More

    ಹೆಸ್ಕಾಂ ಸಿಬ್ಬಂದಿಗೆ ಎಚ್ಚರಿಕೆಕೊಟ್ಟ ಡಿಸಿ ನಿತೇಶ ಪಾಟೀಲ


    ಬೆಳಗಾವಿ:ಯಾವುದೇ ರೀತಿಯ ವಿದ್ಯುತ್ ದುರ್ಘಟನೆ ಆಗದಂತೆ ಎಚ್ಚರಿಕೆ ವಹಿಸಬೇಕು. ಜಮೀನುಗಳಲ್ಲಿ ವಿದ್ಯುತ್ ತಂತಿ ಹರಿದು ಬಿದ್ದ ಪರಿಣಾಮವಾಗಿ ಕೆಲವೆಡೆ ಜೀವಹಾನಿ ಘಟನೆಗಳು ಮರುಕಳಿಸಬಾರದು ಎಂದು ಹೆಸ್ಕಾಂ ಇಂಜಿನಿಯರ್ ಗಳಿಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಎಚ್ಚರಿಕೆ‌ ನೀಡಿದರು.
    ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು.
    ಪ್ರತಿ ತಾಲ್ಲೂಕಿನಲ್ಲಿ ವಿಪತ್ತು ನಿರ್ವಹಣಾ ಸಭೆಯನ್ನು ನಡೆಸಿ ಮಳೆಗಾಲದಲ್ಲಿ ಎದುರಾಗಬಹುದಾದ ಸಮಸ್ಯೆಗಳ ನಿರ್ವಹಣೆಗೆ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.
    ಬೆಂಗಳೂರಿನಲ್ಲಿ ನಡೆದಂತಹ ದುರ್ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.
    ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಇರುವ ಚರಂಡಿಗಳು, ದೊಡ್ಡ ದೊಡ್ಡ ಗಟಾರುಗಳ ಹೂಳೆತ್ತುವ ಕೆಲಸವನ್ನು ಆದ್ಯತೆ ಮೇರೆಗೆ ಮಾಡಬೇಕು. ನೀರು ಸರಾಗವಾಗಿ ಹರಿದು ಹೋಗುವಂತೆ ಸ್ವಚ್ಛಗೊಳಿಸಬೇಕು.
    ನದಿಯಲ್ಲಿ ಈಜಲು ತೆರಳಿದಾಗ ಪ್ರಾಣಹಾನಿ ಸಂಭವಿಸುತ್ತದೆ. ಆದ್ದರಿಂದ ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು. ಇದಲ್ಲದೇ ನದಿ ಪಾತ್ರದ ಅಪಾಯಕಾರಿ ಸ್ಥಳಗಳ ಬಗ್ಗೆ ಫಲಕ ಅಳವಡಿಸಬೇಕು.
    ಅನೇಕ ಕಡೆ ಮರಗಳು ಉರುಳಿ ಬಿದ್ದು ಪ್ರಾಣಹಾನಿ ಸಂಭವಿಸುತ್ತಿವೆ. ಆದ್ದರಿಂದ ರಸ್ತೆಬದಿಯ ಮರಗಳ ಸ್ಥಿತಿಗತಿಯನ್ನು ಪರಿಶೀಲಿಸಬೇಕು. ಅಗತ್ಯವೆನಿಸಿದರೆ ಅರಣ್ಯ ಇಲಾಖೆಯ ಜತೆಗೂಡಿ ನಿಯಮಾನುಸಾರ ಟೊಂಗೆಗಳನ್ನು ಅಥವಾ ಮರವನ್ನು ತೆರವುಗೊಳಿಸಬೇಕು ಎಂದು ತಿಳಿಸಿದರು.
    ಕುಡಿಯುವ ನೀರಿನ ಕೊರತೆ ಕಂಡುಬಂದರೆ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರರು ಹಾಗೂ ನಗರ ಸ್ಥಳೀಯ ಸಂಸ್ಥೆಗಳ  ಮುಖ್ಯಾಧಿಕಾರಿಗಳಿಗೆ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts