ಮಕ್ಕಿ ಕಾ ಮಕ್ಕಿಯಂತೆ‌ ಇರಬೇಡಿ: ಡಿಸಿಗಳಿಗೆ ಸಿಎಂ ಬೊಮ್ಮಾಯಿ‌ ಬೂಸ್ಟರ್ ಡೋಸ್

CM DC meeting
Published on

ಬೆಂಗಳೂರು: ಸದಾ ಗಡಿಯಾರದತ್ತಲೇ ಗಮನವಿಡಬೇಡಿ, ಮನಸ್ಸಿಟ್ಟು‌ ಕೆಲಸ ಮಾಡಿ. ಮಕ್ಕಿ ಕಾ ಮಕ್ಕಿಯಂತೆ ಇರಬೇಡಿ. ಇಂತಹ ಧೋರಣೆಯಿಂದ ಯಾವುದೇ ಪ್ರಯೋಜನವಾಗದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳುವ ಮೂಲಕ ಜಿಲ್ಲಾಧಿಕಾರಿಗಳಿಗೆ ಬೂಸ್ಟರ್ ಡೋಸ್ ನೀಡಿದರು.

ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಭಾನುವಾರ ಕರೆದಿದ್ದ ಡಿಸಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಐದು ವರ್ಷಗಳ ಅವಧಿಯ ಚುನಾಯಿತ ಸರ್ಕಾರದ ಕೊನೆಯ ವರ್ಷವಿದು. ಜಿಲ್ಲಾ ಹಂತದಲ್ಲಿ ಡಿಸಿ, ಸಿಇಒಗಳು ಸರಿಯಾದ ರೀತಿಯಲ್ಲಿ ಕೆಲಸ ಮಾಡಿದರೆ ಸರ್ಕಾರದ ಬಗ್ಗೆ ಒಳ್ಳೆಯ ಅಭಿಪ್ರಾಯಗಳು ರೂಪುಗೊಳ್ಳುತ್ತವೆ. ಅದಕ್ಕಿಂತಲೂ ಮುಖ್ಯವಾಗಿ ದೀನ-ದಲಿತರು, ಜನಸಾಮಾನ್ಯರ ಅಹವಾಲಿಗೆ ಸ್ಪಂದನೆ, ಜನಪರ ಯೋಜನೆಗಳ ಲಾಭ ಫಲಾನುಭವಿಗಳಿಗೆ ಸಕಾಲಕ್ಕೆ ತಲುಪಿಸಬೇಕು ಎಂದು ತಾಕೀತು ಮಾಡಿದರು.

ಗ್ರಾಮ ಒನ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಅನುಷ್ಠಾನ ವಿಳಂಬವಾಗುತ್ತಿದೆ‌ ಎಂದು ಬೊಮ್ಮಾಯಿ‌ ಗರಂ ಆದರಲ್ಲದೆ, ಸಕಾಲ ಯೋಜನೆ ಬಗ್ಗೆ ಉದಾಸೀನತೆ ಎದ್ದು‌ಕಾಣುತ್ತಿದೆ. ಕೆಳ ಹಂತದ ಅಧಿಕಾರಿಗಳು ನೋಡಿಲ್ಲ, ಮಾಡಿಲ್ಲ ಎಂಬ ಸಬೂಬು ಕೇಳುವುದಿಲ್ಲ. ಸಮಯದ ಪರಿವೆಯಿಲ್ಲದೆ ಕೆಲಸ ಮಾಡಿ, ನಿಮಗಾಗದಿದ್ದರೆ ನಿಮ್ಮ ಜಾಗಕ್ಕೆ ಮತ್ತೊಬ್ಬರು ಬರುತ್ತಾರೆ ಹುಷಾರ್ ಎಂದು ಖಡಕ್ ಧ್ವನಿಯಲ್ಲಿ ಎಚ್ಚರಿಸಿದರು ಎಂದು ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net