More

    ಲಸಿಕಾ ಕಾರ್ಯಕ್ರಮ ಪ್ರಗತಿ ಸಾಧಿಸಬೇಕು

    ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
    ರಾಷ್ಟ್ರೀಯ ರೋಗ ನಿರೋಧಕ ದಿನ ಆಚರಣೆ ಅಂಗವಾಗಿ ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ ಜಿಲ್ಲೆಯಲ್ಲಿ ಶೇ.100 ಪ್ರಗತಿ ಸಾಧಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಅಧಿಕಾರಿಗಳಿಗೆ ಸೂಚಿಸಿದರು.
    ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 2024ನೇ ಸಾಲಿನ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
    ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಾ.3 ರಿಂದ 6 ರ ವರೆಗೆ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ತಾಲೂಕು ಮಟ್ಟದಲ್ಲಿ ಸಭೆಗಳನ್ನು ಕೈಗೊಂಡು ಸಂಬಂಧಪಟ್ಟ ಇಲಾಖೆಗಳ ಸಹಭಾಗಿತ್ವದಲ್ಲಿ ಶೇ.100 ಪ್ರಗತಿ ಸಾಧಿಸುವತ್ತ ಅಧಿಕಾರಿಗಳು ಶ್ರಮಿಸಬೇಕು ಎಂದು ಹೇಳಿದರು. ಕೆಳೆದ ಬಾರಿಗಿಂತ ಈ ಬಾರಿ ಹೆಚ್ಚು ಗ್ರಾಮೀಣ ಪ್ರದೇಶಗಳಲ್ಲಿ ಒತ್ತು ನೀಡಿ ಪ್ರತಿ ಮಗುವಿಗು ಲಸಿಕೆ ತಲುಪುವಂತೆ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
    ಜಿಲ್ಲೆಯಲ್ಲಿನ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಸಹಯೋಗದೊಂದಿಗೆ ಲಸಿಕೆಯನ್ನು ತಲುಪಿಸಬೇಕು ಹಾಗೆಯೇ ಗ್ರಾಮ ಪಂಚಾಯತಿ, ನಗರ ಸಭೆ, ಪುರ ಸಭೆ, ವಿವಿಧ ಇಲಾಖೆಗಳನ್ನು ಒಳಗೊಂಡು ಲಸಿಕಾ ದಿನದ ಪ್ರಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts