More

    ವೈದ್ಯರು, ನರ್ಸ ಹಾಗೂ ಸಿಬ್ಬಂದಿಗಳಿಗೆ ಸಾಮಥ್ರ್ಯಾಭಿವೃದ್ಧಿ ಕಾರ್ಯಾಗಾರ

    ಗದಗ: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು, ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳು, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಗದಗ ಇವರ ಸಹಯೋಗದಲಿ ್ಲ ಸೋಮವಾರದಂದು ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ-2015 ಹಾಗೂ ದತ್ತು ಮಾರ್ಗಸೂಚಿಗಳು  ವೈದ್ಯರು, ನರ್ಸ ಹಾಗೂ ಸಿಬ್ಬಂದಿಗಳಿಗೆ ಸಾಮಥ್ರ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು  ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ  ಹಮ್ಮಿಕೊಳ್ಳಲಾಯಿತು.

    ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಫೀಕಾ ಹಳ್ಳೂರ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ-2015 ಹಾಗೂ ದತ್ತು ಮಾರ್ಗಸೂಚಿಗಳು ಕುರಿತು ವೈದ್ಯರು, ನರ್ಸ ಹಾಗೂ ಸಿಬ್ಬಂದಿಗಳಿಗೆ ಸಾಮಥ್ರ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಾಹಿತಿ ನೀಡಲು ಉತ್ತಮವಾದ ಸಂಪನ್ಮೂಲ ವ್ಯಕ್ತಿಗಳು ಬಂದಿದ್ದು ಅವರೊಂದಿಗೆ ಮಾಹಿತಿ ಪಡೆದು ತಾವು ಕೂಡಾ ಕಾಯ್ದೆಗಳನ್ನು ಚರ್ಚಿಸುವುದು ಮುಖ್ಯವಾಗಿದೆ  ಎಂದು ತಿಳಿಸಿದರು.

    ಜಿ.ಸಿ ರೇಶ್ಮಿ ಇವರು ಪೊಕ್ಸೋ ಕಾಯ್ದೆ, ಬಾಲ್ಯವಿವಾಹ ನಿಷೇದ ಕಾಯ್ದೆ ಕುರಿತು ಹಾಗೂ ಸಿಸ್ಟರ್ ಡುಲ್ಸಿನ್, ಬಾಲನ್ಯಾಯ ಕಾಯ್ದೆ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ , ದತ್ತು ಮಾರ್ಗಸೂಚಿ  ಕುರಿತು ಉಪನ್ಯಾಸ ನೀಡಿದರು.

    ಕಾರ್ಯಕ್ರಮದಲ್ಲಿ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ,     ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಿಬ್ಬಂದಿ ವರ್ಗದವರು ಹಾಜರಿದ್ದರು .  ಮಲ್ಲಪ್ಪ ಹೊಸಳ್ಳಿ  ಕಾರ್ಯಕ್ರಮ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts