More

    ಬಾಬು ಜಗಜೀವನ ರಾಮ್ ಉತ್ಕೃಷ್ಟ ರಾಷ್ಟ್ರಭಕ್ತ: ಸಚಿವ ಕೆ.ಎಸ್.ಈಶ್ವರಪ್ಪ

    ಶಿವಮೊಗ್ಗ: ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ ರಾಮ್ ಅವರು ದೇಶ ಕಂಡ ಉತ್ಕೃಷ್ಟ ರಾಷ್ಟ್ರಭಕ್ತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅಭಿಪ್ರಾಯಪಟ್ಟರು.
    ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಸೋಮವಾರ ಡಾ. ಬಾಬು ಜಗಜೀವನ ರಾಮ್ ಅವರ 114ನೇ ಜಯಂತಿ ಉದ್ಘಾಟಿಸಿ ಮಾತನಾಡಿದರು.
    ತಮ್ಮ ಜೀವಿತಾವಧಿಯಲ್ಲಿ ಜಗಜೀವನ್ ರಾಮ್ ಅವರು ಭಾರತದ ರಾಜಕೀಯ ವ್ಯವಸ್ಥೆಯಲ್ಲಿ ಹೊಸ ಅಲೆ ಎಬ್ಬಿಸಿದ್ದರು. ಅವರು ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ವಲಯಕ್ಕೆ ನೀಡಿದ ಕೊಡುಗೆ ಅಪಾರ. ಅಂತಹ ಧೀಮಂತ ನಾಯಕನ ಆದರ್ಶಗಳನ್ನು ರಾಜಕೀಯ ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದ್ದೇ ಆದಲ್ಲಿ ಜೀವನ ಸಾರ್ಥಕವಾಗುತ್ತದೆ ಎಂದು ಹೇಳಿದರು.
    ಬಾಬೂಜಿ ಎಂದೇ ಖ್ಯಾತರಾದ ಜಗಜೀವನ ರಾಮ್ ಸ್ವಾತಂತ್ರ ಹೋರಾಟಗಾರರಷ್ಟೇ ಅಲ್ಲದೆ, ಸಮಾಜ ಸೇವಕರೂ ಆಗಿದ್ದರು. ಬಿಹಾರದ ದಲಿತ ಕುಟುಂಬದಲ್ಲಿ ಜನಿಸಿದ ಅವರು ಪ್ರಧಾನಿ ಜವಾಹರ್‌ಲಾಲ್ ನೆಹರು ಅವರ ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು. ಮೊರಾರ್ಜಿ ದೇಸಾಯಿ ಅವರ ಕಾಲದಲ್ಲಿ ಉಪ ಪ್ರಧಾನಿ ಆಗಿದ್ದರು. ಅಸ್ಪಶ್ಯತೆ ನಿವಾರಣೆ ಹೋರಾಟದ ಮಹಾನ್ ದಲಿತ ನಾಯಕರಾಗಿದ್ದರು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts