More

    ಸ್ವಚ್ಛತಾಗಾರರು ಆಯುಷ್ಮಾನ್‌ಗೆ ನೋಂದಣಿ ಮಾಡಿಕೊಳ್ಳಿ: ಡಿಸಿ ಡಾ.ಎಚ್.ಎನ್.ಗೋಪಾಲಕೃಷ್ಣ ಸಲಹೆ

    ಮಂಡ್ಯ: ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾಗಾರರು ತಪ್ಪದೇ ಗ್ರಾಮ ಒನ್ ಕೇಂದ್ರದಲ್ಲಿ ಆಯುಷ್ಮಾನ ಆರೋಗ್ಯ ಕಾರ್ಡ್‌ಗೆ ನೋಂದಣಿ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ತಿಳಿಸಿದರು.
    ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಮ್ಯಾನ್ಯುಯಲ್ ಸ್ಕಾೃವೆಂಜರ್ ವೃತ್ತಿ ನಿಷೇಧ ಮತ್ತು ಅವರ ಪುನರ್‌ಕಾಯ್ದೆ ಅನುಷ್ಠಾನಗೊಳಿಸುವ ಸಂಬಂಧ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯಲ್ಲಿ ಮಾತನಾಡಿ, ಆರೋಗ್ಯ ಸಮಸ್ಯೆ ಉಂಟಾದ ಸಂದರ್ಭದಲ್ಲಿ ಆಯುಷ್ಮಾನ್ ಆರೋಗ್ಯ ಯೋಜನೆ ಮೂಲಕ ಸೌಲಭ್ಯ ಪಡೆದುಕೊಳ್ಳಬಹುದು ಎಂದರು.
    ಮಂಡ್ಯ ನಗರದ ಕುರುಬ ಸಮುದಾಯದ ಹಾಸ್ಟೆಲ್ ಹಿಂಭಾಗ ವಿನಾಯಕ ಬಡಾವಣೆಯಲ್ಲಿ ರೈಲ್ವೆ ಇಲಾಖೆಯಿಂದ ಪೌರಕಾರ್ಮಿಕರ ಮನೆ ತೆರವುಗೊಳಿಸಲು ಮುಂದಾಗಿದ್ದು, ಅವರಿಗೆ ಪುನರ್ವಸತಿ ಕಲ್ಪಿಸುವ ಅವಶ್ಯಕತೆ ಇದೆ. ಅಲ್ಲಿ ವಾಸವಿರುವ ಕುಟುಂಬಗಳ ಸರ್ವೇಯನ್ನು ನಗರಸಭೆಯಿಂದ ನಡೆಸಲಾಗಿದ್ದು, ಸ್ಲಂ ಬೋರ್ಡ್‌ನಲ್ಲಿ ಮನೆಗಳಿದ್ದಲ್ಲಿ ಪ್ರಸ್ತಾವನೆ ಸಲ್ಲಿಸಿ ಮಾಹಿತಿ ಪಡೆದುಕೊಳ್ಳಿ ಎಂದರು.
    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್.ಹುಲ್ಮನಿ, ಉಪಕಾರ್ಯದರ್ಶಿ ಸಂಜೀವಪ್ಪ, ಎಸಿ ಕೀರ್ತನಾ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಡಾ.ಸಿದ್ದಲಿಂಗೇಶ್, ಜಿಲ್ಲಾ ಜಾಗೃತ ಸಮಿತಿ ಸದಸ್ಯರಾದ ನಂಜುಂಡ ಮೌರ್ಯ, ಪಾಪಮ್ಮ, ಕೃಷ್ಣ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts