ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ

ದಾವಣಗೆರೆ: ನೂತನ ಜಿಲ್ಲಾಧಿಕಾರಿಯಾಗಿ ಮಹಾಂತೇಶ್ ಜಿ.ಬೀಳಗಿ ಮಂಗಳವಾರ ಅಧಿಕಾರ ವಹಿಸಿಕೊಂಡರು.

ಬೆಳಗ್ಗೆ ಕಚೇರಿಗೆ ಆಗಮಿಸಿದ ಅವರನ್ನು ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.

ಈ ಹಿಂದೆ ದಾವಣಗೆರೆ ಜಿಲ್ಲೆಯಲ್ಲಿ ಉಪ ವಿಭಾಗಾಧಿಕಾರಿಯಾಗಿದ್ದ ಅವರು ಬೀದರ್ ಜಿಪಂ ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.