ದಾವಣಗೆರೆ: ಎಸ್ಸಿಯಲ್ಲಿ ಒಳಮೀಸಲು ಜಾರಿ ಸಂಬಂಧ, ರಾಜ್ಯ ಸರ್ಕಾರ ಆಯೋಗ ರಚಿಸಿ ಮೂರು ತಿಂಗಳೊಳಗೆ ನಿರ್ಧಾರ ಕೈಗೊಳ್ಳಬೇಕು. ಅಲ್ಲಿಯವರೆಗೆ ಯಾವುದೇ ಇಲಾಖೆಯಲ್ಲೂ ನೇಮಕಾತಿ ಪ್ರಕ್ರಿಯೆ ನಡೆಸಬಾರದು. ಪ್ರಕಟಿಸಿದ ಅಧಿಸೂಚನೆಯನ್ನು ಹಿಂಪಡೆಯಬೇಕು ಎಂದು ಮಾದಿಗ ಸಮುದಾಯದ ಮಠಾಧೀಶರು ಒತ್ತಾಯಿಸಿದ್ದಾರೆ.
ಒಳಮೀಸಲು ಹೋರಾಟ ನಿರ್ಣಾಯಕ ಹಂತ ತಲುಪಿದೆ. ಇಷ್ಟವಿಲ್ಲದಿದ್ದರೂ ಮತ್ತೊಂದು ಆಯೋಗ ರಚಿಸುವ ಸರ್ಕಾರದ ನಿರ್ಧಾರವನ್ನು ಸಮುದಾಯ ಒಪ್ಪಿಕೊಂಡಿದೆ. ಇತ್ತ ಕರ್ನಾಟಕ ಲೋಕಸೇವಾ ಆಯೋಗ, ಆರೋಗ್ಯ ಇಲಾಖೆ ಸೇರಿ ಸರ್ಕಾರದ ಹಲವು ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆ ಆರಂಭಿಸಿದೆ. ಇದನ್ನು ಸ್ಥಗಿತಗೊಳ್ಳಬೇಕು ಎಂದು ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ದತ್ತಾಂಶ ಸಂಗ್ರಹಿಸುವ ನೆಪದಲ್ಲಿ ಆಯೋಗ ರಚಿಸಿ ಸಮಯ ವ್ಯರ್ಥ ಮಾಡಬಾರದು. ರಾಜ್ಯ ಸರ್ಕಾರ ಆಯೋಗ ರಚಿಸಲು ಈಗಾಗಲೇ ತೀರ್ಮಾನಿಸಿದೆ. ವರದಿ ಸಿದ್ಧಪಡಿಸಲು ಮೂರು ತಿಂಗಳ ಗಡುವು ನೀಡುವುದಾಗಿ ಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ. ಕೂಡಲೇ ಆಯೋಗ ರಚಿಸಿ ವಿಳಂಬ ಮಾಡದೇ ವರದಿ ಪಡೆದು ತೀರ್ಮಾನ ಕೈಗೊಳ್ಳಬೇಕು ಎಂದರು.
ಆದಿಜಾಂಬವ ಮಠದ ಷಡಕ್ಷರಮುನಿ ಸ್ವಾಮೀಜಿ ಮಾತನಾಡಿ ಮಾದಿಗ ಸಮುದಾಯ ಬಡತನ, ಹಸಿವು, ದೌರ್ಜನ್ಯದಿಂದಾಗಿ ನಿರಂತರ ಶೋಷಣೆ ಅನುಭವಿಸಿದೆ. ರಾಜಕೀಯ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಕ್ಷೇತ್ರದಲ್ಲಿ ಸಮುದಾಯಕ್ಕೆ ಅನ್ಯಾಯವಾಗಿದೆ. ಸರಿಯಾದ ಪಾಲು ಸಿಕ್ಕಾಗ ಸಶಕ್ತಗೊಳ್ಳಲು ಸಾಧ್ಯವಾಗಲಿದೆ. ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು, ಶಿಕ್ಷಣ ಪಡೆಯಲು ಒಳಮೀಸಲು ಬೇಕಿದೆ ಎಂದು ಅಭಿಪ್ರಾಯಪಟ್ಟರು.
ವಕ್ ಹೆಸರಲ್ಲಿ ಯಾರೇ ಜಾಗ ಕಬಳಿಸಲು ಹೊರಟರೂ ಅದರ ವಿರುದ್ಧ ಹೋರಾಟ ಅನಿವಾರ್ಯ. ಇದು ಸಾಮಾಜಿಕ, ಆರ್ಥಿಕ ವಿಷಯವಾದ್ದರಿಂದ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಪ್ರಶ್ನೆ ಯೊಂದಕ್ಕೆ ಉತ್ತರಿಸಿದರು.
ದಾವಣಗೆರೆಯ ಆದಿ ಕರ್ನಾಟಕ ವಿದ್ಯಾರ್ಥಿನಿಲಯ ಮೈದಾನದಲ್ಲಿ ಡಿ. 15ರಂದು ಹಮ್ಮಿಕೊಂಡಿರುವ ಜಿಲ್ಲಾ ಮಾದಿಗ ಸಮಾಜದ ಸಮಾವೇಶಕ್ಕೆ ದಾವಣಗೆರೆ-ಚಿತ್ರದುರ್ಗ ಜಿಲ್ಲೆಯ ಸಾವಿರಾರು ಜನರು ಪಾಲ್ಗೊಳ್ಳಲಿದ್ದಾರೆ ಎಂದು ಗುರು ರಾಮದಾಸಸ್ವಾಮಿ ಆಧ್ಯಾತ್ಮಕ ಸೇವಾ ಟ್ರಸ್ಟ್ ಅಧ್ಯಕ್ಷ ಬಿ.ಎಚ್.ವೀರಭದ್ರಪ್ಪ ತಿಳಿಸಿದರು.
ಪೂರ್ವಭಾವಿ ಸಭೆಯಲ್ಲಿ ಸಮಾವೇಶ ಹಾಗೂ ಸಾಮೂಹಿಕ ಕಲ್ಯಾಣ ಮಹೋತ್ಸವದ ಕುರಿತು ಚರ್ಚಿಸಲಾಗಿದೆ. ಭಿನ್ನಾಭಿಪ್ರಾಯ ಮರೆತು ಸಮುದಾಯದ ಹಿತಾಸಕ್ತಿಗಾಗಿ ಎಲ್ಲರೂ ಒಗ್ಗೂಡುವ ಅಗತ್ಯವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಆಹ್ವಾನಿಸಲಾಗುತ್ತಿದೆ. ಸಮುದಾಯದ ಶಕ್ತಿ ಪ್ರದರ್ಶನಕ್ಕೆ ಇದೊಂದು ಅವಕಾಶ ಎಂದು ಹೇಳಿದರು.
ರಾಜ್ಯ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಎಲ್.ಎಂ.ಹನುಮಂತಪ್ಪ, ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ರವಿ ನಾರಾಯಣ, ಸಮುದಾಯದ ಮುಖಂಡರಾದ ಬಿ.ಎಂ.ರಾಮಸ್ವಾಮಿ, ನಿರಂಜನಮೂರ್ತಿ, ರಾಜಣ್ಣ, ಎಸ್.ಮಲ್ಲಿಕಾರ್ಜುನ್ ಇತರರಿದ್ದರು.
—-
ಆಯೋಗ ವರದಿಗೂ ಮುನ್ನ ನೇಮಕಾತಿ ಬೇಡ ಮಾದಿಗ ಮಠಾಧೀಶರ ಒತ್ತಾಯ
ಋತುಸ್ರಾವದ ಸಮಯದಲ್ಲಿ ಮೊಸರು ಸೇವಸಬಹುದೇ.. ಬೇಡವೇ; ಗೊಂದಲಕ್ಕೆ ಇಲ್ಲಿದೆ ಪರಿಹಾರ | Health Tips
ಮೊಸರು ಅಥವಾ ಉಪ್ಪಿನಕಾಯಿ ತಿನ್ನುವುದರಿಂದ ಋತುಸ್ರಾವದ ಸಮಯದಲ್ಲಿ ಸಮಸ್ಯೆಯಾಗುತ್ತದೆ ಎಂಬ ನಂಬಿಕೆಯಿದೆ. ಆದರೆ ಯಾವುದೇ ಆಹಾರವು…
ಉಸಿರಾಟದ ವ್ಯಾಯಾಮ ಗೊರಕೆ ಸಮಸ್ಯೆಗೆ ಪರಿಹಾರ; ಇದು ಸುಳ್ಳೋ-ಸತ್ಯವೋ.. ವೈದ್ಯರು ಹೇಳೋದೇನು? | Health Tips
ನಿದ್ರಿಸುವಾಗ ಗೊರಕೆ ಹೊಡೆಯುವ ವ್ಯಕ್ತಿಗೆ ಮಾತ್ರವಲ್ಲದೆ ಸುತ್ತಮುತ್ತಲಿನವರಿಗೂ ತೊಂದರೆಯ ಅನುಭವವಾಗುತ್ತದೆ. ಸಾಮಾನ್ಯವಾಗಿ ಇದನ್ನು ಲಘುವಾಗಿ ತೆಗೆದುಕೊಳ್ಳಲಾಗುತ್ತದೆ.…
Vastu Tips : ರಾತ್ರಿ ಮಲಗುವ ಮುನ್ನ ಈ ತಪ್ಪುಗಳನ್ನು ಮಾಡಬೇಡಿ!ಸಾಲದ ಸುಳಿಗೆ ಸಿಲುಕುತ್ತೀರಿ..!
Vastu Tips: ದೃಷ್ಟ ಚೆನ್ನಾಗಿದ್ದರೆ ಕೆಲವರು ರಾತ್ರೋರಾತ್ರಿ ಲಕ್ಷಾಧಿಪತಿಗಳಾಗುತ್ತಾರೆ. ಕೆಲವರು ಐಷಾರಾಮಿ ಜೀವನ ನಡೆಸಲು ಕಷ್ಟಪಡುತ್ತಾರೆ. ಅವರು…