ಪಂಚಾಯಿತಿಗೊಂದು ಮದ್ಯದಂಗಡಿ ತೆರೆಯಲು ಸರ್ಕಾರದ ಚಿಂತನೆ: ಇದನ್ನು ವಿರೋಧಿಸಿ ನೂರಾರು ಮಹಿಳೆಯರ ಅಹೋರಾತ್ರಿ ಪ್ರತಿಭಟನೆ

ಬಾಗಲಕೋಟೆ: ಪಂಚಾಯಿತಿಗೊಂದು ಮದ್ಯದಂಗಡಿ ತೆರೆಯಬೇಕು ಎಂಬ ಸರ್ಕಾರದ ಚಿಂತನೆಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗಿದ್ದು, ಇದೀಗ ನೂರಾರು ಮಹಿಳೆಯರು ಇದನ್ನು ವಿರೋಧಿಸಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಾಗಲಕೋಟೆ ಜಿಲ್ಲಾಡಳಿತ ಭವನದ ಎದುರು ಈ ಪ್ರತಿಭಟನೆ ನಡೆದಿದೆ. ಮದ್ಯ ನಿಷೇಧ ಆಂದೋಲನ ಕರ್ನಾಟಕ, ರಾಜ್ಯ ಮಹಿಳಾ ಒಕ್ಕೂಟ, ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಗಳ ನೇತೃತ್ವದಲ್ಲಿ ನೂರಾರು ಮಹಿಳೆಯರು ನಿನ್ನೆ ಬೆಳಗ್ಗೆಯಿಂದ ಇಂದು ಬೆಳಗಿನವರೆಗೂ ಧರಣಿ ನಡೆಸಿದ್ದಾರೆ. ರಾಜ್ಯದಲ್ಲಿ ಪಂಚಾಯಿತಿಗೊಂದು ಮದ್ಯದಂಗಡಿ ತೆರೆಯುವ ಚಿಂತನೆ ನಡೆಸಿರುವ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ … Continue reading ಪಂಚಾಯಿತಿಗೊಂದು ಮದ್ಯದಂಗಡಿ ತೆರೆಯಲು ಸರ್ಕಾರದ ಚಿಂತನೆ: ಇದನ್ನು ವಿರೋಧಿಸಿ ನೂರಾರು ಮಹಿಳೆಯರ ಅಹೋರಾತ್ರಿ ಪ್ರತಿಭಟನೆ