More

    ವಿದ್ಯಾರ್ಥಿಗಳೊಂದಿಗೆ ಡಿಸಿ ಹೊಸ ವರ್ಷಾಚರಣೆ

    ಚಿಕ್ಕಮಗಳೂರು: ನಗರದ ಎಐಟಿ ಕಾಲೇಜು ರಸ್ತೆಯಲ್ಲಿರುವ ಮೆಟ್ರಿಕ್ ನಂತರದ ಇಂಜಿನಿಯರಿಂಗ್ ವಿದ್ಯಾರ್ಥಿನಿಲಯಕ್ಕೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೋಮವಾರ ರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿ ಹಾಸ್ಟೆಲ್ ವಿದ್ಯಾರ್ಥಿಗಳೊಂದಿಗೆ ಕೇಕ್ ಕತ್ತರಿಸಿ ಹೊಸ ವರ್ಷದ ಶುಭ ಹಾರೈಸಿದರು.

    ನಂತರ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಪುಸ್ತಕಗಳನ್ನು ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು. ವರ್ಷದಲ್ಲಿ ಕನಿಷ್ಠ ಮೂರ್ನಾಲ್ಕು ಪುಸ್ತಕಗಳನ್ನಾದರೂ ಓದಬೇಕು. ಜತೆಗೆ ಕ್ರೀಡೆಯಲ್ಲೂ ಭಾಗವಹಿಸುವಂತೆ ತಿಳಿಸಿದರು.
    ಈ ಹಿಂದೆ ವಿದ್ಯಾರ್ಥಿನಿಲಯದ ಕಟ್ಟಡಗಳು ಉತ್ತಮ ಸ್ಥಿತಿಯಲ್ಲಿ ಇರಲಿಲ್ಲ. ಇತ್ತೀಚೆಗೆ ಸರ್ಕಾರದಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹೊಸ ಕಟ್ಟಡಗಳನ್ನು ನಿರ್ಮಿಸುತ್ತಿದೆ. ಸೌಲಭ್ಯಗಳನ್ನೂ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕೆಂದು ಹೇಳಿದರು.
    ಜಿಪಂ ಸಿಇಒ ಡಾ. ಗೋಪಾಲಕೃಷ್ಣ ಮಾತನಾಡಿ, ಹೊಸ ವರ್ಷದಲ್ಲಿ ಎಲ್ಲ ವಿದ್ಯಾರ್ಥಿಗಳೂ ಗುರಿ ತಲುಪಬೇಕು ಎಂದು ಹೇಳಿದರು.
    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವೈ.ಸೋಮಶೇಖರ್, ಚಿಕ್ಕಮಗಳೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಆರ್.ಬಡಿಗೇರ್, ನಿಲಯ ಮೇಲ್ವಿಚಾರಕರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts