More

    ಡಿಸಿ ಕಚೇರಿ ಎದುರು ಬೆಲೆ ಸ್ವಾತಂತ್ರ್ಯದ ಚಳವಳಿ

    ಶಿವಮೊಗ್ಗ: ರೈತರ ಉತ್ಪನ್ನಗಳಿಗೂ ಬೆಲೆ ಭದ್ರತೆ ಕಾಯ್ದೆ ಜಾರಿಗೊಳಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆಯಿಂದ ರೈತರು ಶುಕ್ರವಾರ ಡಿಸಿ ಕಚೇರಿ ಎದುರು ಬೆಲೆ ಸ್ವಾತಂತ್ರ್ಯದ ಚಳವಳಿ ನಡೆಸಿದರು.
    ರೈತ ಸಂಘದ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ ನೇತೃತ್ವದಲ್ಲಿ ಚಳುವಳಿ ನಡೆಸಿದ ರೈತರು, ಸ್ವಾಮಿನಾಥನ್ ವರದಿ ಅಥವಾ ಕೃಷಿ ಬೆಲೆ ಆಯೋಗದ ವರದಿಯಂತೆ ರೈತರ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ಸಿಗಬೇಕಿದೆ. ಕೃಷಿ ಬೆಲೆ ಆಯೋಗದ ಮಾರ್ಗದರ್ಶಿಯಲ್ಲಿಯೇ ಬೆಲೆ ಭದ್ರತೆ ಕಾಯ್ದೆ ಬೇಕಿದೆ ಎಂದು ಒತ್ತಾಯಿಸಿದರು.
    ಬೆಲೆ ಭದ್ರತೆ ಕಾಯ್ದೆಯು ಸಿ2 ಪ್ಲಸ್ 50 ಹಾಗೂ ಕರ್ನಾಟಕ ಕೃಷಿ ಬೆಲೆ ಆಯೋಗದ ಮಾರ್ಗಸೂಚಿ ಸೂತ್ರಗಳ ಅಡಿಯಲ್ಲಿರಬೇಕು. ಇಲ್ಲಿವರೆಗೂ ಬೆಲೆ ಮೋಸದಿಂದ ರೈತರ ಮೇಲೆ ಬಂದಿರುವ ಎಲ್ಲ ಸಾಲಗಳ ಹೊಣೆಗಾರಿಕೆಯನ್ನು ಸರ್ಕಾರಗಳೇ ಹೊರಬೇಕು ಎಂದು ಆಗ್ರಹಿಸಿದರು.
    ಸಂಘದ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ, ಉಪಾಧ್ಯಕ್ಷರಾದ ಹಿಟ್ಟೂರು ರಾಜು, ಟಿ.ಎಂ.ಚಂದ್ರಪ್ಪ, ಜಿಲ್ಲಾಧ್ಯಕ್ಷ ಎಸ್.ಶಿವಮೂರ್ತಿ, ಕೋಶಾಧ್ಯಕ್ಷ ಕೆ. ರಾಘವೇಂದ್ರ, ಗ್ರಾಮಾಂತರ ಅಧ್ಯಕ್ಷ ಕಸಟ್ಟಿ ರುದ್ರೇಶ್, ಶಿವಮೊಗ್ಗ ತಾಲೂಕು ಅಧ್ಯಕ್ಷ ಸಿ.ಚಂದ್ರಪ್ಪ, ಎಂ.ಮಂಜಪ್ಪ, ಪಾಲಾಕ್ಷಪ್ಪ, ಪಿ.ಡಿ.ಮಂಜಪ್ಪ, ಡಿ.ಎಚ್.ರಾಮಚಂದ್ರಪ್ಪ, ಜ್ಞಾನೇಶ್, ಜಿ.ಎನ್.ಪಂಚಾಕ್ಷರಿ ಮತ್ತಿತರರು ಪ್ರತಿಭಟನೆಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts