More

    ಆಮಿಷವೊಡ್ಡಿದರೆ ಕ್ರಿಮಿನಲ್ ಪ್ರಕರಣ ಡಿಸಿ ದಿವ್ಯಾಪ್ರಭು ಎಚ್ಚರಿಕೆ

    ಚಿತ್ರದುರ್ಗ: ಮತದಾರರಿಗೆ ಆಮಿಷವೊಡ್ಡುವ ಹಾಗೂ ಅಕ್ರಮದಲ್ಲಿ ಭಾಗಿಯಾಗುವ ಪ್ರಕರಣಗಳು ಕಂಡು ಬಂದರೆ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಆರ್.ಜೆ.ದಿವ್ಯಾಪ್ರಭು ಎಚ್ಚರಿಸಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿ, ಅಭ್ಯರ್ಥಿಗಳ ಮೆರವಣಿಗೆ, ಧ್ವನಿವರ್ಧಕ, ವಾಹನ, ರ‌್ಯಾಲಿ ಸೇರಿ ಯಾವುದೇ ಕಾರ್ಯಕ್ರಮ ನಡೆಸಲು ಅನುಮತಿ ಕಡ್ಡಾಯ ಎಂದರು.

    ಜಿಲ್ಲಾದ್ಯಂತ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿಗೆ ಸ್ಟಾೃಟಿಕ್ ಸರ್ವೆಲೆನ್ಸ್, ಫ್ಲೈಯಿಂಗ್ ಸ್ಕ್ವಾಡ್, ವಿಎಸ್‌ಟಿ ಸೇರಿ ವಿವಿಧ ತಂಡಗಳನ್ನು ರಚಿಸಲಾಗಿದೆ. ಉಲ್ಲಂಘನೆ ಕುರಿತ ದೂರುಗಳಿದ್ದಲ್ಲಿ ತಿಳಿಸಿದರೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಬಿಗಿ ಭದ್ರತೆ ಮಾಡಿಕೊಳ್ಳಲಾಗಿದೆ ಎಂದರು.

    ಜಿಲ್ಲಾ ಚುನಾವಣಾಧಿಕಾರಿಯಿಂದ ಹೆಲಿಕಾಪ್ಟರ್ ಲ್ಯಾಡಿಂಗ್, ಏರ್ ಬಲೂನ್‌ಗೆ ಹಾಗೂ ವಿಡಿಯೋ ವ್ಯಾನ್‌ಗೆ ಆಯಾ ಕ್ಷೇತ್ರಗಳ ಚುನಾವಣಾಧಿಕಾರಿಗಳಿಂದಲೂ ಅನುಮತಿ ಪಡೆಯಬಹುದು ಎಂದು ತಿಳಿಸಿದರು.

    ಚುನಾವಣೆ ವೇಳೆ ವಿದ್ಯುನ್ಮಾನ, ಡಿಜಿಟಲ್ ಮಾಧ್ಯಮ, ವಾಯ್ಸ್ ಮೆಸೇಜ್ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಜಾಹೀರಾತು ಬಯಸುವ ಪಕ್ಷ ಅಥವಾ ಅಭ್ಯರ್ಥಿಗಳು ಅನುಸರಿಸಬೇಕಾದ ನಿಯಮಗಳ ಕುರಿತು ಆಯೋಗ ಸ್ಪಷ್ಟ ಸೂಚನೆ ನೀಡಿದ್ದು, ಪ್ರಕಟಿಸುವ ಮುನ್ನ ಜಿಲ್ಲಾಮಟ್ಟದ ಎಂಸಿಎಂಸಿ ಸಮಿತಿಯಿಂದ ಪರವಾನಗಿ ಪ್ರಮಾಣ ಪತ್ರ ಪಡೆಯಬೇಕು ಎಂದು ಸೂಚಿಸಿದರು.

    ಜಾಹೀರಾತಿನ ಪ್ರತಿ, ಸಿಡಿ, ಪೆನ್‌ಡ್ರೈವ್, ಅದರಲ್ಲಿರುವ ಭಾಷಣ ಅಥವಾ ಸಂದೇಶದ ಮುದ್ರಿತ ಪ್ರತಿಯನ್ನು ದೃಢೀಕರಿಸಿ ಎರಡು ಸೆಟ್‌ನೊಂದಿಗೆ ಲಗತ್ತಿಸಿ ಅಭ್ಯರ್ಥಿ ಅಥವಾ ಅಭ್ಯರ್ಥಿಯಿಂದ ಅನುಮತಿ ಪಡೆದ ವ್ಯಕ್ತಿಗಳು ಸಲ್ಲಿಸಬೇಕು. ನಂತರ ಸಮಿತಿ ಪರಿಶೀಲಿಸಿ, ಕ್ಲಿಯರೆನ್ಸ್ ಪ್ರಮಾಣ ಪತ್ರ ನೀಡಲಿದೆ.

    ಪಡೆಯದೆ ಯಾವುದೇ ಜಾಹೀರಾತು ಪ್ರಕಟಿಸುವಂತಿಲ್ಲ. ಇದನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
    ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಜೆಡಿಎಸ್ ಜಿಲ್ಲಾ ವಕ್ತಾರ ಗೋಪಾಲಸ್ವಾಮಿ ನಾಯಕ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts