More

    ನಿಯಮ ಉಲ್ಲಂಘಿಸಿದರೆ ಕ್ರಮ ತೆಗೆದುಕೊಳ್ಳಿ: ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಸೂಚನೆ

    ಮಂಡ್ಯ: ಜಿಲ್ಲೆಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ, ರ‌್ಯಾಲಿ, ರಾಜಕೀಯ ಸಭೆ, ಸಮಾರಂಭಗಳು ನಡೆಯುತ್ತಿದೆ. ಆದ್ದರಿಂದ ಚುನಾವಣೆ ಕರ್ತವ್ಯಕ್ಕೆಂದು ನಿಯೋಜಿಸಿರುವ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಕಂಡು ಬಂದಲ್ಲಿ ನಿಯಮಾನುಸಾರ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಸೂಚನೆ ನೀಡಿದರು.
    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚುನಾವಣೆ ಸಂಬಂಧ ಆಯೋಜಿಸಿದ್ದ ವಿಡಿಯೋ ಸಂವಾದಲ್ಲಿ ಮಾತನಾಡಿದರು. ನಾಮಪತ್ರ ಸಲ್ಲಿಕೆ ವೇಳೆ ದೊಡ್ಡ ರ‌್ಯಾಲಿ ಹಾಗೂ ರಾಜಕೀಯ ಸಮಾರಂಭ ನಡೆಯುವ ಸಂದರ್ಭದಲ್ಲಿ ಹೆಚ್ಚಿನ ವಿಎಸ್‌ಟಿ ಹಾಗೂ ಎಫ್‌ಎಸ್‌ಟಿ ತಂಡಗಳನ್ನು ನಿಯೋಜಿಸಿ. ರಾಜಕೀಯ ಪಕ್ಷಗಳಿಗೆ ವಿವಿಧ ಸಭೆ ಸಮಾರಂಭಗಳಿಗೆ ಅನುಮತಿ ನೀಡುವಾಗ ಸುವಿಧಾ ಆ್ಯಪ್ ಮೂಲಕ ನೀಡಬೇಕು. ಅನುಮತಿಯನ್ನು ಕಡ್ಡಾಯವಾಗಿ ಚುನಾವಣಾಧಿಕಾರಿಗಳು ಮಾತ್ರ ನೀಡಬೇಕು ಎಂದು ತಿಳಿಸಿದರು.
    ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಮಾತನಾಡಿ, ಅಂಚೆ ಮತದಾನಕ್ಕೆ ನಮೂನೆ 12 ಡಿ ಅರ್ಜಿಯನ್ನು 80ಕ್ಕಿಂತ ಹೆಚ್ಚಿನ ವಯೋಮಾನ ಮತ್ತು ಅಂಗವಿಕಲರು, ಅಗತ್ಯ ಸೇವಾವಲಯದ ಮತದಾರರು, ಮತಗಟ್ಟೆ ಅಧಿಕಾರಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ವಿಂಗಡಿಸಿ ಮತದಾನಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು. ಮತಗಟ್ಟೆ ಸಿಬ್ಬಂದಿಕ್ಕೆ ಮೇ.2ರಂದು ತರಬೇತಿ ನಡೆಯಲಿದ್ದು, ಆ ಸ್ಥಳದಲ್ಲಿ ಸಿಬ್ಬಂದಿಗೆ ಅಂಚೆ ಮತದಾನಕ್ಕೆ ಅವಕಾಶ ಮಾಡಿಕೊಡಬೇಕು. ಸಂಜೆ 5 ಗಂಟೆ ನಂತರ ಮತದಾನಕ್ಕೆ ಅವಕಾಶವಿರುವುದಿಲ್ಲ. ಮೇ 3, 4, ಮತ್ತು 5 ರಂದು ತಾಲೂಕು ಕಚೇರಿ ಅಥವಾ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಸ್ಥಳ ನಿಗದಿ ಮಾಡಿ ಅಗತ್ಯ ಸೇವಾ ವಲಯ ಹಾಗೂ ತರಬೇತಿಯ ದಿನ ಅಂಚೆ ಮತದಾನ ಮಾಡಲು ಸಾಧ್ಯವಾಗದೇ ಇರುವ ಮತಗಟ್ಟೆ ಸಿಬ್ಬಂದಿಗೆ ಅವಕಾಶ ಮಾಡಿಕೊಡಬೇಕು ಎಂದರು.
    ಮಂಡ್ಯ ಉಪವಿಭಾಗಾಧಿಕಾರಿ ಎಸ್.ಎಚ್.ಕೀರ್ತನಾ, ತಹಸೀಲ್ದಾರ್ ವಿಜಯ್‌ಕುಮಾರ್, ನಗರಸಭಾ ಆಯುಕ್ತ ಆರ್.ಮಂಜುನಾಥ್, ಮುಡಾ ಆಯುಕ್ತೆ ಐಶ್ವರ್ಯಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಎಸ್.ಎಚ್.ನಿರ್ಮಲಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts