ಕೆಎಸ್ಸಾರ್ಟಿಸಿ ಬಸ್‌ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ

Latest News

ನಿವೇಶನ ನೀಡಲು ಮೀನಮೇಷ

ಶೃಂಗೇರಿ: ತಾಲೂಕು ಕಚೇರಿ ದನದ ದೊಡ್ಡಿಯಾಗಿದೆ. ಬಡವರಿಗೆ ನಿವೇಶನ ನೀಡಲು ಜಾಗವೇ ಇಲ್ಲ ಎನ್ನುವ ಅಧಿಕಾರಿಗಳು ಮಾನವೀಯತೆ ಮರೆಯುತ್ತಿದ್ದಾರೆ. ಹಾಗಿದ್ದರೆ ಕಚೇರಿಗೆ ಬೀಗ...

ಶಾಸಕರ ಅನುದಾನದಲ್ಲಿ ಶುದ್ಧ ಗಂಗಾ ಘಟಕ

ಅಜ್ಜಂಪುರ: ಚುನಾವಣೆ ವೇಳೆ ಸಾಕಷ್ಟು ನಿರೀಕ್ಷೆ ಇರಿಸಿಕೊಂಡು ಗ್ರಾಮೀಣ ಮತದಾರರು ನನ್ನ ಕೈಹಿಡಿದಿದ್ದಾರೆ. ಅವರ ಋಣ ತೀರಿಸುವ ಹೊಣೆ ನನ್ನ ಮೇಲಿರುವುದರಿಂದ ಗ್ರಾಮೀಣ...

ಸಚಿವ, ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿ

ಚಿಕ್ಕಮಗಳೂರು: ಡಾ. ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಸುತ್ತೋಲೆ ಹೊರಡಿಸುವ ಮೂಲಕ ರಾಜ್ಯ ಶಿಕ್ಷಣ ಇಲಾಖೆ ಅಂಬೇಡ್ಕರ್ ಅವರನ್ನು ಅಪಮಾನಿಸಿದೆ ಎಂದು...

ಇನ್ನು ನಾಲ್ಕೈದು ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಶಿವಸೇನೆ-ಕಾಂಗ್ರೆಸ್​-ಎನ್​ಸಿಪಿ ಮೈತ್ರಿ ಸರ್ಕಾರ ರಚನೆ; ಇಂದು ಸಂಜೆ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ

ಮುಂಬೈ: ಇಂದು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್​ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ 50 ನಿಮಿಷ ಮಾತುಕತೆ ನಡೆಸಿದ್ದಾರೆ. ಅದಾದ ಬಳಿಕ ಎನ್​ಸಿಪಿ ಹಾಗೂ...

ಕಲ್ಲು ಪಾಚಿ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿ ಬಂಧನ

ಪಿರಿಯಾಪಟ್ಟಣ : ಪಟ್ಟಣ ವ್ಯಾಪ್ತಿಯ ತಾತನಹಳ್ಳಿ ಗೇಟ್ ಸಮೀಪ ಗುರುವಾರ ಅರಣ್ಯ ಪ್ರದೇಶಗಳಲ್ಲಿ ದೊರಕುವ ಕಲ್ಲು ಪಾಚಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ...

ಮಹೇಶ್ ಡಿ.ಎಂ. ದಾವಣಗೆರೆ: ನಗರದಲ್ಲಿ ಬಿರುಸು ಮಳೆ ಬಂದಾಗೆಲ್ಲ ರಾಜ್ಯ ಸಾರಿಗೆ ಸಂಸ್ಥೆ ಬಸ್‌ನಿಲ್ದಾಣ ಸಣ್ಣ ಕೆರೆಯಾಗಿ ಮಾರ್ಪಡುತ್ತಿದೆ. ಪಿಬಿ ರಸ್ತೆ ನವೀಕರಣ ಹಾಗೂ ಕೆಎಸ್ಸಾರ್ಟಿಸಿ ಪಕ್ಕದ ರಾಜಕಾಲುವೆ ಎತ್ತರದಲ್ಲಿದ್ದು, ನಿಲ್ದಾಣ ತಗ್ಗು ಪ್ರದೇಶದಲ್ಲಿರುವುದರಿಂದ ಇತ್ತೀಚಿನ ಕೆಲ ವರ್ಷಗಳಲ್ಲಿ ಒಂದೊಳ್ಳೆ ಮಳೆ ಬಂದರೂ ಈ ಅವಸ್ಥೆಗೆ ಪರದಾಡುವಂತಾಗುತ್ತದೆ.

ಇತ್ತೀಚೆಗೆ ಸುರಿದ ದೊಡ್ಡ ಮಳೆಗೆ ನಿಲ್ದಾಣದಲ್ಲಿ ತುಂಬಿಕೊಂಡಿದ್ದ ನೀರಿನ ಸೆಳವಿಗೆ ಸಿಕ್ಕ ಪ್ರಯಾಣಿಕರು ಇತರರ ಸಹಕಾರ ಪಡೆದು ಬಸ್ ಹತ್ತಬೇಕಾಯಿತು. ಇನ್ನು ಪಾರ್ಕಿಂಗ್ ಯಾರ್ಡ್‌ನಲ್ಲಿದ್ದ ಬೈಕ್‌ಗಳು ಹೂಳಿನಲ್ಲಿ ಸಿಲುಕಿಹೋಗಿದ್ದವು.

ತ್ರಿಶೂಲ್ ರಸ್ತೆ ಮಾರ್ಗ, ಭಗತ್‌ಸಿಂಗ್ ನಗರ ಮತ್ತಿತರೆಡೆ ಮಳೆ ನೀರು ಹಾಗೂ ಕೊಳಚೆ ಬಂದು ಬಸ್‌ನಿಲ್ದಾಣಕ್ಕೆ ಸೇರುತ್ತದೆ. ಪ್ರತೀ ಬಾರಿ ಮಳೆಗಾಲದಲ್ಲಿ ಒಂದು ದೊಡ್ಡ ಮಳೆ ಬಂದರೆ ಸಾಕು, ಬಸ್‌ನಿಲ್ದಾಣ ಮುಚ್ಚಿಹೋಗುತ್ತದೆ. ಆದರೂ ಈವರೆಗೆ ಕಾಯಕಲ್ಪದ ಮಾತಿಲ್ಲ.

1983 ರಲ್ಲಿ ಐದು ಎಕರೆಯ ಬಸ್‌ನಿಲ್ದಾಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿತ್ತು. 1991 ರಲ್ಲಿ ಬಳ್ಳಾರಿಯಿಂದ ಬೇರ್ಪಟ್ಟು ಸ್ವತಂತ್ರ ವಿಭಾಗವಾದ ನಂತರ ದಾವಣಗೆರೆಯ 2 ಡಿಪೋ, ಹರಿಹರ, ಹರಪನಹಳ್ಳಿಯ ತಲಾ ಒಂದು ಡಿಪೋಗಳಿವೆ. 358 ರಹದಾರಿಗಳಲ್ಲಿಂದ ನಿತ್ಯ 380 ಬಸ್ ಸಂಚರಿಸುತ್ತಿವೆ. ವಿಭಾಗ ದಿನವೊಂದಕ್ಕೆ 40 ಲಕ್ಷ ರೂ. ಗಳಿಕೆ ಹೊಂದಿದೆ. ಖಾಸಗಿ ಬಸ್ ನಿಲ್ದಾಣ ನವೀಕರಣಕ್ಕೆ ಚಾಲನೆ ಸಿಕ್ಕಿದ್ದರೂ ಕೆಎಸ್‌ಆರ್‌ಟಿಸಿ ನಿಲ್ದಾಣಕ್ಕೆ ಆ ಭಾಗ್ಯ ಇಲ್ಲ.

ಈಗಿನ ಕಟ್ಟಡ ನೆಲಸಮಗೊಳಿಸಿ, ಸ್ಮಾರ್ಟ್‌ಸಿಟಿ ಲಿಮಿಟೆಡ್ ಹಾಗೂ ಸಾರಿಗೆ ಇಲಾಖೆ ಸಹಭಾಗಿತ್ವದಲ್ಲಿ ಒಟ್ಟು 100 ಕೋಟಿ ರೂ. ವೆಚ್ಚದಲ್ಲಿ ಎರಡಂತಸ್ತಿನ ಮಲ್ಟಿಪ್ಲೆಕ್ಸ್, ಅತ್ಯಾಧುನಿಕ ಬಸ್‌ನಿಲ್ದಾಣ ನಿರ್ಮಿಸುವ ಪ್ರಸ್ತಾವವಿದೆ. ಇದಕ್ಕೆ ತಾಂತ್ರಿಕ ಅನುಮೋದನೆ, ಆಡಳಿತಾತ್ಮಕ ಒಪ್ಪಂದ ಆಗಬೇಕಿದೆ. ಇದು ಸಾಧ್ಯವಾದರೆ ಮಳೆ ನೀರಿಗೆ ಶಾಶ್ವತ ಮುಕ್ತಿ ಸಿಗಲಿದೆ ಎನ್ನಲಾಗುತ್ತಿದೆ.

ಅಭಿಪ್ರಾಯಗಳು: ಹೊಸ ಬಸ್‌ನಿಲ್ದಾಣ ನಿರ್ಮಾಣ ಸ್ಮಾರ್ಟ್‌ಸಿಟಿ ಯೋಜನೆ ವ್ಯಾಪ್ತಿಗೆ ಸೇರಿದ್ದರೆ ಅದನ್ನು ಕಾರ್ಯರೂಪಕ್ಕೆ ತರಲಾಗುವುದು. ದಾವಣಗೆರೆ ಉತ್ತರ-ದಕ್ಷಿಣ ಭಾಗದಲ್ಲಿ ರಾಜಕಾಲುವೆಗಳ ಅಗಲೀಕರಣಕ್ಕೆ ಆದ್ಯತೆ ನೀಡಿ, ಮಳೆ ನೀರು ಸರಾಗವಾಗಿ ಹರಿಯಲು ಕ್ರಮ ವಹಿಸಲಾಗುವುದು ಎಂದು ಸಂಸದ ಜಿ.ಎಂ.ಸಿದ್ದೇಶ್ವರ ತಿಳಿಸಿದ್ದಾರೆ.

ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಅವಕಾಶ ಮಾಡಿಕೊಳ್ಳಲಾಗಿದೆ. ಇದು ಸಾಧ್ಯವಾದಲ್ಲಿ ನೀರು ನಿಲ್ಲುವ ಸಂಭವ ಇರುವುದಿಲ್ಲ. ಸ್ಮಾರ್ಟ್ ಸಿಟಿ ಲಿಮಿಟೆಡ್‌ನಲ್ಲಿ ನಾವು ಸದಸ್ಯರಿಲ್ಲ. ಆದರೂ ಗಮನ ಹರಿಸಲಾಗುವುದು ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಅಪೂರ್ವ ಹೋಟೆಲ್ ರಸ್ತೆಯಿಂದ ಎಪಿಎಂಸಿ ಮೇಲ್ಸೇತುವೆವರೆಗೆ ರಸ್ತೆಯ ಇಬ್ಬದಿಯಲ್ಲೂ ಒಳಚರಂಡಿ ವ್ಯವಸ್ಥೆಗೆ ಮಳೆ ನೀರಿನ ಸಂಪರ್ಕ ಕಲ್ಪಿಸಬೇಕು. ಬಸ್ ನಿಲ್ದಾಣ ಪಕ್ಕದ ರಾಜಕಾಲುವೆ ತಡೆಗೋಡೆಯನ್ನು 4 ಅಡಿ ಎತ್ತರಗೊಳಿಸುವುದು ಇದಕ್ಕೆ ತಾತ್ಕಾಲಿಕ ಪರಿಹಾರ. ಸ್ಮಾರ್ಟ್‌ಸಿಟಿ ಯೋಜನೆಯಡಿ ಆಧುನಿಕ ನಿಲ್ದಾಣ ನಿರ್ಮಾಣ ಸೇರಿದ್ದು, ಇದಾದಲ್ಲಿ ಮಳೆ ನೀರು ನಿಲ್ಲುವುದಿಲ್ಲ ಎಂದು ಬಿಐಇಟಿ ಕಾಲೇಜಿನ ನಿರ್ದೇಶ ಪ್ರೊ.ವೈ.ವೃಷಭೇಂದ್ರಪ್ಪ ತಿಳಿಸಿದ್ದಾರೆ.

ನಗರ ಯೋಜನೆಯಲ್ಲಿ ಸಮಗ್ರ ಅಧ್ಯಯನ ಆಗದಿರುವುದೇ ಎಲ್ಲದಕ್ಕೂ ಮೂಲ ಸಮಸ್ಯೆಯಾಗಿದೆ. ಈಗಿನ ರಸ್ತೆಗಳಲ್ಲಿ ನೀರು ಇಂಗದೆ ತಗ್ಗು ಪ್ರದೇಶಕ್ಕೆ ನುಗ್ಗುತ್ತಿದೆ. ಸ್ಮಾರ್ಟ್ ಎಂದರೆ ನಗರವನ್ನು ಸುಂದರವಾಗಿ ಮಾಡುವುದಲ್ಲ; ಅಚ್ಚುಕಟ್ಟುತನಕ್ಕೆ ತರುವ ಕೆಲಸವಾಗಬೇಕು. ಹೊಸ ನಿಲ್ದಾಣ ಕಟ್ಟುವ ಜತೆಗೆ ತ್ಯಾಜ್ಯ ನೀರು ಹರಿವಿಗೂ ಯೋಜನೆ ರೂಪಿಸಬೇಕಾದ್ದು ಅನಿವಾರ್ಯ ಎಂದು ಯೋಜನಾ ಸಲಹೆಗಾರ ಆರ್.ಟಿ.ಅರುಣ್‌ಕುಮಾರ್ ಹೇಳಿದ್ದಾರೆ.

ಭಗತ್‌ಸಿಂಗ್ ನಗರದಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದವರೆಗೆ ರಾಜಕಾಲುವೆ ಮಾರ್ಗದಲ್ಲಿ ನಗರಪಾಲಿಕೆ, ನಿಯಮಿತವಾಗಿ ಹೂಳೆತ್ತುವ ಕೆಲಸ ಮಾಡಬೇಕು. ಇಲ್ಲವಾದಲ್ಲಿ ನೀರಿನ ಹರಿವು ರಿವರ್ಸ್ ಆಗುತ್ತದೆ. ಅನುದಾನ ಬಳಸಿ ರಾಜಕಾಲುವೆಗಳ ಸ್ವಚ್ಛತೆಗೆ ಆದ್ಯತೆ ನೀಡಿದ್ದರೆ ಸಮಸ್ಯೆ ಇರುವುದಿಲ್ಲ ಎಂದು ನಾಗರಿಕ ಸುನಿಲ್ ಕೆ. ಜಾಧವ್ ತಿಳಿಸಿದ್ದಾರೆ.

ರಾಜಕಾಲುವೆಯಲ್ಲಿ ಹೂಳಿದ್ದಾಗ ನಿಲ್ದಾಣದಲ್ಲಿ ಸಮಸ್ಯೆಯಾಗಲಿದೆ. ಅತ್ಯಾಧುನಿಕ ಬಸ್ ನಿಲ್ದಾಣ ಕಟ್ಟಡ ನಿರ್ಮಾಣಕ್ಕೆ 3-4 ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ನಡೆಯಲಿದೆ. ಇದು ಚಾಲನೆಗೊಂಡಲ್ಲಿ ಕೆಲವೇ ವರ್ಷದಲ್ಲಿ ಇದಕ್ಕೆ ಶಾಶ್ವತ ಪರಿಹಾರ ಸಿಗಲಿದೆ ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ ಎನ್. ಹೆಬ್ಬಾಳ್ ಹೇಳಿದ್ದಾರೆ.

- Advertisement -

Stay connected

278,636FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...