More

    ತಾಂತ್ರಿಕ ನೈಪುಣ್ಯತೆ ಹೆಚ್ಚಿದರೆ ಜನಮನ್ನಣೆ ; ತಾಂತ್ರಿಕ ವಿಚಾರ ಸಂಕಿರಣದಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಭಿಮತ

    ತುಮಕೂರು : ವೃತ್ತಿ ಅಥವಾ ಹುದ್ದೆಯಾಗಿರಲಿ, ಅದಕ್ಕೆ ಪೂರಕವಾದ ಜ್ಞಾನವನ್ನು ಆಗಿಂದಾಗ್ಗೆ ಪಡೆದುಕೊಳ್ಳುವುದು ಉತ್ತಮ ಕೆಲಸಗಾರ ಎನಿಸಿಕೊಳ್ಳಲು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಪಶುವೈದ್ಯಕೀಯ ಇಲಾಖೆ, ಪಶುವೈದ್ಯಕೀಯ ಸಂ ಕೆಲಸ ಮಾಡುತ್ತಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು.

    ನಗರದ ಎಸ್‌ಎಸ್‌ಐಟಿ ಸಭಾಂಗಣದಲ್ಲಿ ಕರ್ನಾಟಕ ಪಶುವೈದ್ಯಕೀಯ ಸಂ ಹಾಗೂ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಬುಧವಾರ ಆಯೋಜಿಸಿದ್ದ ತಾಂತ್ರಿಕ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರೂ ಅಪ್‌ಡೇಟ್ ಆದರೆ ಕೆಲಸವನ್ನು ಸುಸೂತ್ರವಾಗಿ ನಿರ್ವಹಿಸಬಹುದು, ಆಯಾ ಕಾಲಕ್ಕೆ ಹೊಂದಿಕೊಳ್ಳದ ವ್ಯಕ್ತಿಗೆ ಸವಾಜದಲ್ಲಿ ಬೆಲೆ ಇಲ್ಲ. ವೃತ್ತಿಯಲ್ಲಿ ತಾಂತ್ರಿಕ ನೈಪುಣ್ಯತೆ ಹೆಚ್ಚಾದರೆ ಜನಮನ್ನಣೆ ತಾನಾಗಿಯೇ ಲಭಿಸುತ್ತದೆ, ಇದು ಎಲ್ಲ ವೃತ್ತಿಗಳಿಗೂ ಅನ್ವಯಿಸುತ್ತದೆ ಎಂದರು.

    ತಮ್ಮ ನೋವು, ನಲಿವುಗಳನ್ನು ಹೇಳಿಕೊಳ್ಳಲಾಗದ ಮೂಕ ಪ್ರಾಣಿಗಳ ಸೇವೆ ಮಾಡುವ ಪಶುವೈದ್ಯರ ಸೇವೆಗೆ ಸರ್ಕಾರದ ಜತೆಗೆ, ಜನರಿಂದಲೂ ಗೌರವ ಸಿಗುವಂತಾಗಬೇಕು. 10 ವರ್ಷಗಳಿಗೆ ಹೊಲಿಕೆ ವಾಡಿದರೆ, ಪಶುವೈದ್ಯರಿಂದ ವರ್ಷದಿಂದ ವರ್ಷಕ್ಕೆ ಗೌರವ ಹೆಚ್ಚುತ್ತಿದೆ. ನಿಮ್ಮನ್ನು ಕಾಣುವ ರೀತಿಯೇ ಬದಲಾಗಿದೆ. ತಮ್ಮ ವೇದನೆಯನ್ನು ಹೇಳಿಕೊಳ್ಳಲಾಗದ ಜೀವಿಗಳ ಭಾವನೆಗಳನ್ನು ಅರ್ಥ ಮಾಡಿಕೊಂಡು ಚಿಕಿತ್ಸೆ ನೀಡಿ, ಅವುಗಳು ಚೇತರಿಸಿಕೊಂಡಾಗ, ಮೂಕ ಪ್ರಾಣಿಗಳು ವ್ಯಕ್ತಪಡಿಸುವ ಆನಂದವನ್ನು ಅರ್ಥೈಸುವ ಶಕ್ತಿ ನಿಮಗಿದೆ. ಇದಕ್ಕಿಂತ ಜನಮನ್ನಣೆ ಮತ್ತೊಂದಿಲ್ಲ ಎಂದರು.

