More

    ರಾಜಕೀಯ ಚಟುವಟಿಕೆಗೆ ಅನುಮತಿ ಕಡ್ಡಾಯ

    ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
    ಲೋಕಸಭಾ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಚುನಾವಣಾ ಆಯೋಗವೂ ಅಂತರ್ಜಾಲ ತಾಣ ಸೇವೆ ಕಲ್ಪಿಸಿದ್ದು, ರಾಜಕೀಯ ಪಕ್ಷ ಹಾಗೂ ಅಭ್ಯರ್ಥಿಗಳು ಇದರ ಸದುಪಯೋಗ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ತಿಳಿಸಿದರು.
    ದೇವನಹಳ್ಳಿಯ ಡಿಸಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತರ್ಜಾಲ ತಾಣದಲ್ಲಿ ರಾಜಕೀಯ ಪಕ್ಷದವರು ಚುನಾವಣೆಯಲ್ಲಿ ಪಕ್ಷದಿಂದ ಚುನಾವಣಾ ಪ್ರಚಾರಕ್ಕಾಗಿ ಹಾಗೂ ವಾಹನಗಳಿಗೆ ವಿವಿಧ ರೀತಿಯ ಅನುಮತಿಯನ್ನು ಸುಲಭವಾಗಿ ಪಡೆಯಬಹುದು. ಈ ಅಂತರ್ಜಾಲ ತಾಣ(ಛಿಚಿಜಿಠಿಛಿ)ವನ್ನು ಭೇಟಿ ನೀಡಿ ಅನುಮತಿಗಾಗಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.

    ಮುದ್ರಿತ ಪ್ರತಿ ಕಡ್ಡಾಯ
    ಜಿಲ್ಲೆಯ ಮುದ್ರಣಾಲಯಗಳ ಮಾಲೀಕರು, ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ರಾಜಕೀಯ ಪಕ್ಷಗಳು ಜಾಹೀರಾತಿಗಾಗಿ ಮುದ್ರಿಸುವ ಕರಪತ್ರ ಹಾಗೂ ಇನ್ನಿತರ ಮಾಹಿತಿಯ ಪ್ರತಿಗಳನ್ನು ಮುದ್ರಿಸುವಾಗ ಕಡ್ಡಾಯವಾಗಿ ಪ್ರಿಂಟಿಂಗ್ ಪ್ರೆಸ್ ಹೆಸರು ಮತ್ತು ಪ್ರತಿಗಳ ಸಂಖ್ಯೆ ನಮೂದಿಸಬೇಕು ಹಾಗೂ ಮುದ್ರಿಸಲಾದ ಚುನಾವಣಾ ಸಾಮಗ್ರಿಯ ಒಂದು ಪ್ರತಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳಿಂದ ನೇಮಕ ಮಾಡಿರುವ ಎಂಸಿಎಂಸಿ ಅಧಿಕಾರಿಗಳ ತಂಡಕ್ಕೆ ಆಯಾ ದಿನದಂದೇ ನೀಡಬೇಕು ಎಂದು ಡಿಸಿ ಸೂಚಿಸಿದರು.

    ನಿಯಮಾನುಸಾರ ಕ್ರಮ
    ಚುನಾವಣಾ ಪ್ರಚಾರಕ್ಕಾಗಿ ಎಸ್‌ಎಂಎಸ್ ಕಳುಹಿಸಲು ಪೂರ್ವಾನುಮತಿ ಕಡ್ಡಾಯ. ಯಾವುದೇ ರಾಜಕೀಯ ಪಕ್ಷದಿಂದ ಚುನಾವಣಾ ಪ್ರಚಾರಕ್ಕಾಗಿ ಮೊಬೈಲ್ ಸರ್ವೀಸ್ ಮೂಲಕ ಕಳುಹಿಸುವ ಎಲ್ಲ ತರಹದ ಬಲ್ಕ್ ಎಸ್‌ಎಂಎಸ್ ವಿಷಯವನ್ನು ಸಂಬಂಧಿಸಿದ ಜಿಲ್ಲಾಮಟ್ಟದ ಎಂಸಿಎಂಸಿ ತಂಡದಿಂದ ಪರಿಶೀಲನೆಯಾಗಿ ಜಿಲ್ಲಾ ಚುನಾವಣಾಧಿಕಾರಿಗಳ ಪೂರ್ವಾನುಮೋದನೆ ಪಡೆದು, ನಂತರದಲ್ಲಿ ಮೊಬೈಲ್ ಮೂಲಕ ಪ್ರಚಾರ ಕೈಗೊಳ್ಳಬೇಕು. ತಪ್ಪಿದಲ್ಲಿ ಚುನಾವಣಾ ನಿಯಮಗಳಡಿ ಕ್ರಮ ವಹಿಸಲಾಗುವುದು ಎಂದು ಡಿಸಿ ಎಚ್ಚರಿಕೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts