More

    ಚಿಕ್ಕಣ್ಣ ದೇವರಹಟ್ಟಿ ಸನ್ನಿಧಿ ಪ್ರವಾಸಿ ಸ್ಥಳವಾಗಿಸುವೆ ; ಶಾಸಕ ಡಿ.ಸಿ.ಗೌರಿಶಂಕರ್ ಭರವಸೆ

    ತುಮಕೂರು: ಹೆಬ್ಬೂರು ಸಮೀಪದ ಶ್ರೀಚಿಕ್ಕಣ್ಣ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಇತ್ತೀಚೆಗೆ ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಶುದ್ಧ ಕುಡಿಯುವ ನೀರಿನ ಘಟಕದ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

    ಚಿಕ್ಕಣ್ಣಸ್ವಾಮಿ ಈ ಭಾಗದ ಜನರ ಆರಾಧ್ಯ ದೈವವಾಗಿದ್ದು, ಈ ವರ್ಷ ಉತ್ತಮ ಮಳೆ ಬೆಳೆಯಾಗಲಿ, ಸರ್ವರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಿರುವುದಾಗಿ ಶಾಸಕ ಡಿ.ಸಿ.ಗೌರಿಶಂಕರ್ ಹೇಳಿದರು.

    ಪುಣ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು 50 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಿಸಿದ್ದು, ಗ್ರಾಮಸ್ಥರು ಹಾಗೂ ಭಕ್ತರು ಅನುಕೂಲವಾಗಲೆಂದು ಶುದ್ಧಕುಡಿಯುವ ನೀರಿನ ಘಟಕ ಶೀಘ್ರ ಆರಂಭವಾಗಲಿದೆ ಎಂದರು.
    ಹೆಬ್ಬೂರು, ನಾಗವಲ್ಲಿ ಸೇರಿ ದೂರದ ಊರಗಳಿಂದ ಚಿಕ್ಕಣ್ಣಸ್ವಾಮಿ ದೇವರ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಬದ್ಧನಾಗಿದ್ದು, ಚಿಕ್ಕಣ್ಣ ದೇವರಹಟ್ಟಿ ಉತ್ತಮ ಪ್ರವಾಸಿ ಸ್ಥಳವನ್ನಾಗಿಸಲು ಶ್ರಮಿಸುವುದಾಗಿ ಭರವಸೆ ನೀಡಿದರು.

    ಹಿಂದುಳಿದಿರುವ ಯಾದವ ಸಮುದಾಯದ ಅಭಿವೃದ್ಧಿಗಾಗಿ ಕ್ಷೇತ್ರವನ್ನು ಗುಡಿಸಲು ಮುಕ್ತಗೊಳಿಸಲು ಸಹಕಾರ ನೀಡಬೇಕೆಂದು ಮನವಿ ಮಾಡಿದ ಅವರು, ಕಂದಾಯ ಗ್ರಾಮಗಳನ್ನಾಗಿ ರೂಪಿಸುವ ಮೂಲಕ ಗೊಲ್ಲರಹಟ್ಟಿಗಳಿಗೆ ಮೂಲಸೌಕರ್ಯ ಒದಗಿಸಲು ಕ್ರಮವಹಿಸುವುದಾಗಿ ತಿಳಿಸಿದರು. ಚಿಕ್ಕಣ್ಣಹಟ್ಟಿ ದೇಗುಲದ ಪ್ರಧಾನ ಅರ್ಚಕ ಪಾಪಣ್ಣ, ಜೆಡಿಎಸ್ ತಾಲೂಕು ಅಧ್ಯಕ್ಷ ರಾಮಚಂದ್ರಪ್ಪ, ವೆಂಕಟೇಶ್‌ಗೌಡ, ಸಿರಾಕ್ ರವಿ, ಕೆ.ವಿ.ರಾಜು, ಬಳ್ಳಗೆರೆ ರಾಜು, ಗೋವಿಂದಪ್ಪ ಇದ್ದರು.

    ವೈಯಕ್ತಿಕವಾಗಿ ವೇತನ ನೀಡಿದ್ದೇನೆ: ತುಮಕೂರು ತಾಲೂಕು ಬೆಳ್ಳಾವಿಯಲ್ಲಿ 44 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಶಾಲಾ ಕಟ್ಟಡವನ್ನು ಇತ್ತೀಚೆಗೆ ಶಾಸಕ ಡಿ.ಸಿ.ಗೌರಿಶಂಕರ್ ಉದ್ಘಾಟಿಸಿದರು. ಸರ್ಕಾರಿ ಶಾಲೆಗಳು ಯಾವ ಖಾಸಗಿ ಶಾಲೆಗಳಿಗೂ ಕಡಿಮೆ ಇಲ್ಲದಂತೆ ಇರಬೇಕು, ರೈತಾಪಿ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು ಎಂಬ ಸದುದ್ದೇಶದಿಂದ ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡಿದ್ದು, ಇಂಗ್ಲಿಷ್ ಮಾಧ್ಯಮದಲ್ಲಿ ಮಕ್ಕಳು ಕಲಿಯಬೇಕು ಎಂಬ ಉದ್ದೇಶದಿಂದ ಆಂಗ್ಲ ಭಾಷಾ ಶಿಕ್ಷಕರಿಗೆ ವೇತನವನ್ನು ವೈಯಕ್ತಿಕವಾಗಿ ನೀಡಿದ್ದೇನೆ ಎಂದು ಡಿ.ಸಿ.ಗೌರಿಶಂಕರ್ ತಿಳಿಸಿದರು.
    ಕರೊನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳು ಜಾಗರೂಕತೆ ವಹಿಸಬೇಕಿದ್ದು, ಸಾಮಾಜಿಕ ಅಂತರ, ಸರ್ಕಾರದ ನಿಯಮಗಳನ್ನು ಪಾಲಿಸುವುದರೊಂದಿಗೆ ಇತರರನ್ನು ಪಾಲಿಸುವಂತೆ ಪ್ರೇರೇಪಿಸಬೇಕು, ಮನೆಗಳಲ್ಲಿ ಪಾಲಕರಿಗೆ ಕರೊನಾ ಬಗ್ಗೆ ಅರಿವು ಮೂಡಿಸಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts