ಬೇವಿಂಜದಲ್ಲಿ ಕಾಮಗಾರಿ ವೇಗಕ್ಕೆ ಡಿಸಿ ಸೂಚನೆ

New Project (78)
Published on

ಕಾಸರಗೋಡು: ಬಿರುಸಿನ ಮಳೆಗೆ ಚೆರ್ಕಳ ಸನಿಹ ರಾಷ್ಟ್ರೀಯ ಹೆದ್ದಾರಿ 66 ನಿರ್ಮಾಣ ಸಂದರ್ಭ ಭೂಕುಸಿತದಿಂದಾಗಿ ಸಂಚಾರ ನಿಷೇಧಿಸಲಾಗಿದ್ದ ಬೇವಿಂಜದಲ್ಲಿ ಅಭಿವೃದ್ಧಿ ಕಾರ್ಯವನ್ನು ತಕ್ಷಣ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ನಿರ್ಮಾಣ ಕಂಪನಿಗೆ ಆದೇಶಿಸಿದ್ದಾರೆ.

ಭೂಕುಸಿತದಿಂದ ಹಾನಿಗೀಡಾಗಿರುವ ಪ್ರದೇಶದಲ್ಲಿ ನಡೆಯುತ್ತಿರುವ ಕಾಮಗಾರಿ ಪರಿಶೀಲನೆ ನಡೆಸಲು ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿ, ಕಂಪನಿಗೆ ಸೂಚನೆ ನೀಡಿದ್ದಾರೆ.

ರಕ್ಷಣಾ ತಡೆಗೋಡೆ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲು ಇನ್ನೂ ನಾಲ್ಕು ದಿನಗಳು ಬೇಕಾಗಬಹುದು ಎಂದು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವರದಿ ಸ್ವೀಕರಿಸಿದ ನಂತರ, ಬೇವಿಂಜ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಪುನರಾರಂಭಿಸಲು ಸಾಧ್ಯವಾಗಲಿದ್ದು, ಕಾಮಗಾರಿ ಇನ್ನೂ ನಾಲ್ಕೈದು ದಿನಗಳಲ್ಲಿ ಪೂರ್ತಿಯಾಗಲಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net