    ನಾನು ದ್ವಿತೀಯ ಪಿಯು ಓದುವವರೆಗೂ ಎಮ್ಮೆಗಳನ್ನು ಸಾಕಿದ್ದೇನೆ, ನಮ್ಮಅಜ್ಜಿ ಎಮ್ಮೆ, ದನ,ಕರುಗಳನ್ನು ಸಾಕಿದವ ಎಂದಿಗೂ ಹಾಳಾಗುವುದಿಲ್ಲ ಎಂದಿದ್ದು ನನ್ನ ಪಾಲಿಗೆ ಅದು ನಿಜ. ನಿಮ್ಮ ನಿಸ್ವಾರ್ಥ ಸೇವೆಗೆ ಇಂದಲ್ಲ, ನಾಳೆ ಸವಾಜದಿಂದ, ಸರ್ಕಾರದಿಂದ ಗೌರವ ಲಭಿಸಲಿದೆ. ಮನುಷ್ಯರ ವೈದ್ಯರು, ಪ್ರಾಣಿಗಳ ವೈದ್ಯರು ಎಂಬ ಕೀಳರಿಮೆ ಬೇಡ. ಪ್ರಾಣಿಗಳ ಸೇವೆ ವಾಡುವುದು ಎಲ್ಲಕ್ಕಿಂತಲೂ ಶ್ರೇಷ್ಠ ಎಂಬುದು ನನ್ನ ಭಾವನೆ ಎಂದರು.
    ಇಲಾಖೆ ಅಪರ ನಿರ್ದೇಶಕ ಡಾ.ಜೆ.ಪಂಪಾಪತಿ, ಹಿರಿಯ ಪಶುವೈದ್ಯಾಧಿಕಾರಿ ಡಾ.ಎಸ್.ಪಿ.ಮಂಜುನಾಥ್ ವಿಶೇಷ ಉಪನ್ಯಾಸ ನೀಡಿದರು.

    ಜಿಲ್ಲೆಗೊಂದು ಗೋಶಾಲೆ ಅಗತ್ಯ : ಜಿಲ್ಲೆಯಲ್ಲಿ 250 ಪಶುವೈದ್ಯಕೀಯ ಸಂಸ್ಥೆಗಳಿದ್ದು, ಜಿಲ್ಲೆಗೆ 994 ಪಶುವೈದ್ಯರ ಹುದ್ದೆಗಳಿದ್ದರೂ, 540 ವೈದ್ಯರು ವಾತ್ರ. ಶೇ.50 ಹುದ್ದೆಗಳು ಖಾಲಿ ಇದ್ದರೂ ಕರೊನಾ ಸಂದರ್ಭದಲ್ಲಿಯೂ ಬಹಳ ದಕ್ಷತೆಯಿಂದ ಕಾರ್ಯನಿರ್ವಹಿಸಿದ್ದಾರೆ ಎಂದು ಪಶುಪಾಲನೆ ಇಲಾಖೆ ಉಪನಿರ್ದೇಶಕ ಡಾ.ಜಿ.ವಿ.ಜಯಣ್ಣ ಹೇಳಿದರು.

    ಕಾಲಕಾಲಕ್ಕೆ ಜಾನುವಾರುಗಳಿಗೆ ಬರುವ ರೋಗಗಳಿಗೆ ಲಸಿಕೆ ನೀಡುವ ಕಾರ್ಯ ಪ್ರಗತಿಯಲ್ಲಿದೆ. ಕರ್ನಾಟಕ ಜಾನುವಾರ ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ 2020ರ ಅನ್ವಯ ಜಿಲ್ಲೆಗೊಂದು ಗೋಶಾಲೆ ತೆರೆಯಬೇಕಿದೆ. ಶಿರಾದ ಚಿಕ್ಕಬಾಣಗೆರೆ ಬಳಿ 19 ಎಕರೆ ಜಮೀನು ಗುರುತಿಸಿದ್ದು, ಗೋಶಾಲೆ ತೆರೆಯಲು ಸೂಕ್ತವಾಗಿದೆ, ಶ್ರೀವಾಗಿ ಮಂಜೂರು ವಾಡಿಸಿಕೊಡಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts