ದಾವಣಗೆರೆ: ಅಂಗವಿಕಲರಿಗೆ ಸರ್ಕಾರಿ ಸೌಲಭ್ಯ ಒದಗಿಸುವ ಸಂದರ್ಭದಲ್ಲಿ ಹಣ ವಸೂಲಿ ಮಾಡುವುದು ಹಾಗೂ ಸೌಕರ್ಯ ನೀಡಲು ವಿಳಂಬ ಮಾಡಿದಲ್ಲಿ ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲು ಮೇಲಧಿಕಾರಿಗಳಿಗೆ ಸೂಚಿಸುವುದಾಗಿ ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ನಗರದ ಹಳೆಯ ಪ್ರವಾಸಿ ಮಂದಿರದಲ್ಲಿ ಭಾನುವಾರ ದೈಹಿಕ ಅಂಗವಿಕಲರಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನ ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ 23 ಅರ್ಹ ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಣೆ ಮಾಡಿ ಮಾತನಾಡಿದರು.
ವಿಕಲಚೇತನರಿಗೆ ಪಿಂಚಣಿ, ವೃದ್ಧಾಪ್ಯ ವೇತನ, ತ್ರಿಚಕ್ರ ವಾಹನ, ಸಾಲಸೌಲಭ್ಯ ಸೇರಿ ವಿವಿಧ ಹಲವಾರು ಯೋಜನೆಗಳ ಮೂಲಕ ಸರ್ಕಾರ ಕೋಟ್ಯಂತರ ರೂ. ವ್ಯಯ ಮಾಡುತ್ತದೆ. ಆದರೆ ಅಧಿಕಾರಿಗಳು ಅವರಿಗೆ ಸರ್ಕಾರಿ ಸೌಲಭ್ಯ ಕಲ್ಪಿಸಿ, ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸೌಲಭ್ಯ ಕಲ್ಪಿಸಲು ಫಲಾನುಭವಿಗಳಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ಈ ರೀತಿ ಆಗದಂತೆ ಅಧಿಕಾರಿಗಳು ಅವರಿಗೆ ಸೌಲಭ್ಯ ಕಲ್ಪಿಸುವ ಕೆಲಸ ಮಾಡಬೇಕೆಂದು ತಾಕೀತು ಮಾಡಿದರು.
ಈ ಸಂದರ್ಭದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಡಾ.ಕೆ.ಕೆ.ಪ್ರಕಾಶ್, ಬಸವಾಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಡಿ.ತಿಪ್ಪಣ್ಣ ಕತ್ತಲಗೆರೆ, ಆನಗೋಡು ಕರಿಬಸಪ್ಪ, ದಾಗಿನಕಟ್ಟೆ ಚಂದ್ರಣ್ಣ, ಮರಮನಹಳ್ಳಿ ಅಂಜಿನಪ್ಪ ಕಾಂಗ್ರೆಸ್ ಮುಖಂಡರು ಹಾಗೂ ಫಲಾನುಭವಿಗಳು ಇದ್ದರು.
ವಿಕಲಾಂಗರಿಂದ ಹಣ ಪಡೆದಲ್ಲಿ ಶಿಸ್ತುಕ್ರಮ ಶಾಸಕರ ಎಚ್ಚರಿಕೆ

ಸಂಬಳ ಸಾಲ್ತಿಲ್ಲ! ಸಾಲ ತೀರಿಸಲು ಚಿನ್ನದ ಸಾಲ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳನ್ನು ಮಾತ್ರ ಮಾಡಬೇಡಿ | Gold Loan
Gold Loan: ಸಂಸ್ಥೆ ಕೊಡುತ್ತಿರುವ ಸಂಬಳ ನಮಗೆ ಮಾತ್ರವಲ್ಲ, ನಮ್ಮ ಸಾಲ ತೀರಿಸಲು ಸಹ ಸಾಲುತ್ತಿಲ್ಲ…
ಭಾರತದಲ್ಲಿ ಅನಾರೋಗ್ಯಕರ ಆಹಾರ ಸೇವನೆಯೇ ಹೆಚ್ಚು: ಶೇ. 56 ರೋಗಗಳಿಗೆ ಕೆಟ್ಟ ಆಹಾರ ಪದ್ಧತಿ ಕಾರಣವೆಂದ ಏಮ್ಸ್! Indians Food
Indians Food : ಭಾರತದಲ್ಲಿ ಬೊಜ್ಜು ಅಥವಾ ಸ್ಥೂಲಕಾಯತೆ ಇಂದು ಸಾಮಾನ್ಯ ಹಾಗೂ ಸಂಕೀರ್ಣ ಕಾಯಿಲೆಗಳಲ್ಲಿ…
ನೀವು ಚಿಕನ್ ಅಥವಾ ಮಟನ್ ಲಿವರ್ ತಿಂತಿರಾ? ಹಾಗಾದ್ರೆ ಎಚ್ಚರ! ಈ ವಿಚಾರ ನಿಮಗೆ ಗೊತ್ತಿರಲೇಬೇಕು… Liver
Liver : ಮಾಂಸಾಹಾರ ಬಹುತೇಕರ ಪ್ರಿಯವಾದ ಆಹಾರ. ಬೇರೆ ಯಾವುದನ್ನು ಬೇಕಾದರೂ ಬಿಡುತ್ತೇನೆ ಆದರೆ, ಒಂದು…