More

    ಕದ್ರಿ ಗೋಪಾಲನಾಥ್ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಅವರ ಪತ್ನಿ ಅಸ್ವಸ್ಥ; ಜಿಲ್ಲಾಧಿಕಾರಿಯಿಂದಲೇ ಚಿಕಿತ್ಸೆ..!

    ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಅಸ್ವಸ್ಥಗೊಂಡ ಮಹಿಳೆಯೊಬ್ಬರಿಗೆ ಖುದ್ದು ಜಿಲ್ಲಾಧಿಕಾರಿಯವರೇ ಚಿಕಿತ್ಸೆ ನೀಡಿ ಗಮನ ಸೆಳೆದಿದ್ದಲ್ಲದೆ ಮೆಚ್ಚುಗೆಗೂ ಪಾತ್ರರಾಗಿದ್ದಾರೆ. ಹೀಗೆ ಅಸ್ವಸ್ಥಗೊಂಡವರು ಖ್ಯಾತ ಸ್ಯಾಕ್ಸೋಫೋನ್​ ಕಲಾವಿದ, ದಿವಂಗತ ಕದ್ರಿ ಗೋಪಾಲನಾಥ್ ಅವರ ಪತ್ನಿ. ಚಿಕಿತ್ಸೆ ನೀಡಿದ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ.

    ಇಂದು ಬಂಟ್ವಾಳ ತಾಲೂಕಿನ ಸಜಿಪದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಇಂಥದ್ದೊಂದು ವಿದ್ಯಮಾನ ನಡೆದಿದೆ. ಸ್ಯಾಕ್ಸೋಫೋನ್ ಮಾಂತ್ರಿಕ ಕದ್ರಿ ಗೋಪಾಲನಾಥ್ ಅವರ ಸ್ಮರಣಾರ್ಥ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

    ಇದನ್ನೂ ಓದಿ: ‘ಇನ್ನು ಮುಂದೆ ನಾನು ಕಣ್ಣೀರು ಹಾಕೋದಿಲ್ಲ’ ಅಂದ್ರು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ

    ಕದ್ರಿ ಗೋಪಾಲನಾಥ್ ಅವರ ಪತ್ನಿ ಸರೋಜಿನಿ ಈ ಕಾರ್ಯಕ್ರಮದಲ್ಲಿ ಭಾವುಕರಾಗಿ ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡರು. ಕಾರ್ಯಕ್ರಮದಲ್ಲಿ ಹಾಜರಿದ್ದ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕೂಡಲೇ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಸಮಯಪ್ರಜ್ಞೆ ತೋರಿದರು. ವೈದ್ಯರೂ ಆಗಿರುವ ಜಿಲ್ಲಾಧಿಕಾರಿಯವರ ಈ ನಡೆ ನೆರೆದಿದ್ದವರ ಮೆಚ್ಚುಗೆ ಪಡೆಯಿತು.

    ಎರಡನೇ ಮದ್ವೆ ಆಗಲು ಹೆಂಡ್ತಿ-ಮಕ್ಳನ್ನು ಕೊಂದ, 11 ವರ್ಷಗಳ ಬಳಿಕ ಸಿಕ್ಕಿಬಿದ್ದ; ಈತ ತಪ್ಪಿಸಿಕೊಂಡಿದ್ದು, ಬಳಿಕ ಮಾಡಿದ್ದೆಲ್ಲ ಭಾರಿ ಕಿತಾಪತಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts