More

    ಮಾಸಾಂತ್ಯದಲ್ಲಿ ಫಲಾನುಭವಿಗಳ ಸಮ್ಮೇಳನ: ಡಿಸಿ ಡಾ.ಎಚ್.ಎನ್.ಗೋಪಾಲಕೃಷ್ಣ ಮಾಹಿತಿ

    ಮಂಡ್ಯ: ಜಿಲ್ಲೆಯಲ್ಲಿ ಫಲಾನುಭವಿಗಳ ಸಮ್ಮೇಳನ ನಡೆಸಲು ಸರ್ಕಾರ ನಿರ್ದೇಶನ ನೀಡಿದೆ. ಅದರಂತೆ ಫೆಬ್ರವರಿ ಅಂತ್ಯದೊಳಗೆ ಆಯೋಜಿಸಲು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ತಿಳಿಸಿದರು.
    ನಾಗಮಂಗಲ ತಾಲೂಕು ಕಚೇರಿಯಿಂದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು. ಸರ್ಕಾರದಲ್ಲಿ ಹಲವಾರು ಯೋಜನೆಗಳಿವೆ. ಈ ಪೈಕಿ ಕೆಲ ಯೋಜನೆಗಳಿಗೆ ಗುರಿ ನಿಗದಿಯಾಗಿರುತ್ತದೆ. ನಿಗದಿತ ಯೋಜನೆಗಳಲ್ಲಿ ಇನ್ನೂ ಹೆಚ್ಚಿನ ಅರ್ಹ ಫಲಾನುಭವಿಗಳಿದ್ದರೆ ಪಟ್ಟಿ ಮಾಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದರು.
    ರೈತ ವಿದ್ಯಾನಿಧಿ, ಅಭಾ ಕಾರ್ಡ್, ವಿದ್ಯಾರ್ಥಿವೇತನ ಮುಂತಾದ ಯೋಜನೆಗಳಲ್ಲಿ ಸೌಲಭ್ಯ ಪಡೆಯದೇ ಇರುವ ಹೊಸ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಸೌಲಭ್ಯ ಒದಗಿಸುವುದು ಸಮ್ಮೇಳನದ ಉದ್ದೇಶವಾಗಿದೆ. ಎಲ್ಲ ಇಲಾಖೆಗಳ ಫಲಾನುಭವಿಗಳನ್ನು ಒಟ್ಟಿಗೆ ಸೇರಿಸಿ ಸೌಲಭ್ಯಗಳನ್ನು ವಿತರಿಸಲು ಆಯಾ ಇಲಾಖೆ ಮುಖ್ಯಸ್ಥರು ಯೋಜನೆ ಸಿದ್ಧಪಡಿಸಿ ಶೀಘ್ರವಾಗಿ ಜಿಲ್ಲಾಡಳಿತಕ್ಕೆ ಸಲ್ಲಿಸಿ ಎಂದರು.
    ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಮಾತನಾಡಿ, ಜಿಲ್ಲೆಯಲ್ಲಿ ಕಂದಾಯ ಗ್ರಾಮ ಹಾಗೂ ಹಕ್ಕು ಪತ್ರ ವಿತರಣೆಗೆ ಸಂಬಂಧಿಸಿದಂತೆ 10 ಸಾವಿರ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ವಿವರಿಸಿದರು.
    ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್.ಹುಲ್ಮನಿ, ಉಪಕಾರ್ಯದರ್ಶಿ(ಆಡಳಿತ) ಎಂ.ಬಾಬು, ಮುಡಾ ಆಯುಕ್ತೆ ಐಶ್ವರ್ಯಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್.ಧನಂಜಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕ ನಾಗರಾಜು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಕೃಷ್ಣಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಓಂಪ್ರಕಾಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts