More

    ಮಾಲಿನ್ಯ ರಹಿತ ದೀಪಾವಳಿಗೆ ಡಿಸಿ ಮನವಿ

    ಚಿತ್ರದುರ್ಗ: ಬೆಳಕಿನ ಹಬ್ಬ ದೀಪಾವಳಿಯನ್ನು ಸರಳ,ಮಾಲಿನ್ಯ ರಹಿತ ಮತ್ತು ಭಕ್ತಿಪೂರ್ವಕವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮನವಿ ಮಾಡಿದ್ದಾರೆ.

    ಪಟಾಕಿಗಳು ಶಬ್ಧ ಹಾಗೂ ವಾಯು ಮಾಲಿನ್ಯದೊಂದಿಗೆ ಪರಿಸರಕ್ಕೆ ಹಾನಿ ಮಾಡುವುದರ ಜೊತೆಗೆ ಜನರ ಆರೋಗ್ಯವನ್ನು ಹದಗೆಡಿಸುತ್ತವೆ.
    ಪಟಾಕಿಗಳನ್ನು ಸಿಡಿಸುವಾಗ ಸರಿಯಾದ ಎಚ್ಚರಿಕೆ ವಹಿಸದಿದ್ದರೆ ಅಪಾಯ ಹೆಚ್ಚು. ಪಟಾಕಿ ಬಳಕೆಯ ಕುರಿತಂತೆ ಸುಪ್ರೀಂಕೋರ್ಟ್ ಮಾರ್ಗಸೂಚಿಗಳನ್ನು ಪಾಲಿಸಬೇಕಿದೆ.

    ರಾತ್ರಿ 8ರಿಂದ 10ವರೆಗೆ ಪಟಾಕಿ ಸಿಡಿಸಲು ಅವಕಾಶವಿದೆ. ಹಸಿರು ಪಟಾಕಿ ಹೊರತು ಪಡಿಸಿ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆ ನಿಷೇಧಲಾಗಿದೆ. ಪರವಾನಗಿದಾರರು ನಿಗದಿತ ದಿನಾಂಕ ಮತ್ತು ಸ್ಥಳಗಳಲ್ಲಿ ಮಾತ್ರ ಪಟಾಕಿ ಮಾರಾಟ ಮಾಡ ಬೇಕೆಂದು ಅವರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts