26 C
Bengaluru
Wednesday, January 22, 2020

ಮತದಾರರ ಮನೆಗೆ ತೆರಳಿ ವೋಟರ್ ಸ್ಲಿಪ್ ವಿತರಿಸಿದ ಡಿಸಿ

Latest News

ಶ್ರೀಕ್ಷೇತ್ರ ಕಬ್ಬಳಿ ಶ್ರೀ ಬಸವೇಶ್ವರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಾಲಕರ ಕ್ರೀಡಾಕೂಟ

ಚನ್ನರಾಯಪಟ್ಟಣ: ತಾಲೂಕಿನ ಶ್ರೀಕ್ಷೇತ್ರ ಕಬ್ಬಳಿ ಶ್ರೀ ಬಸವೇಶ್ವರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ 2019-20 ನೇ ಸಾಲಿನ ಪಾಲಕರ ಕ್ರೀಡಾಕೂಟ ಬುಧವಾರ ನಡೆಯಿತು.

ಬಸ್​ನಿಲ್ದಾಣದಲ್ಲಿ ವಾರಸ್ದಾರರಿಲ್ಲದ ನಾಲ್ಕು ಬ್ಯಾಗ್​ಗಳು ಪತ್ತೆ; ಪರಿಶೀಲನೆ ನಡೆಸುತ್ತಿರುವ ಪೊಲೀಸರು

ಚಿಕ್ಕಬಳ್ಳಾಪುರ: ಇಲ್ಲಿನ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ನಾಲ್ಕು ಬ್ಯಾಗ್​ಗಳು ಪತ್ತೆಯಾಗಿದ್ದು ಅವುಗಳು ಯಾರಿಗೆ ಸೇರಿದ್ದು ಎಂದು ಗೊತ್ತಾಗಿಲ್ಲ. ಬಸ್​ ಸ್ಟ್ಯಾಂಡ್​ನಲ್ಲಿ ಸಾರ್ವಜನಿಕರು ಕುಳಿತುಕೊಳ್ಳುವ ಕಲ್ಲು ಬೆಂಚಿನ ಕೆಳಗೆ...

ಇದೇನಾ ನಗರಸಭೆಯ ಶುಚಿತ್ವ? ಸ್ವಚ್ಛ ಸರ್ವೇಕ್ಷಣೆ ತನಿಖಾಧಿಕಾರಿ ಮಂಜುಳಾ ಅಸಮಾಧಾನ

ಚಿಂತಾಮಣಿ: ನಗರದಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಮಾಡುವಲ್ಲಿ ಚಿಂತಾಮಣಿ ನಗರಸಭೆ ಸಂಪೂರ್ಣ ವಿಫಲವಾಗಿದೆ ಎಂದು ಸ್ವಚ್ಛ ಸರ್ವೇಕ್ಷಣೆಯ ಜಿಲ್ಲಾ ತನಿಖಾಧಿಕಾರಿ ಎನ್.ಮಂಜುಳಾ ಬೇಸರ ವ್ಯಕ್ತಪಡಿಸಿದರು. ನಗರದ ವಿವಿಧ...

ವ್ಯವಸ್ಥೆಯತ್ತ ನಂಬಿಕೆ ಮೂಡಿಸಿ ಜಿಪಂ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷ ಚಿಕ್ಕನರಸಿಂಹಯ್ಯ ಸೂಚನೆ

ಚಿಕ್ಕಬಳ್ಳಾಪುರ:  ಜನಸಾಮ್ಯಾನರಲ್ಲಿ ಆಡಳಿತ ವ್ಯವಸ್ಥೆಯ ಮೇಲೆ ನಂಬಿಕೆ ಇಮ್ಮಡಿಯಾಗಲು ತ್ವರಿತವಾಗಿ ಸಮಸ್ಯೆ ಪರಿಹರಿಸುವ ಮತ್ತು ಸವಲತ್ತುಗಳನ್ನು ಒದಗಿಸುವ ಕೆಲಸವಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ...

ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆಗೆ ಅಧಿಸೂಚನೆ ಚುನಾವಣಾಧಿಕಾರಿಗಳ ನೇಮಕ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆಗೆ ಜಿಲ್ಲಾಧಿಕಾರಿ ಆರ್.ಲತಾ ಅಧಿಸೂಚನೆ ಹೊರಡಿಸಿ, ವಾರ್ಡ್‌ವಾರು ಚುನಾವಣಾಧಿಕಾರಿಗಳನ್ನು ನೇಮಿಸಿದ್ದಾರೆ.  01 ರಿಂದ 8 ವಾರ್ಡ್: ಚುನಾವಣಾಧಿಕಾರಿ ಕುಮಾರಸ್ವಾಮಿ (ತೋಟಗಾರಿಕೆ ಇಲಾಖೆ...

ಉಡುಪಿ: ಚುನಾವಣೆ ಅಂಗವಾಗಿ ಉಡುಪಿ ಮಿಷನ್ ಕಾಂಪೌಂಡ್ ಮತ್ತು ಅಮ್ಮಣ್ಣಿ ರಾಮಣ್ಣ ಹಾಲ್ ಬಳಿ ಮತದಾರರ ಭಾವಚಿತ್ರವಿರುವ ವೋಟರ್ ಸ್ಲಿಪ್‌ಗಳನ್ನು ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮನೆ ಬಾಗಿಲಿಗೆ ತೆರಳಿ ಮಂಗಳವಾರ ವಿತರಿಸಿದರು.

ಮತದಾರರಿಗೆ ಮತದಾನ ದಿನಾಂಕ ತಿಳಿಸಿ, ತಪ್ಪದೇ ಮತದಾನ ಮಾಡುವಂತೆ ತಿಳಿಸಲಾಗುತ್ತಿದೆ ಎಂದ ಅವರು, ಮತಕೇಂದ್ರದಲ್ಲಿ ಮತದಾರರಿಗೆ ಅನುಕೂಲವಾಗುವಂತೆ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ. ಎಪಿಕ್ ಕಾರ್ಡ್ ಇಲ್ಲದ ಮತದಾರರು, ವೋಟರ್ ಸ್ಲಿಪ್ ಜತೆಯಲ್ಲಿ ಚುನಾವಣಾ ಆಯೋಗ ಸೂಚಿಸಿರುವ 11 ರೀತಿಯ ಗುರುತಿನ ಚೀಟಿ ತೆಗೆದುಕೊಂಡು ಹೋಗಿ ಮತದಾನ ಮಾಡುವಂತೆ ತಿಳಿಸಿದರು. ಮತದಾರರಿಗೆ ವಿವಿ ಪ್ಯಾಟ್ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಕುಟುಂಬದಲ್ಲಿ ಮತದಾನ ಅರ್ಹತೆ ಹೊಂದಿರುವ ಪ್ರತಿಯೊಬ್ಬರೂ ಮತದಾನ ಮಾಡುವಂತೆ ಮನವಿ ಮಾಡಿದರು. ಪ್ರತಿ ಮನೆಗಳಲ್ಲಿ ವೋಟರ್ ಸ್ಲಿಪ್‌ಗಳನ್ನು ಪರಿಶೀಲಿಸಿ, ವಿತರಿಸಿದ ಜಿಲ್ಲಾಧಿಕಾರಿ, ಬಿಎಲ್‌ಒಗಳು ಆದಷ್ಟು ಶೀಘ್ರ ಎಲ್ಲ ಮತದಾರರಿಗೆ ಸಂಪೂರ್ಣವಾಗಿ ವೋಟರ್ ಸ್ಲಿಪ್ ವಿತರಣೆ ಕಾರ್ಯ ಮುಗಿಸುವಂತೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಉಡುಪಿ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಕೆಂಪೇಗೌಡ, ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ ಮತ್ತಿತರರು ಉಪಸ್ಥಿತರಿದ್ದರು.

ವೃದ್ಧೆಗೆ ವಾಹನ ವ್ಯವಸ್ಥೆ: ಅಮ್ಮಣ್ಣಿ ರಾಮಣ್ಣ ಹಾಲ್ ಬಳಿ ಮನೆಯಲ್ಲಿದ್ದ 97 ವರ್ಷದ ಹಿರಿಯ ನಾಗರಿಕರಿಗೆ ಮನೆಯೊಳಗೆ ತೆರಳಿ ವೋಟರ್ ಸ್ಲಿಪ್ ವಿತರಿಸಿದ ಜಿಲ್ಲಾಧಿಕಾರಿ, ಅಲ್ಲಿಯೇ ಇದ್ದ ಬಿಎಲ್‌ಒಗೆ ವೃದ್ಧರ ಹೆಸರನ್ನು ಗುರುತು ಮಾಡಿಕೊಂಡು, ಮತದಾನದ ದಿನ ಅವರನ್ನು ಮತಗಟ್ಟೆಗೆ ಕರೆದೊಯ್ಯಲು ವಾಹನ ವ್ಯವಸ್ಥೆ ಹಾಗೂ ಮತದಾನ ಮಾಡಲು ಬೇಕಾದ ಎಲ್ಲ ಸೌಕರ್ಯಗಳನ್ನು ಒದಗಿಸುವಂತೆ ಸೂಚಿಸಿದರು.

ವಾಹನ ಚಾಲಕರಿಗೂ ಅವಕಾಶ : ಖಾಸಗಿ ವಾಹನ ಸೇರಿದಂತೆ ಲೋಕಸಭಾ ಚುನಾವಣೆ ಮತಗಟ್ಟೆ ಕರ್ತವ್ಯಕ್ಕೆ ನಿಯೋಜಿಸುವ ಎಲ್ಲ ವಾಹನಗಳ ಚಾಲಕರಿಗೂ ಮತದಾನಕ್ಕೆ ಅಗತ್ಯ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಚುನಾವಣಾ ಸಿಬ್ಬಂದಿ, ಅಂಚೆ ಮತದಾನ ಸಿದ್ಧತೆ ಕುರಿತ ಸಭೆಯಲ್ಲಿ ಮಾತನಾಡಿದರು. ವಾಹನಗಳ ಚಾಲಕರ ಡ್ರೈವಿಂಗ್ ಲೈಸನ್ಸ್ ಮತ್ತು ಎಪಿಕ್ ಕಾರ್ಡ್ ಪ್ರತಿ ಸಂಗ್ರಹಿಸಿ ನೀಡಬೇಕು. ಕರ್ತವ್ಯಕ್ಕೆ ನಿಯೋಜಿಸಲಾಗುವ ಮತಗಟ್ಟೆಯಲ್ಲಿಯೇ ಅವರಿಗೆ ಮತದಾನಕ್ಕೆ ಅವಕಾಶ ನೀಡಲಾಗುವುದು. ಮತಗಟ್ಟೆ ಕರ್ತವ್ಯದಲ್ಲಿರುವ ಅಧಿಕಾರಿ, ಸಿಬ್ಬಂದಿಗೆ ಆಯಾ ಮತಗಟ್ಟೆಯಲ್ಲಿಯೇ ಮತದಾನ ಮಾಡಲು ಚುನಾವಣಾ ಕರ್ತವ್ಯ ಪ್ರಮಾಣಪತ್ರ ನೀಡಲಾಗುವುದು. ಉಡುಪಿ-ಚಿಕ್ಕಮಗಳೂರು ಕ್ಷೇತ್ರ ವ್ಯಾಪ್ತಿಯ ಹೊರಗೆ ಮತದಾನ ಪಟ್ಟಿಯಲ್ಲಿ ಹೆಸರು ಇರುವ ಸಿಬ್ಬಂದಿಗೆ ಅಂಚೆ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಂಚೆ ಮತದಾನ ಹಾಗೂ ಚುನಾವಣಾ ಕರ್ತವ್ಯ ಪ್ರಮಾಣ ಪತ್ರ ಮೂಲಕ ಮತದಾನ ಮಾಡುವವರು ಕೂಡಲೇ ಸಂಬಂಧಪಟ್ಟ ನಮೂನೆಯಲ್ಲಿ ಕೋರಿಕೆಯನ್ನು ಏ.12ರೊಳಗೆ ಸಲ್ಲಿಸಲು ಜಿಲ್ಲಾಧಿಕಾರಿ ಸೂಚಿಸಿದರು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...