ಭಾರತ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆ

 

ದಾವಣಗೆರೆ: ನಗರದಲ್ಲಿ ಮೂರು ದಶಕಗಳಿಗಿಂತ ಹೆಚ್ಚು ಕಾಲ ಪತ್ರಿಕಾ ವಿತರಕರಾಗಿರುವ ಎ.ಎನ್.ಕೃಷ್ಣಮೂರ್ತಿ, ಭಾರತೀಯ ಕಲಾ ಮತ್ತು ಸಾಂಸ್ಕೃತಿಕ ಅಕಾಡೆಮಿ ನೀಡುವ ‘ಭಾರತ ಸೇವಾ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಆ.18ರಂದು ಬೆಳಗ್ಗೆ 11ಕ್ಕೆ ಚನ್ನಗಿರಿ ವಿರೂಪಾಕ್ಷಪ್ಪ ಕಲ್ಯಾಣ ಮಂಟಪದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.