ದಾವಣಗೆರೆ: ಖಾಸಗಿ ಶಾಲೆಗಳ ಪೈಪೋಟಿ ಎದುರಿಸಲು ಸರ್ಕಾರಿ ಶಾಲೆಗಳಲ್ಲಿ ಸೌಲಭ್ಯಗಳನ್ನು ವಿಸ್ತರಿಸಿ, ಶಿಕ್ಷಣದ ಗುಣಮಟ್ಟ ಹೆಚ್ಚಿಸಬೇಕು ಎಂದು ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ನ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ ಆಗ್ರಹಿಸಿದರು.
ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ನ ಸಾಮಾಜಿಕ ಕಳಕಳಿ ಕಾರ್ಯಕ್ರಮದಡಿ ಬ್ಯಾಂಕ್ ರಾಷ್ಟ್ರೀಕರಣದ 56 ನೇ ವರ್ಷಾಚರಣೆ ನಿಮಿತ್ತ ದಾವಣಗೆರೆ ತಾಲೂಕಿನ ತುರ್ಚಘಟ್ಟದ ಸರ್ಕಾರಿ ಹಿ.ಪ್ರಾ. ಶಾಲೆಯಲ್ಲಿ ಪೂರ್ವಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಿಗೆ ಕುರ್ಚಿಗಳ ಕೊಡುಗೆ ನೀಡಿ ಮಾತನಾಡಿದರು.
ಸರ್ಕಾರಿ ಶಾಲೆಗಳು ನಾಡಿನ ಹೆಮ್ಮೆ. ಇಲ್ಲಿ ಕಲಿತ ಅನೇಕರು ವಿಜ್ಞಾನ, ತಂತ್ರಜ್ಞಾನ, ಸಂಶೋಧನೆ, ಕಲೆ ಮುಂತಾದ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮೆರೆದಿದ್ದಾರೆ. ಹಾಗಾಗಿ ಖಾಸಗಿ ಶಾಲೆಗಳಿಗೆ ಅನಗತ್ಯ ಪ್ರೋತ್ಸಾಹ ನೀಡುವುದನ್ನು ಬಿಟ್ಟು ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸರ್ಕಾರ ಮುಂದಾಗಬೇಕು. ಶಿಕ್ಷಕರು, ಸಾರ್ವಜನಿಕರೂ ಕೈಜೋಡಿಸಬೇಕು ಎಂದರು.
ಕೆನರಾ ಬ್ಯಾಂಕ್ ನಿವೃತ್ತ ನೌಕರರ ಸಂಘದ ಪ್ರಾದೇಶಿಕ ಕಾರ್ಯದರ್ಶಿ ಎಚ್. ಸೂಗೂರಪ್ಪ ಮಾತನಾಡಿ ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಹೆಚ್ಚಿಸಬೇಕು. ದುಸ್ಥಿತಿಯಲ್ಲಿನ ಕನ್ನಡ ಶಾಲೆಗಳನ್ನು ಆದ್ಯತೆಯ ಮೇರೆಗೆ ಅಭಿವೃದ್ಧಿಪಡಿಸಬೇಕು ಎಂದರು.
ಶಾಲೆಯ ಮುಖ್ಯ ಶಿಕ್ಷಕಿ ಕಲ್ಪನಾ ಮಾತನಾಡಿದರು. ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ನೌಕರರ ಸಂಘದ ರಾಜ್ಯ ಸಮಿತಿ ಸದಸ್ಯರಾದ ಕೆ.ವಿಶ್ವನಾಥ್ ಬಿಲ್ಲವ, ಆರ್. ಆಂಜನೇಯ, ಸಿ.ಪರಶುರಾಮ, ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಕಾರ್ಯದರ್ಶಿ ಎಚ್.ಎಸ್.ತಿಪ್ಪೇಸ್ವಾಮಿ, ಮಾಜಿ ಅಧ್ಯಕ್ಷ ಅಜಿತ್‌ಕುಮಾರ್ ನ್ಯಾಮತಿ, ಅಣ್ಣಪ್ಪ ನಂದಾ, ಚಾಂದ್ ಬಾಷಾ, ಡಿ.ಹರ್ಷದ್, ನಾಗರತ್ನಮ್ಮ, ಅಶ್ವಿನಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಾಗರಾಜ್, ಗ್ರಾ.ಪಂ. ಮಾಜಿ ಅಧ್ಯಕ್ಷ ಹನುಮಂತಪ್ಪ ಇತರರಿದ್ದರು
ಸಬಲೀಕರಣವಾಗಲಿ ಕನ್ನಡ ಶಾಲೆಗಳು
ನಿಮ್ಮ ಅಂಗೈನಲ್ಲಿ ಮೀನಿನ ಚಿಹ್ನೆ ಇದ್ರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ನೋಡಿ ಅಚ್ಚರಿಯ ಸಂಗತಿ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
30 ದಿನಗಳಲ್ಲೇ ಸ್ಲಿಮ್ ಆ್ಯಂಡ್ ಫಿಟ್ ಆಗಬೇಕಾ? ಪ್ರತಿದಿನ ಇಡ್ಲಿ ತಿನ್ನಿ
ಬೆಂಗಳೂರು: ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ತೂಕ ಇಳಿಸಿಕೊಳ್ಳಬೇಕಾ? ಸುಮ್ಮನೆ ಈ ಹಣ್ಣು, ಸೊಪ್ಪಿನ ವಾಸನೆಯನ್ನು ಒಮ್ಮೆ ಉಸಿರಾಡಿದ್ರೆ ಸಾಕು
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…