ನಿವೃತ್ತ ಯೋಧನಿಗೆ ಅದ್ಧೂರಿ ಸ್ವಾಗತ

Latest News

ಎನ್​ಆರ್​ಸಿ ದೇಶಕ್ಕೆ ವಿಸ್ತರಣೆ: ಸಂಸತ್ತಿನಲ್ಲಿ ಅಮಿತ್ ಷಾ ಘೋಷಣೆ

ನವದೆಹಲಿ:ದೇಶಾದ್ಯಂತ ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್​ಆರ್​ಸಿ) ನಡೆಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಬುಧವಾರ ಮಾತನಾಡಿ, ದೇಶಾದ್ಯಂತ ಎನ್​ಆರ್​ಸಿ ನಡೆಸಲು...

ನಷ್ಟ ಕಡಿಮೆ ಮಾಡಿದರೆ ಲಾಭ ಸಾಧ್ಯ

ಕೊಪ್ಪಳ: ದಾಳಿಂಬೆ ಬೆಳೆಯಲ್ಲಿ ರೈತರು ಶೇ.35 ನಷ್ಟ ಅನುಭವಿಸುತ್ತಿದ್ದು, ಇದಕ್ಕೆ ಪರಿಹಾರ ಕಂಡುಕೊಂಡಲ್ಲಿ ಹೆಚ್ಚಿನ ಆದಾಯ ಪಡೆಯಬಹುದೆಂದು ಭಾರತೀಯ ದಾಳಿಂಬೆ ಬೆಳೆಗಾರರ ಸಂಘದ...

ಜನಜಾಗೃತಿ ಅಭಿಯಾನಕ್ಕೆ ಅಭಿನವ ಗವಿಶ್ರೀ ಚಾಲನೆ

ಕಾರಟಗಿ: ಪಟ್ಟಣದಲ್ಲಿ ಜೆಸ್ಕಾಂನಿಂದ ಹಮ್ಮಿಕೊಂಡಿದ್ದ ವಿದ್ಯುತ್ ಅಪಾಯಗಳನ್ನು ತಪ್ಪಿಸುವ ಸುರಕ್ಷತಾ ಜನಜಾಗೃತಿ ಅಭಿಯಾನಕ್ಕೆ ಗವಿಮಠದ ಅಭಿನವ ಗವಿಶ್ರೀಗಳು ಬುಧವಾರ ಚಾಲನೆ ನೀಡಿದರು. ಜೆಸ್ಕಾಂನ ಇಇ...

ಕಲಿಕೆಗೆ ವಯಸ್ಸಿನ ಮಿತಿ ಇಲ್ಲ ಎಂಬುದನ್ನು ಮತ್ತೆ ಪ್ರೂವ್ ಮಾಡಿದ ಕೇರಳದ ಈ ಅಜ್ಜಿಯ ವಯಸ್ಸೆಷ್ಟು ಗೊತ್ತೆ?

ತಿರುವನಂತಪುರಂ: ಓದಿಗೆ ವಯಸ್ಸಿನ ಮಿತಿಯಿಲ್ಲ. ಉತ್ಸಾಹ ಹಾಗೂ ಛಲ ಓದಿಗೆ ಮುಖ್ಯ ಎಂದು ಕೇರಳದ 105 ವರ್ಷ ವಯಸ್ಸಿನ ಅಜ್ಜಿಯೊಬ್ಬರು ನಿರೂಪಿಸಿದ್ದಾರೆ. ಕೇರಳ ಸರ್ಕಾರದ...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ ಮಾತ್ರವಲ್ಲ, ಅವಳೊಂದು ಸಂದೇಶ ಸಾರುತ್ತಿದ್ದಾಳೆ…

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​...

ದಾವಣಗೆರೆ: ಭಾರತೀಯ ಸೇನಾ ಸೇವೆ ಪೂರ್ಣಗೊಳಿಸಿ ಮರಳಿದ ಬಿಎಸ್‌ಎಫ್‌ನ ಯೋಧ ಆರ್.ದೇವನಾಯ್ಕ ಅವರನ್ನು ದಾವಣಗೆರೆ ರೈಲು ನಿಲ್ದಾಣದಲ್ಲಿ ಅರಸಾಪುರ-ಚಿಕ್ಕ ಓಬಜ್ಜಿಹಳ್ಳಿ ಗ್ರಾಮಸ್ಥರು ಅದ್ಧೂರಿವಾಗಿ ಸ್ವಾಗತಿಸಿದರು.

ಚಿಕ್ಕ ಓಬಜ್ಜಿಹಳ್ಳಿ ಗ್ರಾಮದ ಆರ್.ದೇವನಾಯ್ಕ 21 ವರ್ಷ ಗಡಿಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸಿದ್ದಾರೆ. 1998ರಲ್ಲಿ ಸೇನೆಗೆ ಸೇರಿದ್ದ ಅವರು, ಜಮ್ಮು-ಕಾಶ್ಮೀರ, ಗುಜರಾತ್, ಪಶ್ಚಿಮ ಬಂಗಾಳ, ತ್ರಿಪುರ, ಪಂಜಾಬ್ ಸೇರಿ ವಿವಿಧೆಡೆ ಕರ್ತವ್ಯ ನಿರ್ವಹಿಸಿದ್ದಾರೆ.

ಯೋಧ ಕೊನೆಯದಾಗಿ ಪಂಜಾಬ್‌ನ ಅಮೃತಸರದಲ್ಲಿ ಕರ್ತವ್ಯ ಪೂರೈಸಿ ಸೇನಾ ಸಮವಸ್ತ್ರದಲ್ಲಿ ದಾವಣಗೆರೆಗೆ ಆಗಮಿಸಿದರು. ಇಲ್ಲಿಂದ ಮೆರವಣಿಗೆಯಲ್ಲಿ ಗ್ರಾಮಕ್ಕೆ ಕರೆದೊಯ್ಯಲಾಯಿತು. ಕಡ್ಲೇಬಾಳಿನ ಮಧ್ವಾಂಜನೇಯ ದೇಗುಲದಲ್ಲಿ ಪೂಜೆ ಸಲ್ಲಿಸಲಾಯಿತು.

ಸ್ವಗ್ರಾಮಕ್ಕೆ ಆಗಮಿಸಿದ ಯೋಧ ದೇವನಾಯ್ಕ ಅವರಿಗೆ ಮಹಿಳೆಯರು ಆರತಿ ಎತ್ತಿ ಬರಮಾಡಿಕೊಂಡರು. ವಿವಿಧ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿ ಮನೆಗೆ ಮೆರವಣಿಗೆ ಮೂಲಕ ಕರೆದೊಯ್ದರು.

ನಿವೃತ್ತ ಯೋಧ ಆರ್.ದೇವನಾಯ್ಕ ಮಾತನಾಡಿ, ಕಾರ್ಗಿಲ್ ಯುದ್ಧ ವೇಳೆ ತರಬೇತಿ ಪಡೆದು 2 ವರ್ಷ ಜಮ್ಮು-ಕಾಶ್ಮೀರ, ದೇಶದ ವಿವಿಧ ಗಡಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದೇನೆ. ಯುವಕರು ದೇಶ ಸೇವೆ ಮಾಡಲು ಮುಂದಾಗಬೇಕು. ಸೇವೆಯಲ್ಲಿದ್ದಾಗ ಆಗಾಗ ಗ್ರಾಮಕ್ಕೆ ಬಂದಾಗ ಯುವಕರಿಗೆ ಹುರಿದುಂಬಿಸುತ್ತಿದ್ದೆ. ಮುಂದೆಯೂ ಪ್ರೋತ್ಸಾಹ ನೀಡುತ್ತೇನೆ ಎಂದು ಹೇಳಿದರು.

ಗ್ರಾಮದ ಮುಖಂಡರಾದ ಧಾಕ್ಯನಾಯ್ಕ, ರಾಘವೇಂದ್ರನಾಯ್ಕ, ಮಂಜುನಾಥ್ ನಾಯ್ಕ, ರವಿನಾಯ್ಕ, ಎಸ್.ಟಿ.ವೀರೇಶ್ ಇತರರು ಉಪಸ್ಥಿತರಿದ್ದರು.

- Advertisement -

Stay connected

278,627FansLike
573FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಬಳಸಿದ ಪರಿಸರಸ್ನೇಹಿ ಕಾರು...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...