18.1 C
Bangalore
Saturday, December 7, 2019

ಸಮಾಜಮುಖಿ ಚಿಂತನೆ ಇರಲಿ

Latest News

ಅಂಗನವಾಡಿಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಿ

ಕಾರವಾರ: ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಗದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ದಾವಣಗೆರೆ: ಅಧ್ಯಾಪಕರು ಅಧ್ಯಯನಶೀಲತೆ ಮೈಗೂಡಿಸಿಕೊಳ್ಳುವ ಜತೆಗೆ ಸಮಾಜಮುಖಿ ಚಿಂತನೆ ಬೆಳೆಸಿಕೊಳ್ಳಬೇಕು ಎಂದು ದಾವಣಗೆರೆ ವಿವಿಯ ಮಾಜಿ ಕುಲಸಚಿವ ಪ್ರೊ.ಬಿ.ಬಕ್ಕಪ್ಪ ಹೇಳಿದರು.

ದಾವಣಗೆರೆ ವಿವಿಯ ಎಂಬಿಎ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಶಿಕ್ಷಕರ ಸ್ಥಾನ ಬಹಳ ಎತ್ತರದ್ದಾಗಿದ್ದು, ರಾಷ್ಟ್ರಪತಿ ಹುದ್ದೆಗಿಂತಲೂ ದೊಡ್ಡದಾಗಿದೆ. ಒಳ್ಳೆಯ ನಡೆ, ನುಡಿ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಹಣ ಗಳಿಕೆ ಶಿಕ್ಷಣ ಕ್ಷೇತ್ರದ ಉದ್ದೇಶವಾಗಬಾರದು. ವಿವಿಗಳು ಸಿದ್ಧಾಂತವನ್ನು ಹೊಂದಿರಬೇಕು. ಸೃಜನಶೀಲ ಮನಸ್ಸು ಹಾಗೂ ವಿಮರ್ಶಾತ್ಮಕ ಚಿಂತನೆ ಬೆಳೆಸುವುದು ಉನ್ನತ ಶಿಕ್ಷಣದ ಗುರಿಯಾಗಬೇಕು ಎಂದು ಹೇಳಿದರು.

ಅಧ್ಯಾಪಕರಿಗೆ ಡಾ.ಎಸ್.ರಾಧಾಕೃಷ್ಣನ್ ಮಾದರಿಯಾಗಿದ್ದಾರೆ. ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಸಮಾಜದ ಅನಿಷ್ಟ ಪದ್ಧತಿ ವಿರುದ್ಧ ಧ್ವನಿ ಎತ್ತಬೇಕು. ಗುಂಪುಗಾರಿಕೆಯಲ್ಲಿ ತೊಡಗಬಾರದು. ಪಿಎಚ್.ಡಿ.ಗಳನ್ನು ಮಾರಿಕೊಳ್ಳಬಾರದು ಎಂದು ಕಿವಿಮಾತು ಹೇಳಿದರು.

ಕುಲಪತಿ ಪ್ರೊ.ಎಸ್.ವಿ.ಹಲಸೆ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳಲ್ಲಿರುವ ನಕಾರಾತ್ಮಕ ವಿಚಾರಗಳನ್ನು ದೂರ ಮಾಡಿ, ಅವರಲ್ಲಿರುವ ಸಕಾರಾತ್ಮಕ ಅಂಶಗಳನ್ನು ಬೆಳೆಸಬೇಕು ಎಂದು ಹೇಳಿದರು.

ನಮ್ಮ ಸಂಸ್ಕೃತಿಯಲ್ಲಿ ಗುರುವಿಗೆ ದೊಡ್ಡ ಸ್ಥಾನವಿದೆ. ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಗುರುತಿಸಿ ಅವರ ಪ್ರತಿಭೆಯನ್ನು ಬೆಳಕಿಗೆ ತರುವುದು, ಬದುಕಿನ ದಾರಿ ತೋರುವುದು ಅವರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಕುಲಸಚಿವ (ಆಡಳಿತ) ಪ್ರೊ.ಪಿ.ಕಣ್ಣನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಲಾ ನಿಕಾಯದ ಡೀನ್ ಪ್ರೊ.ಕೆ.ಬಿ.ರಂಗಪ್ಪ ಅತಿಥಿಗಳನ್ನು ಪರಿಚಯಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಡಾ.ರಾಜ್‌ಕುಮಾರ್ ನಿರೂಪಿಸಿದರು.

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...