More

    ಹಾಸ್ಟೆಲ್‌ಗಳಿಗೆ ಡಿಸಿ, ಜಿಪಂ ಸಿಇಒ ದಿಢೀರ್ ಭೇಟಿ

    ಚಿಕ್ಕಮಗಳೂರು: ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಡಿಸಿ ಮೀನಾ ನಾಗರಾಜ್ ಹಾಗೂ ಜಿಪಂ ಸಿಇಒ ಡಾ.ಬಿ.ಗೋಪಾಲಕೃಷ್ಣ ನಗರದ ಎಐಟಿ ಸಮೀಪದ ಇಂಜಿನಿಯರಿಂಗ್ ಕಾಲೇಜು ಹಾಸ್ಟೆಲ್ ಹಾಗೂ ಬೇಲೂರು ರಸ್ತೆಯಲ್ಲಿರುವ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಹಾಗೂ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿದರು.
    ಡಿಸಿ ಮೀನಾ ನಾಗರಾಜ್ ಮಾತನಾಡಿ ಅವರು, ಡೆಂೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೊದಲು ಸ್ಚಚ್ಛತೆಗೆ ಆದ್ಯತೆ ನೀಡಬೇಕು. ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಆರೋಗ್ಯದ ಸಮಸ್ಯೆ ಎದುರಾಗಂತೆ ಮುಂಜಾಗ್ರತೆ ವಹಿಸಬೇಕು. ಊಟದ ವ್ಯವಸ್ಥೆ ಶುಚಿತ್ವದಿಂದ ಕೂಡಿರಬೇಕು ಎಂದು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಎಂದರು.
    ಫಿಜಿಕ್ಸ್, ಕೆಮಿಸ್ಟ್ರಿ, ಜಾವ, ಫೈಥನಾ ವಿಷಯಗಳು ಇನ್ನಷ್ಟು ಅವಶ್ಯವಿದೆ ಎಂದು ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿಯರು ಡಿಸಿ ಮೀನಾ ನಾಗರಾಜ್ ಅವರ ಗಮಕ್ಕೆ ತಂದಾಗ ಸದ್ಯದಲ್ಲೇ ಆನ್‌ಲೈನ್ ತರಗತಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ ಡಿಸಿ ಹಾಸ್ಟೆಲ್‌ನ ಗ್ರಂಥಾಲಯಗಳಲ್ಲಿ ಪ್ರತಿನಿತ್ಯ ಪತ್ರಿಕೆಗಳನ್ನು ಬಿಡುವಿನ ಸಮಯದಲ್ಲಿ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
    ವಿದ್ಯಾರ್ಥಿಗಳ ಕೊಠಡಿಗಳಿಗೆ ಭೇಟಿ ನೀಡಿದ ಡಿಸಿ ವಿದ್ಯುತ್ ದೀಪಗಳನ್ನು ಬದಲಿಸಿ ಹೊಸದಾಗಿ ಅಳವಡಿಸಬೇಕು ಎಂದು ವಾರ್ಡನ್‌ಗೆ ಸೂಚಿಸಿದರು. ಜತೆಗೆ ಕೊಠಡಿಗಳಲ್ಲಿ ಹಾಸಿಗೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸಮಪರ್ಕವಾಗಿ ಇರುವ ಬಗ್ಗೆ ಸಮಗ್ರ ಪರಿಶೀಲನೆ ನಡೆಸಿದರು. ನಂತರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಹಾಸಿಗೆ ವ್ಯವಸ್ಥೆ, ಔಷಧಗಳ ಲಭ್ಯತೆ ಹಾಗೂ ಆಸ್ಪತ್ರೆಯಲ್ಲಿದ್ದ ರೋಗಿಗಳಿಗೆ ಅಗತ್ಯ ಚಿಕಿತ್ಸೆ ಲಭಿಸುತ್ತಿದೆಯೇ ಎಂಬ ಮಾಹಿತಿ ಪಡೆದರು.
    ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಯೋಗೀಶ್, ಡಿಎಚ್‌ಒ ಅಶ್ವಥ್ ಬಾಬು ಮತ್ತಿತರರಿದ್ದರು.

    See also  ಕರೊನಾ ಮತ್ತು ಭಾರತದ ನಗರಗಳಿಗೆ ಪಾಠ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts