More

    ಮತಗಟ್ಟೆಗಳಲ್ಲಿ ಮೂಲಸೌಲಭ್ಯ ಪರಿಶೀಲಿಸಿ: ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಸೂಚನೆ

    ಮಂಡ್ಯ: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ವ್ಯಾಪ್ತಿಯ ಮತಗಟ್ಟೆಗಳಿಗೆ ಭೇಟಿ ನೀಡಿ ಮೂಲ ವ್ಯವಸ್ಥೆಗಳನ್ನು ಪರಿಶೀಲಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಸೂಚನೆ ನೀಡಿದರು.
    ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಹಳಷ್ಟು ಮತಗಟ್ಟೆಗಳು ಶಾಲೆ ಹಾಗೂ ಅಂಗನವಾಡಿಗಳಲ್ಲಿ ಇದೆ. ಆದ್ದರಿಂದ ಮತದಾನದ ಕೆಲಸಕ್ಕಾಗಿ ಟೇಬಲ್, ಕುರ್ಚಿ, ವಿದ್ಯುತ್ ದೀಪ, ಶೌಚಗೃಹ, ನೀರಿನ ವ್ಯವಸ್ಥೆಗಳನ್ನು ಪರಿಶೀಲಿಸಿ ಸಣ್ಣಪುಟ್ಟ ರಿಪೇರಿಗಳಿದ್ದಲ್ಲಿ ಶಿಕ್ಷಣ, ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಗಮನಕ್ಕೆ ತಂದು ಸರಿಪಡಿಸಿಕೊಳ್ಳಿ. ಮತದಾನದ ದಿನದಂದು ಗ್ರಾಮ ಪಂಚಾಯಿತಿ ಕಚೇರಿಯಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಎಂದರು.
    ಮತಗಟ್ಟೆಗಳಲ್ಲಿ ನೆರಳಿನ ವ್ಯವಸ್ಥೆ ಇಲ್ಲದಿದ್ದರೆ ಶಾಮಿಯಾನ ಹಾಕಿಸಬೇಕು. ಶಾಲೆಗಳಲ್ಲಿರುವ ಬೆಂಚ್‌ಗಳನ್ನು ಸರಣಿ ಸಾಲಿನಲ್ಲಿ ಜೋಡಿಸಿದರೆ ಮತದಾರರು ಕುಳಿತುಕೊಳ್ಳಲು ಸಹಾಯವಾಗುತ್ತದೆ. ಮತಗಟ್ಟೆಗೆ ಬರುವ ಅಂಗವಿಕಲರಿಗೆ ರ‌್ಯಾಂಪ್ ವ್ಯವಸ್ಥೆ, ವೀಲ್ ಕುರ್ಚಿ, ಮ್ಯಾಗ್ನಿಫೈಯಿಂಗ್ ಗ್ಲಾಸ್ ಸೇರಿದಂತೆ ಇನ್ನಿತರೆ ವ್ಯವಸ್ಥೆಯ ಬಗ್ಗೆ ವರದಿ ನೀಡಬೇಕು. ಪ್ರಮುಖವಾಗಿ 2018ರ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆಗಳಿಗೆ ಭೇಟಿ ನೀಡಿ ಕಾರಣ ತಿಳಿದುಕೊಳ್ಳಬೇಕು. ಅಂತೆಯೇ ಹೆಚ್ಚು ಸ್ವೀಪ್ ಚಟುವಟಿಕೆಗಳನ್ನು ಆಯೋಜಿಸಿ ಮತದಾನದ ಪ್ರಮಾಣವನ್ನು ಹೆಚ್ಚಿಸಿ ಎಂದು ಸೂಚಿಸಿದರು.
    ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್.ಹುಲ್ಮನಿ, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಿ.ಪಂ ಉಪ ಕಾರ್ಯದರ್ಶಿ ಸಂಜೀವಪ್ಪ ಸೇರಿದಂತೆ ಅಧಿಕಾರಿಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts