28.5 C
Bengaluru
Monday, January 20, 2020

ಮಂದಿರಗಳ ದೇಶ ಭಾರತ

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ದಾವಣಗೆರೆ: ದೇವರು, ಧರ್ಮಕ್ಕೆ ಯಾವುದೇ ಭೇದ ಭಾವನೆ ಇಲ್ಲ. ಆದರೆ, ಇವುಗಳನ್ನು ಅನುಸರಿಸುವ ವ್ಯಕ್ತಿ ಮನಸಿನಲ್ಲಿ ಇದೆ ಎಂದು ಉಜ್ಜಯಿನಿ ಶ್ರೀ ಸಿದ್ದಲಿಂಗ ರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಹಾಗೂ ಮೇದಾರ ಗಿರಿಜನ ಅಭ್ಯುದಯ ಸೇವಾ ಸಂಘ ಸೋಮವಾರ ನಗರದ ಬಂಬೂಬಜಾರ್‌ನ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ರಥ ಉದ್ಘಾಟಿಸಿ ಮಾತನಾಡಿದರು.

ಕೆಲ ವಿಚಾರವಾದಿಗಳು ದೇವರು, ಹೆತ್ತ ತಾಯಿ, ಹೊತ್ತ ಭೂಮಿಯನ್ನು ಅಲ್ಲಗಳೆಯುತ್ತಿದ್ದಾರೆ. ದೇವರನ್ನು ಕಲ್ಲು ಎಂದು ವಾದಿಸುತ್ತಿದ್ದಾರೆ. ಆದರೆ, ನಾವು ದೇಗುಲಕ್ಕೆ ಯಾವ ಭಾವನೆಯಿಂದ ಹೋಗುತ್ತೇವೆ. ಅದೇ ಭಾವನೆ ಮನಸಿನಲ್ಲಿ ಬರುತ್ತದೆ.

ಕಲ್ಲು ಎಂದುಕೊಂಡರೆ ಕಲ್ಲಾಗಿ ಕಾಣುತ್ತದೆ. ಹಾಗಾಗಿ ದೇವರಲ್ಲಿ ನಂಬಿಕೆ, ಶ್ರದ್ಧೆ, ವಿಶ್ವಾಸ ಇರಬೇಕು. ಆಗ ಕಲ್ಲು ದೇವರಾಗಿ, ನೀರು ತೀರ್ಥವಾಗಿ, ಹಣ್ಣು-ಕಾಯಿ ಪ್ರಸಾದವಾಗಿ ಬದಲಾಗುತ್ತದೆ. ಆದ್ದರಿಂದ ನಮ್ಮ ಮನಸ್ಸಿನರುವಂತೆ ನಮಗೆ ಫಲ ಪ್ರಾಪ್ತವಾಗುತ್ತದೆ ಎಂದರು.

ದೇವರು ಅವನಿಗೆ ಏನು ಬೇಕೆಂದು ಕೇಳುವುದಿಲ್ಲ. ನಮ್ಮ ಮನಸ್ಸಿನಲ್ಲಿ ಆಸೆ ಇಟ್ಟುಕೊಂಡು ದೇಗುಲಗಳಿಗೆ ಹೋಗುತ್ತೇವೆ. ಆದರೆ, ಯಾವಾಗ ನಮಗೆ ಮತ್ತೊಬ್ಬರಿಗೆ ಕೊಡುವ ಮನಸು ಬರುತ್ತದೆಯೋ ಆಗ ದೇವರಿಗೆ ಹತ್ತಿರವಾಗುತ್ತೇವೆ ಎಂದು ತಿಳಿಸಿದರು.

ಭಾರತ ಮಂದಿರಗಳ ದೇಶ. ಇಲ್ಲಿ ಧರ್ಮ, ದೇವರು, ಆಧ್ಯಾತ್ಮ, ಗುರು-ಹಿರಿಯರು, ಹೆತ್ತವರನ್ನು ಗೌರವದಿಂದ ಕಾಣಲಾಗುತ್ತದೆ. ಭೂಮಿಗೆ ಮಾತೃ, ತಾಯಿಗೆ ದೈವಸ್ಥಾನ ನೀಡಿದ ಪರಂಪರೆ ಇದೆ. ಇದರಿಂದ ಈಡೀ ಜಗತ್ತು ಭಾರತವನ್ನು ಪ್ರೀತಿಸುತ್ತದೆ ಎಂದರು.

ಶಾಸಕ ಎಸ್.ಎ.ರವೀಂದ್ರನಾಥ್ ಮಾತನಾಡಿ, ಮೇದಾರ ಸಮಾಜದವರು ಪುಟ್ಟಿ ಹೆಣೆದು ಕಷ್ಟದ ಜೀವನ ಸಾಗಿಸುತ್ತಿದ್ದರು. ಶ್ರಮದಿಂದ ಅವರು ಪ್ರಗತಿ ಹೊಂದುತ್ತಿದ್ದಾರೆ ಎಂದು ತಿಳಿಸಿದರು.


ಮೇದಾರ ಸಮಾಜದವರು ಕಾಯಕ ಜೀವಿಗಳು. ಮತ್ತೊಬ್ಬರಿಗೆ ಕೆಡಕನ್ನು ಮಾಡದೇ ಸಮುದಾಯದ ಏಳಿಗೆಯತ್ತ ಗಮನ ಹರಿಸಬೇಕು. ಸಮಾಜದವರಲ್ಲಿ ಸಮೂಹ ಕಾರ್ಯಗಳಲ್ಲಿ ಒಂದಾಗುತ್ತಿರಿ. ದೇವರು, ಧಾರ್ಮಿಕ ವಿಚಾರಗಳಲ್ಲಿ ಏಕತೆ ಇದೆ ಎಂದು ಉಜ್ಜಿನಿ ಶ್ರೀ ಸಿದ್ದಲಿಂಗ ಸ್ವಾಮೀಜಿ ತಿಳಿಸಿದರು.


ಜನಸಂಖ್ಯೆಯಲ್ಲಿ ಕಡಿಮೆ ಇರುವ ಮೇದಾರ ಸಮಾಜ ಪ್ರಗತಿ ಹೊಂದಬೇಕು. ಇದಕ್ಕಾಗಿ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಶರಣ ಕೇತೇಶ್ವರ ಕಾಯಕ ಸಂಸ್ಕೃತಿ ಪಾಲಿಸಬೇಕು ಎಂದು ಶ್ರೀ ಇಮ್ಮಡಿ ಬಸವ ಮೇದಾರ ಸ್ವಾಮೀಜಿ ಹೇಳಿದರು.

ಮೇದಾರ ಸಮಾಜದವರಲ್ಲಿ ಶಿಸ್ತು, ಕಾಯಕ, ಬದ್ಧತೆ ಇದೆ. ಪೀಠ-ಶರಣ ಸಂಸ್ಕೃತಿಯನ್ನು ಮುಂದುವರಿಸಿಕೊಂಡು ಬಂದಿದೆ ಎಂದು ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಮೇದಾರ ಸಮುದಾಯ ವೃತ್ತಿಯಿಂದ ಬೆಳೆದು ಬಂದಿದೆ. ಚಿತ್ರದುರ್ಗದಲ್ಲಿ ಮಠವಿದ್ದು, ಗುರುಗಳು ರಾಜ್ಯದಲ್ಲಿ ಪ್ರವಾಸ ಮಾಡಿ ಮಾರ್ಗದರ್ಶನ ಮಾಡಬೇಕು. ಸಮಾಜದ ಕಾರ್ಯಗಳಿಗೆ ತಮ್ಮ ಸಹಕಾರ ಇದೆ. ರಥಕ್ಕೆ 25 ಸಾವಿರ ರೂ. ದೇಣಿಗೆ ನೀಡಲಾಗುವುದು ಎಂದು ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದರು.

ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ದೇವಮನೆ ಶಿವಕುಮಾರ್, ಮೇದಾರ ಸಮಾಜದ ಮುಖಂಡರಾದ ನಾಗೇಶ್, ಸುರೇಶ್ ಕೊಗಲಗೇರಿ, ನಂಜಯ್ಯ, ಯು.ಗಿರೀಶ್, ಬಳ್ಳಾರಿ ತಿಮ್ಮಣ್ಣ, ಕೃಷ್ಣಪ್ಪ, ದೇವೇಂದ್ರಪ್ಪ, ರಮೇಶ್ ಇತರರಿದ್ದರು.

ಸಮಾಜದ ಮುಖಂಡರು, ಯುವಕರು, ಜನಪ್ರತಿನಿಧಿಗಳು, ಪ್ರತಿಭಾವಂತ ವಿದ್ಯಾರ್ಥಿನಿಯನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕೂ ಮೊದಲು ಶ್ರೀಗಳನ್ನು ಕುಂಭಮೇಳದೊಂದಿಗೆ ಮೆರವೆಣಿಗೆ ಮಾಡಲಾಯಿತು. ವಿವಿಧ ಕಲಾತಂಡಗಳು ಭಾಗವಹಿಸಿದ್ದವು.

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...