More

    ಲಿಂಗತ್ವ ಅಲ್ಪಸಂಖ್ಯಾತರು ಹೆಸರು ನೋಂದಾಯಿಸಿ: ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಸಲಹೆ

    ಮಂಡ್ಯ: ಮುಂಬರುವ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ತಪ್ಪದೆ ಮತದಾನ ಮಾಡಲು ಲಿಂಗತ್ವ ಅಲ್ಪಸಂಖ್ಯಾತರು ಮತದಾನ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಸಲಹೆ ನೀಡಿದರು.
    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಶೋದಯ ಎನ್‌ಜಿಒ ಸಭೆಗಳೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಲಿಂಗತ್ವ ಅಲ್ಪಸಂಖ್ಯಾತರ ಸರ್ವೆ ನಡೆಸಿದ್ದೇವೆ. ಒಟ್ಟು 135 ಲಿಂಗತ್ವ ಅಲ್ಪಸಂಖ್ಯಾತರನ್ನು ಈಗಾಗಲೇ ಮತದಾರರ ಪಟ್ಟಿಯಲ್ಲಿ ಸೇರಿಸಿದ್ದೇವೆ. ಹೊರ ಜಿಲ್ಲೆಯ 3 ಲಿಂಗತ್ವ ಅಲ್ಪಸಂಖ್ಯಾತ ಜಿಲ್ಲೆಯಲ್ಲಿ ಇದ್ದಾರೆಂದು ಎನ್‌ಜಿಒ ಮಾಹಿತಿ ನೀಡಿದ್ದಾರೆ. ಅವರನ್ನು ಕೂಡ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸುವ ಕ್ರಮ ವಹಿಸಿ ಎಂದರು.
    ಎನ್‌ಜಿಒ ಸಂಸ್ಥೆಯವರು ತಮ್ಮ ವ್ಯಾಪ್ತಿಯಲ್ಲಿ ಬರುವ ಲಿಂಗತ್ವ ಅಲ್ಪಸಂಖ್ಯಾತರನ್ನು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಜಿಲ್ಲಾಡಳಿತದೊಂದಿಗೆ ಸಹಕರಿಸಿ. ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳುವುದಕ್ಕೆ ತಿಂಗಳ ಅಂತ್ಯದವರೆಗೆ ಕಾಲಾವಕಾಶವಿದೆ. 18 ವರ್ಷದ ಮೇಲ್ಮಟ್ಟವರು ತಮ್ಮ ಹೆಸರನ್ನು ತಪ್ಪದೆ ಮತದಾರರ ಪಟ್ಟಿಯಲ್ಲಿ ಸೇರಿಸಿ. ಎನ್‌ಜಿಒ ಸಂಸ್ಥೆ ಹಾಗೂ ಮತದಾರರ ನೋಂದಣಿ ಅಧಿಕಾರಿಗಳಿಗೆ ಯಾರಾದಾದರೂ ಹೆಸರು ಬಿಟ್ಟಿದಲ್ಲಿ ಅವರ ಹೆಸರು ಸೇರ್ಪಡೆಗೆ ಕ್ರಮ ತೆಗೆದುಕೊಳ್ಳಬೇಕೆಂದು ನಿರ್ದೇಶನ ನೀಡಿದ್ದೇವೆ ಎಂದು ತಿಳಿಸಿದರು.
    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಉಪವಿಭಾಗಾಧಿಕಾರಿ ಎಚ್.ಎಸ್.ಕೀರ್ತನಾ, ಜಿಲ್ಲಾ ಪಂಚಾಯಿತಿ ಕಾರ್ಯದರ್ಶಿ ಸಂಜೀವಪ್ಪ, ತಹಸೀಲ್ದಾರ್‌ಗಳಾದ ನಿಸರ್ಗಪ್ರಿಯ, ವಿಜಯಕುಮಾರ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಕೃಷ್ಣಕುಮಾರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts