ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರ ನಡೆಸಿ

ವಿಜಯವಾಣಿ ಸುದ್ದಿಜಾಲ ಬೀದರ್
ಮಾರ್ಚ್​ 21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಡಿಸಿ ಡಾ. ಎಚ್.ಆರ್. ಮಹಾದೇವ ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ಲ ಅಧಿಕಾರಿಗಳಿಗೆ ಸೂಚಿಸಿದರು.

ಡಿಸಿ ಕಚೇರಿ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರ ಸಭೆಯಲ್ಲಿ ಮಾತನಾಡಿ, ಪರೀಕ್ಷಾಥರ್ಿಗಳಲ್ಲಿ ಆತಂಕ ಆಗದ ರೀತಿಯಲ್ಲಿ ಎಲ್ಲ ವ್ಯವಸ್ಥೆ ಮಾಡಬೇಕು. ಪರೀಕ್ಷಾ ವೇಳೆ ಯಾವ ಅಕ್ರಮಕ್ಕೂ ಅವಕಾಶ ಕೊಡಬಾರದು ಎಂದರು.

ಡಿಡಿಪಿಐ ಚಂದ್ರಶೇಖರ ಮಾತನಾಡಿ, ಈಗ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದೆ ಎಂಬುದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮತ್ತು ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳ ಗಮನದಲ್ಲಿರಬೇಕು. ಮಾದರಿ ನೀತಿ ಸಂಹಿತೆಯ ನಿಯಮಗಳ ಪಾಲನೆ ಮಾಡಬೇಕು. ಅದನ್ನು ಮೀರುವ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಬಾರದು. ಕರ್ತವ್ಯಕ್ಕೆ ನಿಯೋಜಿತರು ಕೇಂದ್ರ ಸ್ಥಾನದಲ್ಲಿದ್ದು ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.

ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದ ಬಗ್ಗೆ ವರದಿಯಾಗಿಲ್ಲ. ಈ ಹಿಂದೆ ಪರೀಕ್ಷೆಗಳು ಸುಸೂತ್ರವಾಗಿ ನಡೆದಿವೆ. ಜಿಲ್ಲೆಯಲ್ಲಿ 5 ಖಾಸಗಿ ಅಭ್ಯರ್ಥಿಗಳ ಕೇಂದ್ರಗಳಿದ್ದು, ಇವುಗಳನ್ನು ಸೂಕ್ಷ್ಮ ಕೇಂದ್ರಗಳೆಂದು ಪರಿಗಣಿಸಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಿಕೊಳ್ಳಲಾಗುತ್ತಿದೆ. ಸಕರ್ಾರಿ, ಅನುದಾನಿತ ಹಾಗೂ ಅನುದಾನ ರಹಿತ ಪರೀಕ್ಷಾ ಕೇಂದ್ರ, ಕ್ಲಸ್ಟರ್ ಸಹಿತ ಮತ್ತು ಕ್ಲಸ್ಟರ್ ರಹಿತ ಮತ್ತು ಖಾಸಗಿ ಅಭ್ಯಥರ್ಿಗಳ ಪರೀಕ್ಷಾ ಕೇಂದ್ರಗಳ ಜತೆಗೆ ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಮತ್ತು ಸಾಮಾನ್ಯ ಪರೀಕ್ಷಾ ಕೇಂದ್ರಗಳು ಸೇರಿ ಜಿಲ್ಲೆಯಲ್ಲಿ ಒಟ್ಟು 92 ಪರೀಕ್ಷಾ ಕೇಂದ್ರಗಳಿವೆ ಎಂದು ತಿಳಿಸಿದರು.

ಜಿಲ್ಲಾ ಶಿಕ್ಷಣಾಧಿಕಾರಿ ಶಿವಕುಮಾರ ಸ್ವಾಮಿ ಮಾತನಾಡಿ, ಪರೀಕ್ಷೆ ಹಿನ್ನೆಲೆಯಲ್ಲಿ 5 ಜಿಲ್ಲಾ ಜಾಗೃತ ದಳ ನೇಮಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಕಾರಿಡಾರ್ನಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಪರೀಕ್ಷಾ ಕಾರ್ಯಕ್ಕಾಗಿ ಜಿಲ್ಲಾಡಳಿತದಿಂದ ವಾಹನಗಳ ಸಹಾಯ ಬೇಕಾಗಿದೆ ಎಂದು ತಿಳಿಸಿದರು.
ಎಲ್ಲ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು. ಪ್ರೌಢ ಶಾಲೆಗಳ ಮುಖ್ಯ ಅಧ್ಯಾಪಕರು, ಮುಖ್ಯ ಅಧೀಕ್ಷಕರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಇದ್ದರು.