More

    ಪೊಲೀಸರ ಸೇವೆ ಶ್ಲಾಘನೀಯ, ಪೊಲೀಸ್ ಹುತಾತ್ಮ ದಿನಾಚರಣೆಯಲ್ಲಿ ಡಿಸಿ ಜಿ.ಜಗದೀಶ್ ಬಣ್ಣನೆ

    ಉಡುಪಿ: ಜಿಲ್ಲೆಯಲ್ಲಿ ಕೋವಿಡ್, ನೆರೆ, ಡ್ರಗ್ಸ್ ವಿರುದ್ಧ ಪೊಲೀಸ್ ಸಿಬ್ಬಂದಿ, ಅಧಿಕಾರಿ ವರ್ಗ ಕೆಚ್ಚೆದೆಯ ಹೋರಾಟ ಮಾಡಿದ್ದಾರೆ. ಸಂದಿಗ್ಧ ಪರಿಸ್ಥಿತಿಯಲ್ಲಿ ಪೊಲೀಸರ ಸೇವೆ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

    ಬುಧವಾರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಚಂದುಮೈದಾನದ ಸಶಸ್ತ್ರ ಪೊಲೀಸ್ ಮೀಸಲು ಪಡೆ ಕೇಂದ್ರಸ್ಥಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಕರೊನಾ ಮಹಾಮಾರಿ ತಡೆಗಟ್ಟಲು, ಲಾಕ್‌ಡೌನ್ ದಿನಗಳಲ್ಲಿ ಪೊಲೀಸರ ಕಾರ್ಯನಿರ್ವಹಣೆ ಅತ್ಯುತ್ತಮವಾಗಿತ್ತು. ನೆರೆ ಸಂದರ್ಭದಲ್ಲಿಯೂ ಸಾರ್ವಜನಿಕರ ರಕ್ಷಣೆಗೆ ಬೇಕಾದ ವ್ಯವಸ್ಥೆ ಮಾಡುವಲ್ಲಿ ಪೊಲೀಸ್ ಇಲಾಖೆ ಶ್ರಮ ಅನನ್ಯವಾಗಿತ್ತು ಎಂದರು.

    ಹುತಾತ್ಮ ಪೊಲೀಸ್ ಪ್ರತಿಮೆಗೆ ಚಕ್ರಪುಷ್ಪ ಗುಚ್ಛ ಸಮರ್ಪಿಸಲಾಯಿತು. ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್.ವಿಷ್ಣುವರ್ಧನ್ ಹುತಾತ್ಮ ದಿನಾಚರಣೆ ಬಗ್ಗೆ ಸಂಕ್ಷಿಪ್ತ ವಿವರಣೆ ನೀಡಿದರು. ಜಿಲ್ಲಾ ಸಶಸ್ತ್ರಮೀಸಲು ಪಡೆ ಪೊಲೀಸ್ ನಿರೀಕ್ಷಕ ಮೂರ್ತಿ.ಎಸ್.ನಾಯ್ಕ ಪರೇಡ್ ನೇತೃತ್ವ ವಹಿಸಿದ್ದರು.

    ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಉಪಸ್ಥಿತರಿದ್ದರು. ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts