More

    ರಸ್ತೆ, ಸೇತುವೆ ಕಾಮಗಾರಿ ಪರಿಶೀಲಿಸಿದ ಡಿಸಿ

    ಹನೂರು : ಪ್ರಗತಿಯಲ್ಲಿರುವ ರಸ್ತೆ ಹಾಗೂ ಸೇತುವೆ ಅಭಿವೃದ್ಧಿ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವುದರೊಂದಿಗೆ ಶೀಘ್ರವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಪಿಡಬ್ಲ್ಯುಡಿ ಇಇ ಮಹೇಶ್‌ಗೆ ಸೂಚಿಸಿದರು.

    ಹನೂರಿನಿಂದ ಎಲ್ಲೇಮಾಳ ಮಾರ್ಗದಲ್ಲಿ ಪ್ರಗತಿಯಲ್ಲಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.

    ಈ ಮಾರ್ಗವು ಮ.ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು, ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಆದರೆ ಕಾಮಗಾರಿ ವಿಳಂಬ ಗತಿಯಲ್ಲಿ ಸಾಗುತ್ತಿರುವ ಬಗ್ಗೆ ಸಾರ್ವಜನಿಕರು ದೂರಿರುವುದರ ಬಗ್ಗೆ ನಮ್ಮ ಗಮನಕ್ಕೆ ಬಂದಿದೆ. ಹಾಗಾಗಿ ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು. ನಿಗದಿಪಡಿಸಿರುವ ಅವಧಿವರೆಗೆ ಸಮರ್ಪಕ ನಿರ್ವಹಣೆ ಮಾಡಬೇಕು. ಹಾಗೆಯೇ ಈ ಮಾರ್ಗದಲ್ಲಿ ಸ್ಥಗಿತಗೊಂಡಿರುವ ಸೇತುವೆ ನಿರ್ಮಾಣ ಕಾಮಗಾರಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ಸಹಕಾರ ಪಡೆದು ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
    ಅವೈಜ್ಞಾನಿಕ ಕಾಮಗಾರಿ: ಶಾಸಕ ಎಂ.ಆರ್ ಮಂಜುನಾಥ್ ಮಾತನಾಡಿ, ಕೌದಳ್ಳಿ ಗ್ರಾಮದ ಬಳಿ ರಸ್ತೆಬದಿ ನಿರ್ಮಿಸಿರುವ ಚರಂಡಿ ನಿರ್ಮಾಣ ಕಾಮಗಾರಿ ಅವೈಜ್ಞಾನಿಕವಾಗಿದೆ. ಜತೆಗೆ ಸೇತುವೆ ನಿರ್ಮಾಣ ಕಾಮಗಾರಿಯೂ ಸಮರ್ಪಕವಾಗಿಲ್ಲ. ಸರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

    ಉಪ ವಿಭಾಗಾಧಿಕಾರಿ ಮಹೇಶ್, ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಡಿಸಿಎಫ್ ಡಾ.ಸಂತೋಷ್‌ಕುಮಾರ್, ಪಿಡಬ್ಲುೃಡಿ ಎಇಇಗಳಾದ ಪುರುಷೋತ್ತಮ್, ಚಿನ್ನಣ್ಣ, ಎಇ ಮಹೇಶ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts