18.5 C
Bangalore
Monday, December 16, 2019

ಭವಿಷ್ಯಕ್ಕೆ ಸ್ವಚ್ಛತೆ ಕೊಡುಗೆ ನೀಡಿ

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ದಾವಣಗೆರೆ: ಮುಂದಿನ ಪೀಳಿಗೆಗೆ ಸ್ವಚ್ಛ ಭಾರತ ಬಿಟ್ಟು ಹೋಗಬೇಕಿದ್ದು, ವಿದ್ಯಾರ್ಥಿಗಳು ಇದಕ್ಕಾಗಿ ಸಂಕಲ್ಪ ಮಾಡಿ ಪರಿಣಾಮಕಾರಿಯಾಗಿ ಕಾರ್ಯರೂಪಕ್ಕೆ ತರಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎಚ್.ಬಸವರಾಜೇಂದ್ರ ತಿಳಿಸಿದರು.

ನಗರದ ಶ್ರೀಮತಿ ಎ.ವಿ.ಕಮಲಮ್ಮ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಜಿಪಂ, ಶಿಕ್ಷಣ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸ್ವಚ್ಛತಾ ರಸಪ್ರಶ್ನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ಲಾಸ್ಟಿಕ್ ಅತಿ ಕೆಟ್ಟ ವಸ್ತು. ಆದರೆ, ತಕ್ಷಣಕ್ಕೆ ಇದರಿಂದ ಮುಕ್ತಿ ಹೊಂದಲು ಸಾಧ್ಯವಿಲ್ಲ. ಕ್ರಮೇಣ ಇದರ ಕಡಿಮೆ ಮಾಡುತ್ತಾ, ತ್ಯಜಿಸಬೇಕಿದೆ. ತ್ಯಾಜ್ಯ ವಸ್ತುಗಳನ್ನು ಪರಿಣಾಮಕಾರಿಯಾಗಿ, ಪರಿಸರಕ್ಕೆ ಧಕ್ಕೆಯಾಗದಂತೆ ವಿಲೇವಾರಿ ಮಾಡಬೇಕಿದೆ ಎಂದರು.

ಸ್ವಚ್ಛತಾ ಆಂದೋಲನ ಪರಿಕಲ್ಪನೆ ಹಳೆಯದು. ಆದರೆ, ಇದೀಗ ಹೊಸ ರೂಪ ಪಡೆದಿದೆ. ಪರಿಸರವನ್ನು ಉತ್ತಮವಾಗಿ ಇಟ್ಟುಕೊಳ್ಳುವುದು ನಮ್ಮ ಕರ್ತವ್ಯ ಆಗಬೇಕು. ವಿದ್ಯಾರ್ಥಿಗಳು ಮಾಲಿನ್ಯ ತಡೆಯಲು ನಿರತರಾಗಬೇಕು ಎಂದು ತಿಳಿಸಿದರು.

ದಾವಣಗೆರೆ ವಿವಿಯ ಸಿಂಡಿಕೇಟ್ ಮಾಜಿ ಸದಸ್ಯ ಪ್ರೊ.ಸಿ.ಎಚ್.ಮುರಿಗೇಂದ್ರಪ್ಪ ಮಾತನಾಡಿ, ಮಕ್ಕಳು ಪಾಲಕರು, ನೆರೆಹೊರೆಯವರಿಗೆ ಸ್ವಚ್ಛತೆ ಬಗ್ಗೆ ತಿಳಿ ಹೇಳಬೇಕು. ಹಿಂದೆಲ್ಲ ಬಯಲು ಶೌಚಗೃಹ ಸಾಮಾನ್ಯವಾಗಿತ್ತು. ಇದು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿತ್ತು. ಈಗ ಶೌಚಗೃಹ ಬಳಕೆ ಹೆಚ್ಚಿದ್ದರೂ ಗ್ರಾಮೀಣ ಭಾಗದಲ್ಲಿ ಇನ್ನೂ ಶೌಚಕ್ಕೆ ಬಯಲಿಗೆ ಹೋಗುತ್ತಾರೆ. ಇದು ನಿಲ್ಲಬೇಕು ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಸಿ.ನಿರಂಜನ್ ಮಾತನಾಡಿ, ಸ್ವಚ್ಛ ಭಾರತ್ ಮಿಷನ್ ಯೋಜನೆಯು ದೇಶದ ಹೆಮ್ಮೆಯ ಮತ್ತು ಆಶಾದಾಯಕ ಯೋಜನೆಯಾಗಿದೆ. ಹಳ್ಳಿಗಳಲ್ಲಿ ಸ್ವಚ್ಛತೆ ಅರಿವು ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳು ಸ್ವಚ್ಛತೆಯ ಜಾಗೃತಿ ಕೊಂಡೊಯ್ಯಬೇಕು. ರಸಪ್ರಶ್ನೆ ಕಾರ್ಯಕ್ರಮದಲ್ಲಿ ಆಯ್ಕೆಯಾಗುವ ತಂಡಗಳಿಗೆ ಬಹುಮಾನ ನೀಡಲಾಗುವುದು. ಪ್ರಥಮ ಸ್ಥಾನ ಪಡೆದ ತಂಡವು ವಿಭಾಗೀಯ ಮಟ್ಟಕ್ಕೆ ಆಯ್ಕೆ ಆಗಲಿದೆ ಎಂದು ಮಾಹಿತಿ ನೀಡಿದರು.

ಪ್ರೊ.ಪಿ.ಎಸ್.ಶಿವಪ್ರಕಾಶ್ ಮಾತನಾಡಿ, ವಿದ್ಯಾರ್ಥಿಗಳು ಸೋಲನ್ನು ಸ್ಪರ್ಧಾತ್ಮಕವಾಗಿ ಸ್ವೀಕರಿಸುವ, ಗೆಲುವನ್ನು ಆಚರಣೆ ಮಾಡುವ ಗುಣ ಹೊಂದಿರಬೇಕು. ಎಲ್ಲ ಮಕ್ಕಳಲ್ಲೂ ಭಿನ್ನ, ವಿಶೇಷ ಪ್ರತಿಭೆ ಇರುತ್ತದೆ. ಹಿರಿಯರು ಇದನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು.

ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಸ್ವಾಗತಿಸಿದರು. ವಿಷಯ ಪರಿವೀಕ್ಷಕ ಕುಮಾರ್ ಹನುಮಂತಪ್ಪ ಸಾರಥಿ ವಂದಿಸಿದರು. ಕನ್ನಡ ಉಪನ್ಯಾಸಕಿ ಎಂ.ಸಿ.ಗೀತಾ ನಿರೂಪಿಸಿದರು. ಪಿಯು ಕಾಲೇಜಿನ ಪ್ರಾಂಶುಪಾಲ ಜೆ.ಶಿವಪ್ಪ, ಜಿಪಂ ಅಧಿಕಾರಿಗಳಾದ ಬಸವರಾಜು, ರೂಪಾ ಇತರರಿದ್ದರು.

ಸ್ವಚ್ಛತಾ ರಸಪ್ರಶ್ನೆ ವಿಜೇತರು: ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ವಿದ್ಯಾರ್ಥಿಗಳಾದ ಆರ್.ದೇವ, ಪಿ.ಎಚ್.ನಂದನ್ ಪ್ರಥಮ, ಹರಿಹರದ ಎಂಕೆಇಟಿ ಪ್ರೌಢಶಾಲೆ ವಿದ್ಯಾರ್ಥಿಗಳಾದ ಆಶೀಷ, ಕರುಣಾಕರ ದ್ವಿತೀಯ, ದಾವಣಗೆರೆ ಸಿದ್ಧಗಂಗಾ ಪಿಯು ಕಾಲೇಜಿನ ಕೆ.ಅಭಿನಂದನ್, ಅವಿನಾಶ ಅಬ್ರಹಂ ತೃತೀಯ ಸ್ಥಾನ ಗಳಿಸಿದರು.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...