More

  ಬರ ಪರಿಹಾರ ಹಣ ರೈತರ ಸಾಲಕ್ಕೆ ಕಡಿತಗೊಳಿಸದಂತೆ ಡಿಸಿ ಸೂಚನೆ

  ವಿಜಯಪುರ: ಕರ್ನಾಟಕ ಸರ್ಕಾರ ಜಿಲ್ಲೆಯ ರೈತರಿಗೆ ಬರ ಪರಿಹಾರವಾಗಿ 36010.20 ಲಕ್ಷ ರೂಪಾಯಿ ಬಿಡುಗಡೆ ಮಾಡಿದ್ದು, ಇದು ರೈತರ ಬರ ಪರಿಹಾರ ಹಣವಾಗಿರುವುದರಿಂದ ಯಾವುದೇ ಕಾರಣಕ್ಕೂ ರೈತರ ಸಾಲಗಳಿಗೆ ಈ ಹಣವನ್ನು ಕಡಿತಗೊಳಿಸಬಾರದು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದ್ದಾರೆ.

  ರಾಜ್ಯ ಸರ್ಕಾರದಿಂದ ನೇರವಾಗಿ ರೈತರ ಖಾತೆಗಳಿಗೆ ಬರ ಪರಿಹಾರದ ಹಣ ಬಿಡುಗಡೆ ಮಾಡಿದೆ. ಇದನ್ನು ರೈತರ ಸಾಲದ ಖಾತೆಗೆ ಜಮೆ ಮಾಡಿಕೊಳ್ಳಬಾರದು ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಹಾಗೂ ವಿಜಯಪುರ ಸಹಕಾರ ಸಂಘಗಳ ಇಲಾಖೆಯ ಉಪ ನಿಬಂಧಕರಿಗೆ ಸೂಚಿಸಲಾಗಿದೆ. ಈಗಾಗಲೇ ಮುಂಗಾರು ಆರಂಭವಾಗುತ್ತಿರುವುದರಿಂದ ಬರ ಪರಿಹಾರದ ಹಣ ರೈತರು ಬಿತ್ತನೆ ಬೀಜ, ರಸಗೊಬ್ಬರ, ಹೊಲದ ಉಳುಮೆ, ಬಿತ್ತನೆಗೆ ಸಿದ್ಧಮಾಡಿಕೊಳ್ಳಲು ಸಹಾಯವಾಗುತ್ತದೆ. ಹಾಗಾಗಿ ಬ್ಯಾಂಕ್‌ಗಳು ರೈತರಿಗೆ ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts