More

    ಪೊಲೀಸರ ತ್ಯಾಗ, ಬಲಿದಾನ ಸಿಬ್ಬಂದಿಗೆ ಸ್ಫೂರ್ತಿ : ಜಿಲ್ಲಾಧಿಕಾರಿ ರಾಕೇಶ್‌ಕುಮಾರ್ ಹೇಳಿಕೆ

    ಚನ್ನಪಟ್ಟಣ :  ಹುತಾತ್ಮರ ತ್ಯಾಗ ಬಲಿದಾನಗಳು ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಇಲಾಖೆ ಸಿಬ್ಬಂದಿಗೆ ಸ್ಫೂರ್ತಿಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‌ಕುಮಾರ್ ತಿಳಿಸಿದರು.
    ನಗರದ ಜಿಲ್ಲಾ ಪೊಲೀಸ್ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚ ಅರ್ಪಿಸಿ ಮಾತನಾಡಿದರು.

    ಪ್ರತಿಯೊಬ್ಬ ಪೊಲೀಸ್ ಅಧಿಕಾರಿಯೂ ದಕ್ಷತೆ, ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಲು ಹುತಾತ್ಮರು ಪ್ರೇರಣೆಯಾಗಿದ್ದಾರೆ. ಪೊಲೀಸರ ಶ್ರಮ ಮತ್ತು ಬಲಿದಾನದಿಂದ ಸಮಾಜದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ. ಮುಂದಿನ ಪೀಳಿಗೆಯು ಸಹ ಹುತಾತ್ಮ ಪೊಲೀಸರ ಬಗ್ಗೆ ಗೌರವ ಭಾವನೆ ಹೊಂದಬೇಕು ಎಂದರು.ಯಾವುದೇ ಜಾತಿ, ಧರ್ಮ ಭೇದವಿಲ್ಲದೆ ಹುತಾತ್ಮರ ಹೆಸರು ಪಟ್ಟಿಯಲ್ಲಿದೆ. ಪ್ರತಿಯೊಬ್ಬರೂ ಸಮಾಜದಲ್ಲಿ ಶಾಂತಿ ಕಾಪಾಡಲು ಪೊಲೀಸ್ ಇಲಾಖೆ ರೂಪಿಸುವ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಇಲಾಖೆಗೆ ಯಾವುದೇ ಮುಜುಗರ ಉಂಟಾಗದಂತೆ ನೋಡಿಕೊಳ್ಳಬೇಕು. ಧರ್ಮದ ಹೆಸರಲ್ಲಿ ಗೊಂದಲ ಸೃಷ್ಟಿಸಬಾರದು.

    ಸಮಾಜದ ಹಿತಕ್ಕಾಗಿ ಹಗಲಿರುಳು ದುಡಿಯುವ ಪೊಲೀಸರನ್ನು ಗೌರವಿಸಬೇಕು ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಗಿರೀಶ್ ಮಾತನಾಡಿ, ಪ್ರತಿವರ್ಷ ಅಕ್ಟೋಬರ್ 21ರಂದು ದೇಶಾದ್ಯಂತ ಪೊಲೀಸ್ ಹುತಾತ್ಮ ದಿನ ಆಚರಿಸಿ ಗೌರವ ಸಲ್ಲಿಸಲಾಗುತ್ತದೆ. ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ ಕರ್ತವ್ಯನಿರತ 377 ಪೊಲೀಸ್ ಅಧಿಕಾರಿಗಳು ಮತ್ತು ಪೊಲೀಸರು ಹುತಾತ್ಮರಾಗಿದ್ದಾರೆ. ಸಮಾಜದ ಅಭಿವೃದ್ಧಿಗಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವುದು ಅತ್ಯಂತ ಅವಶ್ಯಕ ಎಂದರು. ಡಿವೈಎಸ್‌ಪಿಗಳಾದ ಕೆ.ಎನ್. ರಮೇಶ್. ಮೋಹನ್, ಓಂಪ್ರಕಾಶ್, ಕಮಾಂಡರ್ ಆರ್‌ಪಿಐ ರವಿ, ಜಿಲ್ಲಾ ಗೃಹರಕ್ಷಕ ದಳದ ಅಧಿಕಾರಿ ನಿರಂಜನ್ ಸೇರಿ ಜಿಲ್ಲೆಯ ಎಲ್ಲ್ಲ ಸಿಪಿಐಗಳು ಹಾಗೂ ಪಿಎಸ್‌ಐಗಳು ಉಪಸ್ಥಿತರರಿದ್ದರು.

     

    ಕರೊನಾ ಸಂದರ್ಭದಲ್ಲಿ ದೇಶದಲ್ಲಿನ ಪೊಲೀಸ್ ಅಧಿಕಾರಿಗಳ ಮೇಲಿನ ಭರವಸೆ ಯಾವ ರೀತಿಯಲ್ಲಿದೆ ಎಂಬ ಬಗ್ಗೆ ಸರ್ವೇ ಮಾಡಲಾಗಿದೆ. ಈ ಹಿಂದೆ ಕೇವಲ ಶೇ.20ರಷ್ಟಿದ್ದ ಪೊಲೀಸ್ ಅಧಿಕಾರಿಗಳ ಮೇಲಿನ ನಂಬಿಕೆ ಪ್ರಮಾಣ ಪ್ರಸ್ತುತ ಶೇ.60ಕ್ಕೆ ಏರಿದೆ. ಇದನ್ನು ಉಳಿಸಿಕೊಳ್ಳುವುದು ಪೊಲೀಸ್ ಅಧಿಕಾರಿಗಳ ಕರ್ತವ್ಯವಾಗಿದೆ.
    ಡಾ. ಕೆ. ರಾಕೇಶ್‌ಕುಮಾರ್ ಜಿಲ್ಲಾಧಿಕಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts