More

    ಇಂದ್ರಧನುಷ್ ಅಭಿಯಾನ ಯಶಸ್ಸಿಗೆ ಶ್ರಮಿಸಿ

    ರಾಯಚೂರು
    ದಡಾರ ಮತ್ತು ರುಬೆಲ್ಲಾ ರೋಗ ನಿರ್ಮೂಲನೆಗಾಗಿ ಹಮ್ಮಿಕೊಂಡಿರುವ ಇಂದ್ರಧನುಷ್ 5.0 ಲಸಿಕೆ ಅಭಿಯಾನ ಯಶಸ್ಸಿಗೊಳಿಸುವ ನಿಟ್ಟಿನಲ್ಲಿ ಎಲ್ಲ ಅಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಕಾರಿ ಚಂದ್ರಶೇಖರ ನಾಯಕ ತಿಳಿಸಿದರು.
    ಸ್ಥಳೀಯ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಇಂದ್ರಧನುಷ್ ಟಾಸ್‌‌ಕೆೆರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ಎಲ್ಲ ಸರ್ಕಾರಿ ಆರೋಗ್ಯ ಕೇಂದ್ರಗಳು, ಅಂಗನವಾಡಿ ಕೇಂದ್ರಗಳಲ್ಲಿ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದರು.
    ಸಾರ್ವಜನಿಕರು ತಮ್ಮ ಮನೆಯಲ್ಲಿ 5 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣಿಯರಿಗೆ ಲಸಿಕೆ ಕೊಡಿಸುವ ಮೂಲಕ ದಡಾರ, ರುಬೆಲ್ಲಾ ರೋಗದಿಂದ ದೂರವಿಡಬೇಕು. ಲಸಿಕೆ ಪಡೆಯುವವರು ಆಶಾ ಕಾರ್ಯಕರ್ತೆಯರಿಂದ ಯು-ವಿನ್‌ನಲ್ಲಿ ಮುಂಚಿತವಾಗಿ ನೋಂದಾಯಿಸಿಕೊಳ್ಳಬಹುದಾಗಿದೆ.
    ಆ.7 ರಿಂದ 12ರವರೆಗೆ ಅಭಿಯಾನದ ಮೊದಲನೇ ಹಂತದ ಲಸಿಕಾಕರಣ ಹಮ್ಮಿಕೊಳ್ಳಲಾಗಿದ್ದು, ಸೆ.11 ರಿಂದ 16ರವರೆಗೆ 2ನೇ ಹಂತ, ಅ.9 ರಿಂದ 14ರವರೆಗೆ 3ನೇ ಹಂತದ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅಭಿಯಾನವನ್ನು ಪರಿಣಾಮಕಾರಿಯಾಗಿ ನಡೆಸುವುದು ಪ್ರತಿಯೊಬ್ಬರ ಅಕಾರಿಯ ಜವಾಬ್ದಾರಿಯಾಗಿದೆ. ಲಸಿಕೆಯಿಂದ ತಪ್ಪಿದ ಮಕ್ಕಳು ಮತ್ತು ಗರ್ಭಿಣಿಯರನ್ನು ಗುರುತಿಸಿ ಅವರಿಗೆ ಲಸಿಕೆ ಹಾಕಿಸಬೇಕು ಎಂದು ಚಂದ್ರಶೇಖರ ನಾಯಕ ತಿಳಿಸಿದರು.
    ಈ ಸಂದರ್ಭದಲ್ಲಿ  ಇಂದ್ರಧನುಷ್ ಅಭಿಯಾನದ ಪೋಸ್ಟರ್‌ನ್ನು ಬಿಡುಗಡೆಗೊಳಿಸಲಾಯಿತು. ಸಭೆಯಲ್ಲಿ ಡಿಎಚ್‌ಒ ಡಾ.ಸುರೇಂದ್ರಬಾಬು, ಜಿಲ್ಲಾ ಶಸ ಚಿಕಿತ್ಸಕ ಡಾ.ಎನ್.ವಿಜಯಶಂಕರ, ಆರ್‌ಸಿಎಚ್ ಅಕಾರಿ ಡಾ.ನಂದಿತಾ, ಜಿಲ್ಲಾ ಸರ್ವೇಕ್ಷಣಾಕಾರಿ ಡಾ.ಗಣೇಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೇತನಕುಮಾರ, ಜಿಲ್ಲಾ ಆಯುಷ್ ಅಕಾರಿ ಡಾ.ಶಂಕರಗೌಡ ಪಾಟೀಲ್, ತಾಲೂಕು ಆರೋಗ್ಯಾಕಾರಿ ಡಾ.ಮಹ್ಮದ್ ಶಾಕೀರ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts