More

    ಮತದಾನಕ್ಕೆ ಈ 12 ದಾಖಲೆಗಳು ಅರ್ಹ

    ಹಾವೇರಿ: ವಿಧಾನಸಭೆ ಚುನಾವಣೆಯ ಮತದಾನ ಮೇ 10ರಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ನಡೆಯಲಿದ್ದು, ಮತದಾರರು ಚುನಾವಣೆ ಆಯೋಗ ನೀಡುರುವ ಗುರುತಿನ ಚೀಟಿ ಅಥವಾ ಯೋಗ ಸೂಚಿಸಿರುವ ಈ ಕೆಳಗಿನ 12 ದಾಖಲೆಗಳ ಪೈಕಿ ಯಾವುದಾದರೊಂದನ್ನು ತೋರಿಸಿ ಮತದಾನ ಮಾಡಬಹುದು.
    ಮತದಾರರ ಪಟ್ಟಿಯಲ್ಲಿ ಹೆಸರಿದ್ದು, ಮತದಾರರ ಗುರುತಿನ ಚೀಟಿ ಇಲ್ಲವಾದಲ್ಲಿ ಪರ್ಯಾಯವಾಗಿ ಆಧಾರ್ ಕಾರ್ಡ್, ನರೇಗಾ ಜಾಬ್ ಕಾರ್ಡ್, ಬ್ಯಾಂಕ್/ಪೋಸ್ಟ್ ಆಫೀಸ್ ಭಾವಚಿತ್ರವಿರುವ ಪಾಸ್ ಪುಸ್ತಕ, ಆರೋಗ್ಯ ವಿಮೆ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಆರ್.ಜಿ.ಐ. ಅಡಿಯಲ್ಲಿನ ಎನ್.ಪಿ.ಆರ್. ನೀಡಿರುವ ಸ್ಮಾರ್ಟ್ ಕಾರ್ಡ್, ಇಂಡಿಯನ್ ಪಾಸ್‌ಪೋರ್ಟ್, ಭಾವವಿತ್ರವಿರುವ ನಿವೃತ್ತಿ ವೇತನ ದಾಖಲೆ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸೇವೆಯ ಭಾವಚಿತ್ರ ಹೊಂದಿರುವ ಸೇವಾ ಗುರುತಿನ ಚೀಟಿ, ಎಂ.ಪಿ., ಎಂ.ಎಲ್.ಎ., ಎಂ.ಎಲ್.ಸಿ.ಗಳಿಗೆ ನೀಡಿರುವ ಗುರುತಿನ ಚೀಟಿ ಹಾಗೂ ವಿಕಲಚೇತನರ ಯುಡಿಐಡಿ ಕಾರ್ಡ್ ಗುರುತಿನ ಚೀಟಿಯಾಗಿ ಬಳಸಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts