ದಾವಣಗೆರೆ: ಗೌರವಧನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿ ವತಿಯಿಂದ ಸೆ. 19ರಂದು ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷೆ ಎಂ.ಬಿ.ಶಾರದಮ್ಮ ಹೇಳಿದರು.
ಬೆಂಗಳೂರಿನ ಸ್ವಾತಂತ್ರೃ ಉದ್ಯಾನದಲ್ಲಿ ಅಂಗನವಾಡಿಗಳನ್ನು ಉಳಿಸಿ ಮತ್ತು ಬಲಪಡಿಸಿ ಎಂಬ ಘೋಷ ವಾಕ್ಯದೊಂದಿಗೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಿವೃತ್ತರಾದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚುಟಿ ನೀಡುವುದು, ಗೌರವಧನ ಹೆಚ್ಚಿಸುವುದು, ಗುಣಮಟ್ಟದ ಪೌಷ್ಟಿಕ ಆಹಾರ ಪೂರೈಸುವುದು, ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್‌ಕೆಜಿ, ಯುಕೆಜಿ ಆರಂಭಿಸಬೇಕೆಂಬ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಅಂದು ಜಿಲ್ಲೆಯ ಎಲ್ಲ ಅಂಗನವಾಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಗುಜರಾತ್ ಸರ್ಕಾರದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಂಗನವಾಡಿ ನೌಕರರಿಗೂ ಗ್ರಾೃಚುಟಿ ಸೌಲಭ್ಯ ನೀಡಬೇಕೆಂದು ಆದೇಶಿಸಿದ್ದು ಅದು ಚಾಲ್ತಿಯಲ್ಲಿದೆ. ಕರ್ನಾಟಕದಲ್ಲೂ ಇದನ್ನು ನೀಡಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಎಐಟಿಯುಸಿ ರಾಜ್ಯ ಸಂಚಾಲಕ ಆವರಗೆರೆ ಚಂದ್ರು, ಸಮಿತಿಯ ಪದಾಧಿಕಾರಿಗಳಾದ ಎಸ್.ಎಸ್. ಮಲ್ಲಮ್ಮ, ವಿಶಾಲಾಕ್ಷಿ, ಗೀತಾ, ಸರ್ವಮ್ಮ, ಸುಶೀಲಾ, ರೇಣುಕಾ, ಚನ್ನಮ್ಮ, ಮಂಜುಳಾ ಇತರರಿದ್ದರು.
—-
ಅಂಗನವಾಡಿ ಕಾರ್ಯಕರ್ತೆಯರಿಂದ 19ಕ್ಕೆ ವಿಧಾನಸೌಧ ಚಲೋ
World Arthritis Day: ಸಂಧಿವಾತ ಕಾಯಿಲೆಗೆ ಚಿಕಿತ್ಸೆಯೇ ಮದ್ದು! ತಜ್ಞವೈದ್ಯೆ ಡಾ. ಅರ್ಚನಾ ಎಂ. ಉಪ್ಪಿನ ಅಭಿಮತ
ಪ್ರಸ್ತುತ ದಿನಗಳಲ್ಲಿ ಬಿಪಿ-ಶುಗರ್ ಸಮಸ್ಯೆಯಂತೆ ಅರ್ಥರೈಟಿಸ್ ( Arthritis ) , ರುಮಾಟಾಲಜಿ (ಸಂಧಿವಾತ/ ಕೀಲುವಾಯು)…
Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..
ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…
Health Tips : ಮೆಟ್ಟಿಲು ಹತ್ತುವಾಗ ಸುಸ್ತಾಗುತ್ತದಾ..! ಈ ಸಲಹೆಗಳನ್ನು ಅನುಸರಿಸಿ
ಬೆಂಗಳೂರು: ಮೆಟ್ಟಿಲು ಹತ್ತುವಾಗ ಉಸಿರಾಟದ ತೊಂದರೆ ಸಾಮಾನ್ಯ. ಈ ಸಮಸ್ಯೆಯು ವಯಸ್ಸಾದಂತೆ ಹೆಚ್ಚಾಗುತ್ತಿದೆ, ಆದರೆ ಇತ್ತೀಚಿನ…