸ್ತರಣೆ ಮಾಡುತ್ತೀರಿ’ ಎಂದು ಸಂಸದರು ಪ್ರತಿಕ್ರಿಯಿಸಿದರು.

ಬಾಡ, ಸಿರಿಗೆರೆ, ಹರಿಹರ ಕ್ರಾಸ್ ಬಳಿಯ ಅಂಡರ್‌ಪಾಸ್ ಬಳಿ ಮಳೆ ನೀರು ನಿಲ್ಲದಂತೆ ಪರಿಹರಿಸಿ. ವಿದ್ಯಾನಗರದ ಹೈಟೆನ್ಷನ್ ವಿದ್ಯುತ್ ಮಾರ್ಗ ತೆರವುಗೊಳಿಸಿ. 22 ಕೆರೆಗಳ ಏತ ನೀರಾವರಿಯ 18 ಕಿಮೀ ಬಾಕಿ ಕಾಮಗಾರಿ ಪೂರ್ಣಗೊಳಿಸಿ. ರಾಚಪ್ಪನ ಬೀಳು ಬಡಾವಣೆ ಮತ್ತಿತರೆಡೆ ಮಳೆಗಾಲದಲ್ಲಿ ನೀರು ಜಮಾವಣೆ ಆಗದಂತೆ ಕಾಮಗಾರಿ ನಿರ್ವಹಿಸಿ ಎಂದು ಸೂಚಿಸಿದರು.

ಶಾಸಕರಾದ ಎಸ್.ಎ.ರವೀಂದ್ರನಾಥ್, ಪ್ರೊ.ಎಂ.ಲಿಂಗಣ್ಣ, ಡಿಸಿ ಮಹಾಂತೇಶ್ ಬೀಳಗಿ, ಎಡಿಸಿ ಪದ್ಮಾ ಬಸವಂತಪ್ಪ, ಪಾಲಿಕೆ ಆಯುಕ್ತ ಮಂಜುನಾಥ ಬಳ್ಳಾರಿ, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀನಿವಾಸ ನಾಯ್ಡು, ಪ್ರಾಧಿಕಾರದ ತಾಂತ್ರಿಕ ವ್ಯವಸ್ಥಾಪಕ ಮಲ್ಲಿಕಾರ್ಜುನ್, ಕೆಎನ್‌ಎನ್‌ಎಲ್ ಅಧಿಕಾರಿ ಗಂಗಪ್ಪ ಇದ್ದರು.

ದೇವಸ್ಥಾನ ನಿರ್ಮಿಸಿಕೊಡಿ: ಶಿರಮಗೊಂಡನಹಳ್ಳಿ ಬಳಿ ಹೆದ್ದಾರಿ ನಿರ್ಮಿಸುವಾಗ ಆಂಜನೇಯ, ವಿನಾಯಕ ದೇವಸ್ಥಾನ ಮತ್ತು ಅಂಗನವಾಡಿ ಕಟ್ಟಡ ತೆರವಾಗಿವೆ. ಇವನ್ನು ನಿರ್ಮಿಸಬೇಕೆಂದು ಶಾಸಕ ಎಸ್.ಎ.ರವೀಂದ್ರನಾಥ್ ತಿಳಿಸಿದರು. ದೇವಸ್ಥಾನಗಳಿಗೆ ಸಮಿತಿ ಇಲ್ಲ. ಆದಾಗ್ಯೂ ಪ್ರಾಧಿಕಾರದಿಂದ ಜಿಲ್ಲಾಡಳಿತಕ್ಕೆ ಹಣ ನೀಡಿದಲ್ಲಿ ಪರ್ಯಾಯ ದೇವಸ್ಥಾನ ನಿರ್ಮಿಸಿಕೊಡಲಾಗುವುದು ಎಂದು ಡಿಸಿ ಮಹಾಂತೇಶ್ ಬೀಳಗಿ ಹೇಳಿದರು.

ಸ್ಮಾರ್ಟ್ ದ್ವಾರವೇಕಿಲ್ಲ: ರಾಣೆಬೆನ್ನೂರು, ಹಾವೇರಿ ನಗರಕ್ಕೆ ಹೋಲಿಸಿದರೆ ದಾವಣಗೆರೆಯಲ್ಲಿ ಸುಂದರ ಪ್ರವೇಶದ್ವಾರವಿಲ್ಲ. 10 ಲಕ್ಷ ಜನಸಂಖ್ಯೆಯುಳ್ಳ ನಗರದಲ್ಲೇಕೆ ಈ ವ್ಯವಸ್ಥೆ ಇಲ್ಲ ಎಂದು ಸಂಸದರು ಪ್ರಶ್ನೀಸಿದರು. ಹೆದ್ದಾರಿ ಡಿಪಿಆರ್‌ನಲ್ಲಿ ದಾವಣಗೆರೆ ಪ್ರಸ್ತಾವನೆ ಇರಲಿಲ್ಲ ಎಂದು ಪ್ರಾಧಿಕಾರ ಅಧಿಕಾರಿಗಳು ಹೇಳಿದರು. ಯೋಜನೆ ರೂಪಿಸುವುದು ನಿಮ್ಮ ಕೆಲಸ. ಪ್ರವೇಶ ಕಲ್ಪಿಸದಿದ್ದರೆ ಒಪ್ಪುವುದಿಲ್ಲ ಎಂದು ಎಂಪಿ ಹೇಳಿದರು.

ಟೋಲ್ ಅನಿವಾರ್ಯ ಸಾರ್: ಹೆದ್ದಾರಿಯಲ್ಲಿ ಜನರಿಗೆ ಓಡಾಡಲು ಸಮರ್ಪಕ ಸರ್ವೀಸ್ ರಸ್ತೆಗಳೇ ಇಲ್ಲ. ಹೀಗಿರುವಾಗ ಟೋಲ್ ಸಂಗ್ರಹಿಸುವುದು ಸರಿಯಾ. ಜನರು ಪ್ರಶ್ನೆ ಮಾಡುತ್ತಿದ್ದಾರೆ ಎಂದು ಸಂಸದರು ಹೇಳಿದರು. ಇದು ಸರ್ಕಾರದ ಆದೇಶ. ಷಟ್ಪಥ ಕಾಮಗಾರಿ ನಡೆಯುತ್ತಿರುವ ಕಾರಣಕ್ಕೆ ಹಿಂದಿನ ದರಕ್ಕಿಂತ ಶೇ.75ರಷ್ಟನ್ನು ಮಾತ್ರವೇ ಸಂಗ್ರಹಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.

1150 ಕೋಟಿ ರೂ. ಪ್ರಸ್ತಾವನೆ: ಮರಿಯಮ್ಮನಹಳ್ಳಿಯಿಂದ ಹರಿಹರ ಮಾರ್ಗವಾಗಿ ಶಿವಮೊಗ್ಗದವರೆಗೆ ರಾಜ್ಯ ಹೆದ್ದಾರಿ ನಿರ್ಮಾಣಕ್ಕೆ 1150 ಕೋಟಿ ರೂ. ವೆಚ್ಚದ ಪ್ರಸ್ತಾವನೆ ಸಿದ್ಧವಾಗಿದೆ. ಡಿಪಿಆರ್ ತಯಾರಾಗುತ್ತಿದೆ ಎಂದು ಇನ್‌ಫ್ರಾಸ್ಟ್ರಕ್ಚರ್ ಸಪೋರ್ಟ್ ಇಂಜಿನಿಯರ್ ಕನ್ಸಲ್ಟೆನ್ಸಿ ಕೃಷ್ಣಸ್ವಾಮಿ ಹೇಳಿದರು.

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...