More

    ಅನುದಾನ ಸಂಪೂರ್ಣ ಬಳಕೆಯಾಗಲಿ: ಡಿಸಿ ಡಾ.ಎಚ್.ಎನ್.ಗೋಪಾಲಕೃಷ್ಣ ಸೂಚನೆ

    ಮಂಡ್ಯ: ಸರ್ಕಾರದಿಂದ ವಿವಿಧ ಇಲಾಖೆಗಳಿಗೆ ಬಿಡುಗಡೆಯಾಗಿರುವ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಅನುದಾನವನ್ನು ಶೇ.100ರಷ್ಟು ಸದ್ಭಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಸೂಚನೆ ನೀಡಿದರು.
    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಅನುದಾನವನ್ನು ಆಯಾ ಆರ್ಥಿಕ ವರ್ಷದಲ್ಲೇ ಬಳಕೆ ಮಾಡಬೇಕು. ಅನುದಾನ ಬಳಕೆ ಮಾಡದೇ ವ್ಯರ್ಥವಾದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
    ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದ ಜನಸಂಖ್ಯೆ ಕಡಿಮೆ ಪ್ರಮಾಣದಲ್ಲಿ ಇದ್ದಾರೆ. ಅವರನ್ನು ಗುರುತಿಸಿ ಅರ್ಹರಿಗೆಲ್ಲಾ ಸೌಲಭ್ಯಗಳನ್ನು ತಲುಪಿಸಬೇಕು. ವಿವಿಧ ಅಭಿವೃದ್ಧಿ ನಿಗಮ ಮಂಡಳಿಯಲ್ಲಿ ಸಿಗುವ ಸೌಲಭ್ಯಗಳನ್ನು ಜನಪ್ರತಿನಿಧಿಗಳ ಸಮ್ಮುಖದಲ್ಲಿ ಫಲಾನುಭವಿಗಳನ್ನು ಗುರುತಿಸಿ ಅರ್ಹರಿಗೆ ತಲುಪಿಸುವ ಕೆಲಸವಾಗಬೇಕು ಎಂದರು.
    ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೆಶಕ ಬಿ.ರಂಗೇಗೌಡ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಮಂಜುನಾಥ್, ಕಾರ್ಮಿಕ ಇಲಾಖೆ ಅಧಿಕಾರಿ ಮಂಜುಳಾದೇವಿ, ಲೀಡ್ ಬ್ಯಾಂಕ್ ಮ್ಯಾನೇಜರ್ ದೀಪಕ್, ಡಿಡಿಪಿಯು ಉಮೇಶ್, ಅಂಗವಿಕಲ ಹಾಗೂ ಹಿರಿಯ ನಾಗರಿಕ ಕಲ್ಯಾಣಾಧಿಕಾರಿ ರೋಹಿತ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಕಾವ್ಯಶ್ರೀ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts