More

    ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡುಲ್ಕರ್​ ಹೆಸರಿನಲ್ಲಿದ್ದ ವಿಶ್ವದಾಖಲೆ ಮುರಿದ ಡೇವಿಡ್​ ವಾರ್ನರ್​

    ನವದೆಹಲಿ: ಆಸ್ಟ್ರೇಲಿಯಾ ತಂಡದ ಸ್ಫೋಟಕ ಬ್ಯಾಟ್ಸ್​ಮನ್​ ಡೇವಿಡ್​ ವಾರ್ನರ್​ ಟೆಸ್ಟ್​ ಹಾಗೂ ಏಕದಿನ ಕ್ರಿಕೆಟ್​ಗೆ ವಿದಾಯ ಘೋಷಿಸಿದ್ಧಾರೆ. ಕ್ರಿಕೆಟ್​​ಗೆ ವಿದಾಯ ಘೋಷಿಸುವುದರ ಜೊತೆಗೆ ಹಲವು ದಾಖಲೆಗಳನ್ನು ನಿರ್ಮಿಸಿರುವ ವಾರ್ನರ್​ ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡುಲ್ಕರ್​ ಹೆಸರಿನಲ್ಲಿರುವ ವಿಶ್ವದಾಖಲೆಯನ್ನು ಸರಿಗಟ್ಟಿದ್ದಾರೆ.

    ಅಂತರಾಷ್ಟ್ರೀಯ ಕ್ರಿಕಟ್​ನಲ್ಲಿ ಆರಂಭಿಕ ಬ್ಯಾಟ್ಸ್​ಮನ್​ ಆಗಿ ಸಚಿನ್​ ತೆಂಡುಲ್ಕರ್​ ಅತ್ಯಧಿಕ ಶತಕ ಗಳಿಸಿದ ದಾಖಲೆ ಹೊಂದಿದ್ದರು. 342 ಇನಿಂಗ್ಸ್ ಆಡಿರುವ ಸಚಿನ್​ ತೆಂಡುಲ್ಕರ್​ 45 ಶತಕಗಳನ್ನು ಬಾರಿಸಿದ್ದಾರೆ. ಆಸ್ಟ್ರೇಲಿಯಾ ಪರ 451 ಇನಿಂಗ್ಸ್​ಗಳಲ್ಲಿ ಆಡಿರುವ ಡೇವಿಡ್​ ವಾರ್ನರ್​ 49 ಶತಕಗಳನ್ನು ಸಿಡಿಸಿ ಅತಿ ಹೆಚ್ಚು ಶತಕ ಬಾರಿಸಿದ ಆರಂಭಿಕ ಬ್ಯಾಟರ್ ಎನಿಸಿಕೊಂಡಿದ್ದಾರೆ. ಮೂರನೇ ಸ್ಥಾನದಲ್ಲಿ ವೆಸ್ಟ್​ ಇಂಡೀಸ್​ನ ಮಾಜಿ ಆಟಗಾರ ಕ್ರಿಸ್​ ಗೇಲ್​ ಇದ್ದು, 506 ಇನಿಂಗ್ಸ್​ನಿಂದ 42 ಶತಗಳನ್ನು ಬಾರಿಸಿದ್ದಾರೆ.

    ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿರುವ ಡೇವಿಡ್ ವಾರ್ನರ್ ಟಿ20 ಕ್ರಿಕೆಟ್​ನಲ್ಲಿ ಮುಂದುವರೆಯುವ ಇಚ್ಛೆ ಹೊಂದಿದ್ದಾರೆ. ಅದರಂತೆ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ವಿಶ್ವಾಸದಲ್ಲಿದ್ದಾರೆ. ಒಂದು ವೇಳೆ ಮುಂಬರುವ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯದಿದ್ದರೆ ಟಿ20 ಕ್ರಿಕೆಟ್​ಗೂ ಡೇವಿಡ್ ವಾರ್ನರ್ ವಿದಾಯ ಹೇಳುವ ಸಾಧ್ಯತೆ ದಟ್ಟವಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts