ದಾವಣಗೆರೆ: ಜಗದ್ಗುರು ಆದಿ ಶಂಕರಾಚಾರ್ಯ ಜಯಂತ್ಯುತ್ಸವ ಅಂಗವಾಗಿ ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿ ಭಾನುವಾರ ಶ್ರೀ ಶಂಕರಾಚಾರ್ಯರ ಅದ್ದೂರಿ ಮೆರವಣಿಗೆ ನಡೆಸಲಾಯಿತು.ಶಂಕರಾಚಾರ್ಯರ ಮೂರ್ತಿಯನ್ನು ಪಲ್ಲಕ್ಕಿಯಲ್ಲಿರಿಸಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮಧು ಅವರ ತಂಡದಿಂದ ಚಂಡೆ ವಾದನ, ಮಹಿಳೆಯರು ಹಾಗೂ ಮುಖಂಡರು ನೃತ್ಯದೊಂದಿಗೆ ಹೆಜ್ಜೆ ಹಾಕಿದರು.ಶ್ರೀ ಶಂಕರ ಸೇವಾ ಸಂಘದ ಉಪಾಧ್ಯಕ್ಷ ಮೋತಿ ಸುಬ್ರಹ್ಮಣ್ಯ ಉತ್ಸವದ ನೇತೃತ್ವ ವಹಿಸಿದ್ದರು. ಕಾರ್ಯದರ್ಶಿಗಳಾದ ಶ್ರೀನಿವಾಸ್ ಜೋಷಿ, ಮಾಜಿ ಅಧ್ಯಕ್ಷ ಡಾ. ಎಸ್.ಆರ್. ಹೆಗಡೆ, ಪುರೋಹಿತರಾದ ಪುಟ್ಟಸ್ವಾಮಿ, ಸಂಘದ ಸದಸ್ಯರಾದ ವಿನಾಯಕ ಜೋಷಿ, ಸುಬ್ಬಣ್ಣ (ಮಂಡಕ್ಕಿ) ಅನಿಲ್ ಬಾರೆಂಗಳ್, ಬಾಲಕೃಷ್ಣ ವೈದ್ಯ, ಚೈತನ್ಯ ನಾರಾಯಣಸ್ವಾಮಿ, ರಾಘವೇಂದ್ರ, ಶ್ರೀಕಾಂತ್ ಜೋಷಿ, ರಮೇಶ್ ಪಾಟೀಲ್, ಎಂ. ಶ್ರೀಕಾಂತ್ ಹಾಗೂ ಇತರರು ಪಾಲ್ಗೊಂಡಿದ್ದರು.
ಚಳಿಗಾಲದಲ್ಲಿ ಹುಣಸೆಹಣ್ಣು ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? health benefits of tamarind
health benefits of tamarind : ನಮ್ಮ ದಿನನಿತ್ಯದ ಅಡುಗೆಯಲ್ಲಿ ಹುಣಸೆಹಣ್ಣನ್ನು ಬಳಸುವುದರಿಂದ ನಮಗೆ ಅರಿವಿಲ್ಲದೆಯೇ…
ವಾರದಲ್ಲಿ ಎರಡು ಬಾರಿ ಈ ಜ್ಯೂಸ್ ಕುಡಿದರೆ ಸಾಕು ನಿಮ್ಮ ಕಿಡ್ನಿಗಳು ಫುಲ್ ಕ್ಲೀನ್ ಆಗಿಬಿಡುತ್ತವೆ! Kidney Health
Kidney Health : ಮೂತ್ರಪಿಂಡಗಳನ್ನು ಮಾನವ ದೇಹದ ಪ್ರಮುಖ ಅಂಗಗಳೆಂದು ಪರಿಗಣಿಸಲಾಗಿದೆ. ಈ ಮೂತ್ರಪಿಂಡಗಳು ರಕ್ತವನ್ನು…
ನಿಮ್ಮ ಸಿಬಿಲ್ ಸ್ಕೋರ್ ಕುಸಿದಿದ್ಯಾ? ರಾಕೆಟ್ನಂತೆ ಜಿಗಿಯಲು ಈ ಸಿಂಪಲ್ ಟಿಪ್ ಅನುಸರಿಸಿ | CIBIL Score
Cibil Score: ಇತ್ತೀಚಿನ ದಿನಗಳಲ್ಲಿ ಯಾರಿಗೆ ಹಣದ ಅವಶ್ಯಕತೆ ಇಲ್ಲ ಹೇಳಿ? ಬಡವನಿಂದ ಹಿಡಿದು ಶ್ರೀಮಂತರವರೆಗೂ…